ರಾಜ್ಯ
ಮೈಸೂರು ಐವರು ಅತ್ಯಾಚಾರ ಆರೋಪಿಗಳ ಬಂಧನ
ಬೆಂಗಳೂರು, ಆ,೨೮: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿನಡೆದಿದ್ದ, ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಘಟನೆ ನಡೆದ ಐದು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಘಟಮಾ ಸ್ಥಳದಲ್ಲಿ ತಮಿಳುನಾಡು ಬಸ್ಟಿಕೆಟ್ ದೊರೆತ ಹಿನ್ನೆಯಲ್ಲಿ ಅದೇ ಜಾಡು ಹಿಡಿದು ತನಿಖಾ ತಂಡ ಈ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು.…