ರಾಜ್ಯ
ಡಿಸೆಂಬರ್ ವರೆಗೂ ಜಿ.ಪಂ.ತಾಲೂಕು ಪಂಚಾಯ್ತಿ ಚುನಾವಣೆ ಇಲ್ಲ
ಬೆಂಗಳೂರು,ಜು,15:ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿ ಗೋಷ್ಠಿಯಲ್ಲಿ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯಗಳ ಕುರಿತು ವಿವರ ನೀಡಿದರು. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ…