ರಾಜ್ಯ
ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ
ಬೆಂಗಳೂರು, ಆ,06:ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದಲ್ಲದೆ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು ಇಂದು ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ “ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ” ಎಂಬ ವಿಷಯದ ಕುರಿತ ವೆಬಿನಾರ್ ಅನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ವಚನ, ದಾಸ ಸಾಹಿತ್ಯ…