Browsing: ರಾಜ್ಯ

ರಾಜ್ಯ

ಜುಲೈ 19,22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ

ಬೆಂಗಳೂರು,ಜೂ,28:ಕೊನೆಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಸಿಯೇ ತೀರಬೇಕೆಂದು ಹಠ ತೊಟ್ಟಿರುವ ಶಿಕ್ಷಣ ಸಚಿವರು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದು ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ 19 ರಂದು…

ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ

ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು…

ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ನಿರಂತರ ಶ್ರಮ; ಬಿಎಸ್ ವೈ

ಬೆಂಗಳೂರು,ಜೂ.27: ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ವಿಧಾನಸೌಧದ ಬಾಂಕ್ವೆಟ್‍ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಚೆಚೀಟಿ ಬಿಡುಗಡೆ ಹಾಗೂ ಬೆಂಗಳೂರು ವಿವಿ ಆವರಣದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಪೆರಿಪರಲ್ ರಸ್ತೆ ನಿರ್ಮಾಣ, ಉಪನಗರ ರೈಲು ಯೋಜನೆ…

ಎಲ್ಲಾ ದಿನಗಳಲ್ಲೂ ಜೋಗದ ಸಿರಿವೈಭವಕ್ಕೆ ಅವಕಾಶ;ಯೋಗೇಶ್ವರ್

ಬೆಂಗಳೂರು ,ಜೂ. 25: ವಿಶ್ವವಿಖ್ಯಾತ ​ ಜೋಗದ ಸಿರಿಯ ವೈಭವವನ್ನು ಇನ್ನೂ ವರ್ಷದ ಎಲ್ಲಾ ದಿನಗಳಲ್ಲೂ ನೋಡುವ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರವಾಸಿ ತಾಣಗಳನ್ನು ನೋಡಲು ಕೇರಳ, ಮಹಾರಾಷ್ಟ್ರದಿಂದ ಎಲ್ಲಾ ಕಡೆ ಜನರ ಬರುತ್ತಾರೆ. ಪ್ರವಾಸೋದ್ಯಮದಿಂದ ರಾಜ್ಯಕ್ಕೆ 18 ರಷ್ಟು ಜಿಡಿಪಿ ಬರುತ್ತಿದೆ. ಜಿಡಿಪಿಯಲ್ಲಿ ನಾವು ದೇಶದಲ್ಲೇ ಮೂರನೇ ಸ್ಥಾನದಲ್ಲಿದ್ದೇವೆ. ಇನ್ಮುಂದೆ ಇನ್ನಷ್ಟು ಪ್ರವಾಸೋದ್ಯಮ ಇಲಾಖೆ ಬಲಿಷ್ಠಗೊಳಿಸುತ್ತೇವೆ ಎಂದರು. ಪ್ರವಾಸಿ ಗೈಡ್ ಗಳಿಗೆ ಪರಿಹಾರ ಲಾಕ್​ಡೌನ್​ನಿಂದಾಗಿ…

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ೧೪೯೨.೯೭ ಕೋಟಿ ರೂ. ಅನುಮೋದನೆ

ಬೆಂಗಳೂರು,ಜೂ,೨೫: ಕಲ್ಯಾಣ ಕರ್ನಾಟಕದ ಜನತೆಗೆ ಇದೊಂದು ಸಂತಸದ ಸುದ್ದಿ, ರಾಜ್ಯಪಾಲರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕ್ರಿಯಾಯೋಜನೆ ರೂಪಿಸಲು ೧೪೯೨.೯೭ ಕೋಟಿ ರೂ.ಗೆ ಅನುಮೋದನೆ ನೀಡಿದ್ದಾರೆ ಗಿರಿಜನ ಉಪಯೋಜನೆಗೆ ೧೦೦ ಕೋಟಿ ರೂ., ವಿಶೇಷ ಘಟಕ (ಎಸ್‌ಸಿಪಿ) ೩೦೦ ಕೋಟಿ ರೂ. ಹಾಗೂ ಸಾಮಾನ್ಯ ಯೋಜನೆಗೆ ೧೦೯೨.೯೭ ರೂ. ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಗ್ರೀನ್‌ಸಿಗ್ನಲ್ ದೊರೆತಿದೆ. ೨೦೨೧-೨೨ ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ ರೂ. ೧೪೯೨.೯೭…

ಕೃಷಿ ಸಚಿವರ ವರ್ತನೆಗೆ ಕಾಂಗ್ರೆಸ್ ಟೀಕೆ

ಬೆಂಗಳೂರು,ಜೂ,24: ಮುಂಗಾರು ಸಮಯದಲ್ಲಿ ಬಿತ್ತನೆ ಬೀಜ ಸಿಗದೆ ರೈತರು ಪರದಾಡುತ್ತಿದ್ದರೆ ಕೃಷಿ ಸಚಿವರು ಮೈಮರೆತು ಮಲಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಆಕ್ಸಿಜನ್, ಲಸಿಕೆಗಳ ನಂತರ ಈ ಸರ್ಕಾರದ ‘ಇಲ್ಲ’ಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿರುವುದು ಗೊಬ್ಬರ, ಬಿತ್ತನೆ ಬೀಜ. ಈ ಹದವಾದ ಮುಂಗಾರಿನ ವಾತಾವರಣದಲ್ಲಿ ರೈತರು ಬೆಳೆ ಹಾಕಲು ತುರಾತುರಿಯಲ್ಲಿದ್ದರೂ ಬಿತ್ತನೆ ಬೀಜ, ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್‌ ಚಾದರ ಹೊದ್ದು ಮಲಗಿದ್ದಾರೆ. ಈ ಅಯೋಗ್ಯತನಕ್ಕೆ ಏಕೆ ಮಂತ್ರಿಗಿರಿ’…

೨೪ ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹತ್ಯೆ ಆರೋಪಿಗಳ ಬಂಧನ-ಸಿಎಂ

ಬೆಂಗಳೂರು ,ಜೂ, ೨೪: ಮಗರದ ಚಲವಾದಿಪಾಳ್ಯದಲ್ಲಿ ಕೊಲೆಯಾದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ೨೪ ಗಂಟೆಯೊಳಗೆ ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಗೆ ಕಿಬ್ಬೊಟ್ಟೆಯ ಭಾಗಕ್ಕೆ ಡ್ರ್ಯಾಗರ್ ನಿಂದ ಮೂರು ಬಾರಿ ಇರಿದಿದ್ದ ಹಂತಕ, ಮತ್ತೊಬ್ಬ ಕತ್ತಿಗೆ ಹಾಕಿ ಒಂದೇ ಬಾರಿಗೆ ಕೊಯ್ದಿದ್ದ. ಕೋಳಿ ಕಟ್ ಮಾಡುವ ಮಚ್ಚಿನಿಂದ ತಲೆಗೆ ಹೊಡೆದು ಎಸ್ಕೇಪ್ ಆಗಿರೋ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಿಬ್ಬೊಟ್ಟೆಯ ಬಳಿ…

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ

ಬೆಂಗಳೂರು,ಜೂ,24:ಹಾಡು ಹಗಲೇ ಜನನಿನಿಡಿ ಪ್ರದೇಶದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘೋರ ಘಟನೆಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಜರುಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು ಮೃತಪಟ್ಟ…

ಭಾರತದ ಭದ್ರತೆಗೆ ಬೆದರಿಕೆ ಒಡ್ಡುತ್ತಿರುವ ಸಿಮ್ ಬಾಕ್ಸ್ ರಾಕೆಟ್!!

ತಂತ್ರಜ್ಞಾನ ಬೆಳದಂತೆ  ಹಲವಾರು ರೀತಿಯವಂಚನೆಗಳು ನಡೆಯುತ್ತಿವೆ .ಈ ಮೂಲಕ ಸೈಬರ್ ಭಯೋತ್ಪಾದನೆ ಜಾಸ್ತಿಯಾಗುತ್ತಿದೆ, ಇದಕ್ಕೆ ಉದಾಹರಣೆ ಎನ್ನುವಂತೆ ಸಿಮ್  ಬಾಕ್ಸ್ ವಂಚನೆ ರಾಷ್ಟಮಟ್ಟದಲ್ಲಿ ದೊಡ್ಡ ಘಟನೆ ಈ   ಬಗ್ಗೆ ಇಲ್ಲಿ ವಿವರ  ನೀಡಲಾಗಿದೆ. Writing; ಪರಶಿವ ಧನಗೂರು ಭವಿಷ್ಯದ ಪ್ರಪಂಚಕ್ಕೆ ಅತ್ಯಂತ ದೊಡ್ಡ ಗಂಡಾಂತರ ವೇನಾದರೂ ಒಂದಾಗಿ ಬರುವುದಿದ್ದರೇ ಅದೂ ಇಂಟರ್ನೆಟ್ ನಿಂದ ಮಾತ್ರ ಸಾಧ್ಯ!. ಸೈಬರ್ ಟೆರರಿಸಂ. ಡಾರ್ಕ್ ನೆಟ್ ಮಾಫಿಯಾ. ಗಳು ಬಗ್ಗೆ ಅರಿವಿದ್ದವರಿಗೇ ಈ ಸೈಬರ್ ವಾರ್, ಇಂಟರ್ನೆಟ್ ಥ್ರೆಟ್ ಗಳ ಭಯಾನಕತೆ…

ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಹೆಚ್ಚಿಸಿದ ಆತಂಕ

ಕೊರೊನಾ ಮೂರನೆ ಅಲೆಯ ಆತಂಕದಲ್ಲಿರುವ ಸಂದರ್ಭದಲ್ಲಿ ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಕಾಣಿಸಿಕೊಂಡು ಆತಂಕ ಹುಟ್ಟಿಸಿದೆ. ಬೆಂಗಳೂರು ಜೂ,24: ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ. ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ…

ವಿದ್ಯಾರ್ಥಿಗಳಿಗೆ ಸ್ಮಾರ್ಟ್ ತರಗತಿಯ ಟ್ಯಾಬ್ಲೆಟ್ ಪಿ.ಸಿ.ವಿತರಣೆ

ಬೆಂಗಳೂರು,ಜೂ,23: ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ಲೆಟ್ ಪಿ.ಸಿ. ನೀಡಲಾಗುವುದು ಎಂದು ತಿಳಿಸಿದರು. ಡಿಜಿಟಲ್ ಕಲಿಕೆ…

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಕೆಯುಡಬ್ಲ್ಯೂಜೆ ತೀರ್ಮಾನ

ಬೆಂಗಳೂರು,ಜೂ,23:ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ. ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರ್ಕಾರದಿಂದ 5ಲಕ್ಷ‌ರೂ ನೆರವು ಕೊಡಿಸಲು ನಿರ್ಣಯಿಸಲಾಗಿದೆ. ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಗಿದೆ.ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡಿಸಲು…

ಕೊರೊನಾ ಕಾಲದ ಹೋಟೆಲ್- ರೆಸಾರ್ಟ್ ನ ವಿದ್ಯುತ್,ನೀರು ಶುಲ್ಕ ಮನ್ನಾ ಮಾಡಲು ಸಿಎಂಗೆ ಸಿದ್ದು ಪತ್ರ

ಬೆಂಗಳೂರು ,ಜೂ23: ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿದ್ದು,ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ.ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು…

ಸಿಂಧೂರಿಗೆ ಹಿನ್ನೆಡೆ-ಅನುಮತಿ ಇಲ್ಲದೆ ಈಜು ಕೊಳ ನಿರ್ಮಾಣ

ಬೆಂಗಳೂರು,ಜೂ,೨೩: ಸಂಸದ ಪ್ರತಾಪ್ ಸಿಂಹ ಎತ್ತಿದ್ದ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅನುಮತಿ ಇಲ್ಲದೆ ಈಜುಕೊಳ ನಿರ್ಮಿಸಿದ್ದರು ಎನ್ನುವ ಅಂಶ ಈಗ ತನಿಖಾ ವರದಿಯಿಂದ ಗೊತ್ತಾಗಿದೆ. ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ. ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ ೩೨…

೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಗಿಸಲು ಸಿಎಂ ಸೂಚನೆ

ಪ್ರತಿಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಿಸುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಿಸುವ ಕುರಿತು ಇಂದು ನಡೆದ ಸಭೆಯಲ್ಲಿ ಕೂಡಲೇ ನೀರು ಒದಗಿಸುವಂತೆ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಬೆಂಗಳೂರು, ಜೂ.೨೨: ಜಲಜೀವನ್ ಮಿಷನ್ ಯೋಜನೆಯಡಿ ೨೫ಲಕ್ಷ ಗ್ರಾಮೀಣಭಾಗದ ಮನೆಗಳಿಗೆ ಕುಡಿಯುವ ನೀರು ಬದಗಿಸುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು,…

ಮೆಟ್ರೋದಲ್ಲಿ ಜುಲೈನಿಂದ ಟೋಕನ್ ವ್ಯವಸ್ಥೆ ಜಾರಿ?

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಟೋಕನ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು ಈಗ ಜುಲೈತಿಂಗಳಲ್ಲಿ ಮೆಟ್ರೋ ಟೋಕನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸರ್ಕಾರ ಹೇಳಿದೆ ಬೆಂಗಳೂರು, ಜೂ, ೨೨;ಕೊರೊನಾ ಒಂದನೇ ಅಲೆಯಿಂದ ಮೆಟ್ರೋ ಪ್ರಯಾಣಿಕರಿಗೆ ಟೋಕನ್ ವ್ಯವಸ್ಥೆ ಇಲ್ಲದೆ ಸಂಚಾರಕ್ಕೆ ತೊಂದರೆಯಾಗಿದ್ದು ಮುಂದಿನ ಮಾರ್ಗಸೂಚಿ ಅನ್ವಯ ಬಹುತೇಕ ಅಥವ ಜುಲೈ ಒಂದರಿಂದ ಟೋಕನ್ ವ್ಯವಸ್ಥೆಯನ್ನು ಕಲ್ಪಿಸುವ ಸಾದ್ಯತೆಗಳಿವೆ ಎಂದು ಸರ್ಕಾರ ಹೇಳಿದೆ. ಕಳೆದ ವರ್ಷದ ಲಾಕ್ ಡೌನ್ ನಂತರ ಕೇವಲ ಮೆಟ್ರೋ ಕಾರ್ಡ್ ದಾರರಿಗೆ…

ಶ್ರೀ ಮೈಲಾರಲಿಂಗೇಶ್ವರ ಕಾರ್ಣೀಕದ ಗೊರವಯ್ಯ ಮಾಲತೇಶಪ್ಪ ನಿಧನ

ಹೂವಿನ ಹಡಗಲಿ,ಜೂ,22: ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಮಾಲತೇಶಪ್ಪ ನಿಧನಕ್ಕೆ ನಾಡಿನ ಹಲವಾರು ಮಠಾಧೀಶರು,ಸ್ವಾಮೀಜಿಗಳು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೋವಿಡ್ ಲಸಿಕೆ ಪಡೆದುಕೊಳ್ಳಲು ಸಲಹೆ : ಅನಿತಾ ಕುಮಾರ್ ಸ್ವಾಮಿ

ರಾಮನಗರ, ಜೂ, 22: ಲಸಿಕೆ ತಗೆದುಕೊಳ್ಳುವುದರಿಂದ ಕೋವಿಡ್ ಬಂದರು ಸಹ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರದಂತೆ ನಿಯಂತ್ರಿಸುತ್ತದೆ. ರಾಮನಗರ ಜಿಲ್ಲೆಯ ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಿ ಹಾಗೂ ನಿಮ್ಮ ಸುತ್ತಮುತ್ತಲಿನ ಜನರಿಗೂ ಸಹ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸಿ ಎಂದು ರಾಮನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿತಾ ಕುಮಾರ್ ಸ್ವಾಮಿ ಅವರು ತಿಳಿಸಿದ್ದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆದ…

ಶಾಲೆ ಆರಂಭ ಕುರಿತ ವರದಿ ಸಲ್ಲಿಸಿದ ತಜ್ಞರ ಸಮಿತಿ

ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಬೆಂಗಳೂರು,ಜೂ.೨೨:ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಮತ್ತು ಸಮಸ್ಯೆ ಎರಡೂ ಇವೆ ಎರಡನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲೆ ಆರಂಭ ಮಾಡಬೇಕೆ ಬೇಡವೇ ಎನ್ನುವ ಕುರಿತು ನಿರ್ಧಾರ ಮಾಡಬಹುದು. ಇದು ಡಾ.ದೇವಿಶೆಟ್ಟಿ ನೇತೃತ್ವದ ಮೂರನೇ ಅಲೆ ಸಿದ್ದತೆ ಕುರಿತು ರಚಿಸಿರುವ ಉನ್ನತ ಮಟ್ಟದ…

ಕೊವಿಡ್ 3 ನೇ ಅಲೆ ಎದುರಿಸಲು ಸಕಲ ಸಿದ್ಧತೆ; ಶಶಿಕಲಾ ಜೊಲ್ಲೆ

ಬೆಂಗಳೂರು,ಜೂ,21: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೊವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ…

1 22 23 24 25 26 33
error: Content is protected !!