ರಾಜ್ಯ
ಡಾ.ರಾಜ್ ಜನ್ಮದಿನ; ಗೋಕಾಕ್ ಚಳವಳಿ ನೆನೆದ ಅಶ್ವತ್ಥ್ ನಾರಾಯಣ
ಬೆಂಗಳೂರು,ಏ 24: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿದ ಸಚಿವರು, ನೆರೆದಿದ್ದ ಅಭಿಮಾನಿಗಳಿಗೆ ಸಿಹಿ ಮತ್ತು ಉಪಾಹಾರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…



















