Browsing: ರಾಜ್ಯ

ರಾಜ್ಯ

ಮೇಕೆದಾಟು ಯೋಜನೆ,ಸರ್ವಪಕ್ಷ ಸಭೆ ಅನಿವಾರ್ಯ-ಎಂ.ಬಿ.ಪಾಟೀಲ್

ವಿಜಯಪುರ,ಜು,೧೩: ಮೇಕೆ ದಾಟು ಯೋಜನೆಗೆ ತಮಿಳು ಸರ್ಕಾರದ ಅಗತ್ಯವಿಲ್ಲ ಎಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಸಭೆ ಕರೆದು ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಅನಿವಾರ್ಯತೆ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು. ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.…

ಮೇಕೆದಾಟು ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್?

ಬೆಂಗಳೂರು, ಜು. ೧೩: ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಯಾವುದೇ ನಿರ್ಧಾರ ತಗೆದುಕೊಂಡಿದ್ದರೂ ಕೇಂದ್ರ ಸರ್ಕಾರ ತಮ್ಮದೆ ನಿರ್ಧಾರವನ್ನು ತಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ದಾಟಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್ ಮಿಷನ್ ಯೋಜನೆ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆದಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ…

ರಸ್ತೆಗೆ ಟೊಮೊಟೊ ಸುರಿದು ಪ್ರತಿಭಟನೆ

ರಾಮನಗರ ಜು 13: ಬೆಲೆ ಕುಸಿತದಿಂದ ಕಂಗೆಟ್ಟ ರೈತರು ರಾಮನಗರದ ಎಂಪಿಎಂಸಿ ಬಳಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮೊಟೊ ಸುರಿದು ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ನಗರದ ಎಪಿಎಂಸಿ ಎದುರು ಬೆಂಗಳೂರು ಮೈಸೂರು ರಾಷ್ಟ್ರೀಯ ತಡೆದ ರೈತರು ತಾವು ಬೆಳೆದ ಟೊಮೊಟೊವನ್ನು ರಸ್ತೆ ಸುರಿದ ಕೇಂದ್ರ ಹಾಗೂ ರಾಜ್ಯ ಸರಕಾಗಳ ವಿರುದ್ಧ ಧಿಕ್ಕಾರ ಕೂಗಿದರು. ಬೆಳೆ ಇಳಿಕೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಪಟ್ಟಣದ ರೈತ ಸುಜೀವನ್ ಕುಮಾರ್ ಮಾತನಾಡಿ,…

ಡಾ ಆರೂಢಭಾರತೀ ಸ್ವಾಮೀಜಿಗಳಿಂದ ಡಾ ವೀರೇಂದ್ರ ಹೆಗ್ಗಡೆ ಭೇಟಿ.

ಧರ್ಮಸ್ಥಳ, ಜು,13:ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಅಂತಾರಾಷ್ಟ್ರೀಯ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಸಂಸ್ಕೃತ ಗುರುಕುಲದ ಬಗ್ಗೆ ಹಾಗೂ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿದ್ಧಸೂಕ್ತಿಯ ಮೊದಲ ಭಾಗವನ್ನು ಅರ್ಪಿಸಲಾಯಿತು. ಡಾ ವೀರೇಂದ್ರ ಹೆಗ್ಗಡೆ ಅವರು ಡಾ ಆರೂಢಭಾರತೀ ಸ್ವಾಮೀಜಿಯವರ ಕಾರ್ಯಚಟುವಟಿಕೆಗಳ ಬಗ್ಗೆ…

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ

ಬೆಂಗಳೂರು,ಜು,12:ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು. 2021- 22 ನೇ ಸಾಲಿಗೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ ಮುಂದುವರಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು, ಬಾಡ ಗ್ರಾಮದಲ್ಲಿ ಸಂಗೀತ ಕಾರಂಜಿ ಹಾಗೂ ಕನಕದಾಸರ ಅರಮನೆಯ ದರ್ಬಾರ್ ಹಾಲ್…

ಎಸ್ಸೆಸ್ಸೆಲ್ಸಿ: ಭರವಸೆ ಮೂಡಿಸಿದ ತೀರ್ಪು-ಸುರೇಶ್ ಕುಮಾರ್

ಬೆಂಗಳೂರು,ಜು,12: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ…

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ

ಚಿಕ್ಕಮಗಳೂರು,ಜು,12: ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ(43) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ಚಿಕ್ಕಮಗಳೂರಿನ ಗೋಣಿಬೀಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ…

ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

ಹುಬ್ಬಳ್ಳಿ,ಜು,೧೨: ಇಲ್ಲಿನ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್‌ನಾರಾಯಣ ಅವರು ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು ಹುಬ್ಬಳ್ಳಿ ಪ್ರವಾಸದಲ್ಲಿರುವ ಅವರು ಇಲ್ಲಿನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ…

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಪ್ರಮಾಣ ವಚನ

ಬೆಂಗಳೂರು, ಜು, 11:ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇóಷ ಸಮಾರಂಭದಲ್ಲಿ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ನೂತನ ರಾಜ್ಯಪಾಲರು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್.…

ಬ್ಯಾರೇಜ್ ನಿರ್ಮಾಣಕ್ಕೆ ಭೂಮಿ ಪೂಜೆ

ಹುಬ್ಬಳ್ಳಿ ,ಜು.11: ಸಣ್ಣ ನೀರಾವರಿ ಇಲಾಖೆ ವತಿಯಿಂದ 94 ಲಕ್ಷ ರೂಪಾಯಿ ವೆಚ್ಚದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಸುಳ್ಳ ರಸ್ತೆಯಲ್ಲಿನ ಹಳ್ಳದ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು.ಬ್ಯಾರೇಜ್ ನಿರ್ಮಾಣದಿಂದ ಸುತ್ತಮುತ್ತಲಿನ ಸುಮಾರು 74 ಎಕರೆ ಕೃಷಿ ಭೂಮಿಗೆ ನೀರು ಲಭಿಸಲಿದೆ. ಸ್ಥಳೀಯ ರೈತರು ಹಳ್ಳವನ್ನು ಹಾದು ಹೊಲಗಳಿಗೆ ತೆರಳಲು ರಸ್ತೆಯ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ…

ಇಂಡಿ ತಾಲೂಕಿನ 23 ಕೆರಗಳ ತುಂಬಿಸುವ ಯೋಜನೆಗೆ ಅನುದಾನ ನೀಡಲು ಎಂ.ಬಿ ಪಾಟೀಲ್ ಮನವಿ

ಬೆಂಗಳೂರು,ಜು0 9. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ವಿನಂತಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಚರ್ಚಿಸಿದ ಎಂ.ಬಿ.ಪಾಟೀಲ್‍ರವರು ಭೀಮಾನದಿ ಪಾತ್ರದಲ್ಲಿ ನೀರಿನ ಕೊರತೆಯ ಕಾರಣ ಇಂಡಿ ಭಾಗದ ಕೆಲವು ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸಲಾಗಿಲ್ಲ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೃಷ್ಣಾ ನದಿ ನೀರನ್ನು ಎತ್ತಿ, ಭೀಮಾ ಭಾಗದ ಈ ಹಳ್ಳಿಗಳಿಗೆ…

ನದಿ ಶುದ್ಧೀಕರಣಕ್ಕೆ 1500 ಕೋಟಿ: ಸಿ.ಪಿ ಯೋಗೇಶ್ವರ್

ರಾಮನಗರ ಜು 09: ವೃಷಬಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500.00 ಕೋಟಿಗಳ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿ ಕೃಷಿಗೆ ಹಾಗೂ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಟಾನಗೊಳಿಸುವುದಾಗಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ರವರು ಬಿಡದಿಯ ಈಗಲ್ಟನ್ ರೆಸಾರ್ಟನಲ್ಲಿ ನಡೆದ ಮಾಧ್ಯಮ ಗೋಷ್ಟಿಯಲ್ಲಿ ತಿಳಿಸಿದರು. ಸಚಿವ ಯೋಗೇಶ್ವವರ ರವರು ಇಂದು ಬೆಳಿಗ್ಗೆ ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಗಾಳಿ ಆಂಜನೇಯ ದೇವಾಲಯದಿಂದ ಬಿಡದಿಯ ಬೈರಮಂಗಲ ಕೆರೆಯವರೆಗೂ ವೃಷಬಾವತಿ ನದಿಯನ್ನು…

ಸರ್ಕಾರಿ ಶಾಲೆಯಲ್ಲಿ ಹೆಚ್ಚುತ್ತಿರುವ ದಾಖಲಾತಿ- ಸುರೇಶ್ ಕುಮಾರ್ ಸಂತಸ

ಬೆಂಗಳೂರು,ಜು,08: ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನೆಲಗದೇರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ಭೇಟಿ ನೀಡಿ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಅತ್ಯಂತ ಗುಣಮಟ್ಟದ ಶಿಕ್ಷಣ …

ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿದ ಸಿಎಂ

ಬೆಂಗಳೂರು ಜು, 7: ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಿಎಸ್ಆರ್ ನಿಧಿಯಡಿ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿಸಿರುವುದು ರಾಜ್ಯದಲ್ಲಿಯೇ ಪ್ರಥಮ ಹಾಗೂ ವಿನೂತನವಾಗಿದ್ದು, ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದಲ್ಲಿಯೇ ಅತಿ ಶೀಘ್ರವಾಗಿ ನಿರ್ಮಾಣಗೊಂಡ ಮೊದಲ ಮೇಕ್ ಶಿಫ್ಟ್ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 70 ಬೆಡ್…

ಇಂದಿನಿಂದ ರಾಜ್ಯಾದ್ಯಂತ ಅನ್ ಲಾಕ್

ಬೆಂಗಳೂರು,05: ರಾಜ್ಯದಲ್ಲಿ ಕೊರೊನಾ ಕೊಂಚ ರಿಲೀಫ್​ ನೀಡಿದ್ದ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ನಿಯಮಗಳನ್ನು ಜಾರಿಗೆ ತಂದಿತ್ತು. ಇದೀಗ ಜುಲೈ 5 ರಿಂದ ಅನ್​ಲಾಕ್​ 3.0 ಮಾಡಲು ಹೊರಟಿರುವ ಸರ್ಕಾರ ಕೆಲವು ನಿರ್ಭಂದಗಳೊಂದಿಗೆ ಅನ್​ಲಾಕ್​ ಘೋಷಣೆ ಮಾಡಿದೆ. ಅದರಂತೆ ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿವೆ. ಈ ಅವಕಾಶ ಅಥವಾ ಅನುಮತಿ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ…

ಎಸ್.ಎಸ್.ಎಲ್.ಸಿ.ಪರೀಕ್ಷೆ ನಡೆಯಬಾರದು; ವಿಶ್ವನಾಥ್

ಮೈಸೂರು, ಜು,೦4: ಎಸ್ ಎಸ್ ಎಲ್ ಸಿ‌ ಪರೀಕ್ಷೆ ಯಾವುದೇ ಕಾರಣಕ್ಕೂ ನಡೆಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಅಕ್ಷರ ,ಆರೋಗ್ಯ ಚೆನ್ನಾಗಿದ್ದರೆ ಆಡಳಿತ ಚೆನ್ನಾಗಿರುತ್ತದೆ. ಮಗುವಿನ ಆರೋಗ್ಯ ಸುರಕ್ಷತೆ ಈಗ ಮುಖ್ಯ ನಂತರ ಶಿಕ್ಷಣ. ಇದನ್ನು ಅರ್ಥ ಮಾಡಿಕೊಳ್ಳದಿದ್ದರೆ ದೊಡ್ಡ ಅನಾಹುತವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು, ಎಚ್ಚರಿಸಿದರು. ಪಿಯುಸಿ ಪರಿಕ್ಷೆ ಬೇಡ ಅಂತಾ ಹೇಳಲಾಗಿದೆ. ಶಿಕ್ಷಣ ಸಮಿತಿಯ ವರದಿ ಏನು‌ ಹೇಳಿದೆ ? ನೀವು ಆರೋಗ್ಯ ಇಲಾಖೆಯ ಸಲಹೆ ತೆಗೆದುಕೊಂಡಿದ್ದೀರಾ ?…

ಸುಧೀಂದ್ರಹಾಲ್ದೊಡ್ಡೇರಿ ಇನ್ನೂ ನೆನಪು

ವಿಜ್ಞಾನಿ ಮತ್ತು ವಿಜ್ಞಾನ ವಿಷಯಗಳ ಅತ್ಯುತ್ತಮ ಕನ್ನಡದ ಸಮಕಾಲೀನ ಬರಹಗಾರರಾಗಿದ್ದ ಹಾಲದೊಡ್ಡೇರಿ ಸುಧೀಂದ್ರ ಇಂದು ನಮ್ಮನ್ನು ಅಗಲಿದ್ದಾರೆ. ಇಂದಿನ ಮಾಧ್ಯಮದ ಓದುಗರಿಗೆ ಮತ್ತು ವೀಕ್ಷಕರಿಗೆ ಭಾರತೀಯ ವಿಜ್ಞಾನದ ಸಾಧನೆ ಮತ್ತು ಪ್ರಯೋಗಗಳನ್ನು ಪರಿಚಯಿಸಲು ಸುಧೀಂದ್ರ ವಹಿಸುತ್ತಿದ್ದ ಆಸಕ್ತಿ, ಶ್ರದ್ಧೆ ಮತ್ತು ಅಧ್ಯಯನ ಅಸಾಧಾರಣವಾಗಿತ್ತು. ಸುಧೀಂದ್ರ ಹಾಲ್ದೊಡ್ಡೇರಿ 1961ರ ಡಿಸೆಂಬರ್ 3ರಂದು ಜನಿಸಿದರು. ಕನ್ನಡ ಪತ್ರಕರ್ತ ದಿವಂಗತ ನಾಗೇಶರಾಯರು ಇವರ ತಂದೆ. ಸುಧೀಂದ್ರ ಹಾಲ್ದೊಡ್ಡೇರಿ ತಂದೆಯವರು ಮನೆಗೆ ತರಿಸುತ್ತಿದ್ದ ದೇಶ-ವಿದೇಶಗಳ ಪತ್ರಿಕೆಗಳನ್ನು ಓದುತ್ತಾ ಬೆಳೆದರು. ಅವುಗಳಲ್ಲಿರುವ ವಿಜ್ಞಾನ…

ತೈಲಬೆಲೆ ಏರಿಕೆ ರಾಜ್ಯಸರ್ಕಾರಗಳ ಕೈಯಲ್ಲಿದೆ ; ನಿರ್ಮಲ ಸೀತಾರಾಮನ್

ಬೆಂಗಳೂರು,ಜು,02: ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಸೆಸ್,ತೆರಿಗೆ ದರಗಳನ್ನು ಕಡಿಮೆ ಮಾಡಿದರೆ ದರ ಕಡಿಮೆಯಸಗುತ್ತದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು,ತೈಲ ಬೆಲೆ ಏರಿಕೆ ಸಂಬಂಧ,ರಾಜ್ಯ ಸರ್ಕಾರಗಳನ್ನ ಹೊಣೆ ಮಾಡಿದ್ದಾರೆ. ರಾಜ್ಯ ಸರ್ಕಾರಗಳ ಸೆಸ್ ಹೆಚ್ಚಳವಾಗಿದೆ. ರಾಜ್ಯಗಳು ತಮ್ಮ ತೆರಿಗೆ ಪಾಲು ಕಡಿಮೆ ಮಾಡಬಹುದು. ದರ ನಿಯಂತ್ರಣ ರಾಜ್ಯ ಸರ್ಕಾರಗಳ ಕೈಯಲ್ಲಿ ಇದೆ ಎಂದು ತಿಳಿಸಿದರು. ಕಚ್ಚಾ ತೈಲದ ಬೆಲೆ ತೀವ್ರ ಗತಿಯಲ್ಲಿ ಏರುತ್ತಿದೆ.…

ವಚನ ಸಾಹಿತ್ಯ ಬೆಳಕಿಗೆ ತಂದವರು ಹಳಕಟ್ಟಿ;ಎಂ.ಬಿ.ಪಾಟೀಲ್

ವಿಜಯಪುರ ,ಜು,02: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು ಡಾ.ಫ.ಗು.ಹಳಕಟ್ಟಿವರು ಎಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಹೇಳಿದರು. ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ನಿಮಿತ್ತ ಬಿ.ಎಲ್.ಡಿ.ಇ ಸಂಸ್ಥೆ ಆವರಣದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು, ಬಸವಣ್ಣ ಹಾಗೂ ಬಸವಾದಿ ಶರಣರು ಬರೆದಂತದಹ ವಚನ ಕಟ್ಟುಗಳು ಕಲ್ಯಾಣ ಕ್ರಾಂತಿಯ ನಂತರ ಮಠ-ಮಂದಿರಗಳಲ್ಲಿ, ಗುಡಿ-ಗುಂಡಾರಗಳಲ್ಲಿ, ಅಂಗಡಿ-ಮನೆಗಳಲ್ಲಿ, ಅಲ್ಲಲ್ಲಿ ಜಗುಲಿಗಳಲ್ಲಿ ಇದ್ದವು. ವಕೀಲಿ ವೃತ್ತಿಯ ನಿಮಿತ್ತ…

ಸಲ್ಯೂಟ್ ವಾರಿಯರ್ಸ್‌ ಆಲ್ಬಂ ಸಾಂಗ್‌ಗೆ ಎಸ್‌ಪಿ, ಸಿಇಒ ಚಾಲನೆ

ಚಿತ್ರದುರ್ಗ,ಜೂ,28: ಸರ್ಕಾರ ಕೋರೋನಾ ಲಾಕ್‌ಡೌನ್ ಸಡಿಲಿಕೆ ಮಾಡಿರಬಹುದು ಆದರೂ ಜನರು ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗವನ್ನು ಕೊರೋನಾ ಮುಕ್ತ ಮಾಡಲು ಸನ್ನದ್ಧವಾಗಿದೆ ಈ ಹಿನ್ನೆಲೆಯಲ್ಲಿ ಸಲ್ಯೂಟ್ ವಾರಿಯರ್ಸ್‌ ಸಾಂಗ್ ಅದ್ಬುತವಾಗಿ ಮೂಡಿಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹೇಳಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೊರೋನಾ ಕುರಿತ ಜಾಗೃತಿ ಗೀತೆ ಸಲ್ಯೂಟ್ ವಾರಿಯರ್ಸ್‌ ಕನ್ನಡ ಆಲ್ಬಂ ಸಾಂಗ್ ಶೂಟಿಂಗ್‌ಗಾಗಿ ಹಮ್ಮಿಕೊಂಡಿದ್ದ ಮೂಹೂರ್ತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.…

1 21 22 23 24 25 33
error: Content is protected !!