Browsing: ರಾಜ್ಯ

ರಾಜ್ಯ

ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಅದಿರು ಸಾಗಾಟ;೨೦ ಲಾರಿಗಳ ವಶ

ಬಳ್ಳಾರಿ,ಜೂ,೨೦: ಮತ್ತೇ ಗಣಿನಾಡಿನಲ್ಲಿ ಅಕ್ರಮ ಗಣಿಗಾರಿಕೆ ಶುರುವಾಗಿದೆ. ಈ ಸಂಬಂಧ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಅಕ್ರಮ ಅದಿರು ಸಾಗಾಟದ ೨೦ಕ್ಕೂ ಹೆಚ್ಚು ಲಾರಿಗಳನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಗಣಿನಾಡು ಬಳ್ಳಾರಿ ಅಂದರೆ ಅಕ್ರಮ ಗಣಿಗಾರಿಕೆ, ಅಕ್ರಮ ಗಣಿ ಸಾಗಾಟ ಎನ್ನುವುದು ಇಡೀ ದೇಶಕ್ಕೇ ಸಾರಿತು. ಮಾಜಿ ಸಚಿವ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಸಿಬಿಐ ತನಿಖೆ ಆರಂಭಿಸಿದ ಬಳಿಕ ಸುಪ್ರೀಂ ಕೋರ್ಟ್ ಗಣಿ ರಪ್ತಿಗೆ ನಿಷೇಧ ಹೇರಿತ್ತು. ಪ್ಲಾಂಟ್ ಇದ್ದವರಿಗೆ ಗಣಿಗಾರಿಕೆ ಮಾತ್ರ…

ಕ್ಲೋಜರ್ ಕಾಮಗಾರಿ ಟೆಂಡರ್ ರದ್ದುಗೊಳಿಸದಿದ್ದರೆ ಧರಣಿ;ಎಚ್ಚರಿಕೆ

ಆಲಮಟ್ಟಿ,ಜೂ,20: ಲಾಲಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕಾಲುವೆಗಳಿಗೆ ಕರೆಯಲಾದ ಕ್ಲೋಜರ್ ಮತ್ತು ವಿಶೇಷ ದುರಸ್ತ ಕಾಮಗಾರಿಗಳ ಟೆಂಡರ್ ರದ್ದುಗೊಳಿಸಬೇಕು. ಇಲ್ಲದಿದ್ದರೆ ಕೊವಿಡ್-೧೯ನಿಯಮ ಸಡಿಲಿಕೆಯಾದ ನಂತರ ಅನಿರ್ಧಿಷ್ಟ ಧರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವದು ಎಂದು ಅಖಂಡ ಕರ್ನಾಟಕ ರೈತಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು. ಆಲಮಟ್ಟಿಯಲ್ಲಿರುವ ಕೆಬಿಜೆನ್ನೆಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಅಖಂಡಕರ್ನಾಟಕ ರೈತಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿ ಮಾತನಾಡಿದ ಅವರು ಕ್ಲೋಜರ್ ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳನ್ನು ಬೇಸಿಗೆಯಲ್ಲಿ ಟೆಂಡರ್ ಕರೆದು ಮಳೆಗಾಲಕ್ಕೂ ಮುಂಚೆ ಕಾಮಗಾರಿಗಳನ್ನು ಮುಗಿಸಿ…

ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಆಲಮಟ್ಟಿ,ಜೂ,20:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಮುಂದುವರೆದಿದೆ. ಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ಆಲಮಟ್ಟಿ ಜಲಾಶಯದಲ್ಲಿ ಭಾನುವಾರ ಬೆಳಗ್ಗೆ ೫೧೩.೫೬ ಮೀಟರ್ ಎತ್ತರದಲ್ಲಿ ೫೧.೪೦೭ ಟಿಎಂಸಿ ನೀರು ಸಂಗ್ರಹವಾಗಿದ್ದರೆ ಒಳಹರಿವಿನ ಪ್ರಮಾಣ ೧೫೦೭೫೦ ಕ್ಯೂಸೆಕ್ ಇತ್ತು. ಸಂಜೆ ೬ಕ್ಕೆ ೫೧೪.೧೯ ಮೀಟರ್ ಎತ್ತರದಲ್ಲಿ ೫೬.೧೮೮ ಟಿಎಂಸಿ ನೀರು ಸಂಗ್ರಹವಾಗಿತ್ತು ಆಗ ಒಳಹರಿವಿನ ಪ್ರಮಾಣ ೧೩೧೯೪೪ ಕ್ಯೂಸೆಕ್‌ನಷ್ಟಿತ್ತು. ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ೬೪ ಎಂಎಂ, ಕೊಯ್ನಾದಲ್ಲಿ ೪೫ ಎಂಎಂ, ನಾವಜಾದಲ್ಲಿ ೬೩…

ಮನೆಯಲ್ಲೇ ಯೋಗ ದಿನ ಆಚರಿಸಿ:ಕೆ.ಸುಧಾಕರ್

ಬೆಂಗಳೂರು, ಜೂ, 19:ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜೂನ್ 21 ರಂದು ಯೋಗ ದಿನವನ್ನು ಆನ್ ಲೈನ್ ನಲ್ಲೇ ಆಚರಿಸಲಾಗುತ್ತಿದೆ. ಬಿ ವಿತ್ ಯೋಗ ಬಿ ಅಟ್ ಹೋಮ್ ಮತ್ತು ಯೋಗ ಫಾರ್ ವೆಲ್ ನೆಸ್ ಎಂಬ ಘೋಷವಾಕ್ಯದಡಿ ಯೋಗ ದಿನ ಆಚರಿಸಲಾಗುತ್ತಿದೆ.…

ಚೇರಂಬಾಣೆ ಸಿದ್ಧಾಶ್ರಮದ ಬೇಬಿತಾಯಿ ಬ್ರಹ್ಮೈಕ್ಯ.

ಬೆಂಗಳೂರು,ಜೂ,19:ಕೊಡಗು ಜಿಲ್ಲೆಯ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಶ್ರೀಮಾತೆ ಬೇಬಿತಾಯಿಯವರು (84) ಇಂದು ಬೆಳಿಗ್ಗೆ ಬ್ರಾಹ್ಮೀಮುಹೂರ್ತದಲ್ಲಿ (5.15) ಬ್ರಹ್ಮೈಕ್ಯರಾದರು. ಮಧ್ಯಾಹ್ನಆಶ್ರಮದಲ್ಲಿ ಸಂಪ್ರದಾಯದಂತೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇತ್ತೀಚೆಗೆ ಅವರು ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಲು ನಿರಾಕರಿಸಿದ್ದರು. 20.11.1936 ರಲ್ಲಿ ಚೇರಂಬಾಣೆ ಬಳಿಯ ಕೊಟ್ಟೂರು ಗ್ರಾಮದ ಶ್ರೀ ಅಚ್ಚಯ್ಯ ಶ್ರೀಮತಿ ಬಿಳ್ಳವ್ವ ದಂಪತಿಗಳಿಗೆ ಜನಿಸಿದ ಇವರು ಬಾಲಬ್ರಹ್ಮಚಾರಿಣಿಯಾಗಿದ್ದರು. ಮೂರು ಜನ ಸಹೋದರ ಐದು ಜನ ಸಹೋದರಿಯರನ್ನು ಹೊಂದಿದ್ದ ಇವರು ತಮ್ಮ ನಲವತ್ತೆರಡನೇ ವಯಸ್ಸಿನಲ್ಲಿ ಚೇರಂಬಾಣೆಯ ಸಿದ್ಧಾರೂಢಾಶ್ರಮಕ್ಕೆ ಸೇರಿಕೊಂಡರು.…

ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸಿ-ಎಚ್‌ಡಿಕೆ

ಬೆಂಗಳೂರು, ಜೂ.೧೯:ಮೇಕೆ ದಾಟು ಯೋಜನೆಜಾರಿಗೊಳಿಸುವ ಕುರಿಂತೆ ಶೀಘ್ರ ಕೇಂದ್ರ ಸರ್ಕಾರದ ಗಮನಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಅವರು…

ನಾಗರಹೊಳೆಯಲ್ಲಿ ಹುಲಿಗಣತಿ ಕಾರ್ಯ ಆರಂಭ

ಮೈಸೂರು,ಜೂ,೧೯: ರಾಜ್ಯದ ಪ್ರತಿಷ್ಠಿತ ಅರಣ್ಯಪ್ರದೇಶವಾದ ನೊಗರಹೊಳೆಯಲ್ಲಿ ಎರಡನೇ ಹಂತದ ಹುಲಿ ಗಣತಿ ಆರಂಭವಾಗಿದೆ. ನಾಗರ ಹೊಳೆ ಅರಣ್ಯದಲ್ಲಿ ಕ್ಯಾಮರಾವನ್ನು ಹಳವಡಿಸಲಾಗಿದ್ದು ಹುಲಿಯ ವಯಸ್ಸು ಮತ್ತು ಲಿಂಗ ಪತ್ತೆಯನ್ನು ಮಾಡಲಾಗುತ್ತದೆ ಎಂದು ವಲಯಾಧಿಕಾರಿ ತಿಳಿಸಿದ್ದಾರೆ. ಕೊರೊನಾ ಹಾವಳಿ ಇರುವುದರಿಂದಾಗಿ ಸ್ವಯಂ ಸೇವಕರಿಗೆ ಅವಕಾಶ ಕಲ್ಪಿಸಲಾಗಿಲ್ಲ. ಒಟ್ಟು ೮೪೦ ಚದರ ಕಿ.ಮೀ ವ್ಯಾಪ್ತಿ ಇರುವ ನಾಗರ ಹೊಳೆ ಅರಣ್ಯ ಗಣತಿ ನಡೆಲಾಗುತ್ತಿದೆ. ಈಗಾಗಲೇ ಹುಲಿ ಗಣತಿ ಕಾರ್ಯಾರಂಭಗೊಂಡಿದೆ. ಪ್ರಥಮ ಹಂತದ ಗಣತಿ ಕಳೆದ ಮೇ ತಿಂಗಳಿನಲ್ಲಿ ಆರಂಭವಾಗಿ ಮುಕ್ತಾಯವಾಗಿತ್ತು. ಇದೀಗ…

ಡಿಸೆಂಬರ್‌ವರೆಗೂ ಜಿಪಂ,ತಾಪಂ ಚುನಾವಣೆ ಇಲ್ಲ-ಈಶ್ವರಪ್ಪ

ದಾವಣಗೆರೆ,ಜೂ,೧೯: ಕೊನಾನಾ ಆತಂಕದ ಹಿನ್ನೆಲಯಲ್ಲಿ ಡಿಸೆಂಬರ್ ವರೆಗೂ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ನಡೆಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಸೋಮವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. .ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ…

ಹಕ್ಕು ಪತ್ರಕ್ಕಾಗಿ ನಿಲ್ಲದ ಹೋರಾಟ

ರಾಮನಗರ ಜೂ 19: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಅನ್ ಲಾಕ್ ನಂತರ  ಧರಣಿ ಮತ್ತೆ ಮುಂದುವರೆದಿದೆ. 2006 ರ ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಸುಮಾರು ಎಂಟು ವರ್ಷಗಳಿಂದ ಅರಣ್ಯ ಭೂಮಿ ಹಕ್ಕುಪತ್ರಕ್ಕಾಗಿ ಹೋರಾಟ ನಡೆಸುತ್ತಾ ಬಂದಿರುವ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಸಮಾಜದ 24 ಕುಟುಂಬಗಳಿಗೆ ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಒಕ್ಕಲೆಬ್ಬಿಸಿದ ಜಮೀನು ನೀಡದೆ ಅರಣ್ಯ ಇಲಾಖೆ ಕಾನೂನು ಗಾಳಿಗೆ ತೂರಿ…

ಸಿದ್ದಲಿಂಗಯ್ಯ ಸಮಾಜದ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಕೆ. ಶೇಷಾದ್ರಿ.

ರಾಮನಗರ ಜೂ 19: ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದ ಹಾಗೂ ತಮ್ಮ ಕವಿತೆಗಳಿಂದ ಜನರಿಗೆ ಸರಿಯಾದ ಮಾರ್ಗ ತೋರಿಸುವ ಮೂಲಕ ಜನಮಾನಸದಲಿ ಶಾಶ್ವತವಾಗಿ ಉಳಿದ ಅದರ್ಶ ವ್ಯಕ್ತಿ ಡಾ.ಸಿದ್ದಲಿಂಗಯ್ಯ ಎಂದು ಮಾಜಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಹಾಲಿ ನಗರಸಭಾ ಅಧ್ಯಕ್ಷ ಕೆ ಶೇಷಾದ್ರಿ ಹೇಳಿದರು. ನಗರದ ಐಜೂರು ವೃತ್ತದಲ್ಲಿ ಸಿದ್ದಲಿಂಗಯ್ಯರವರಿಗೆ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಸಿದ್ದಲಿಂಗಯ್ಯರವರು ಬಹಳ ಸರಳವಾಗಿ ತಮ್ಮ ಬದುಕನ್ನು ಕಟ್ಟಿಕೊಂಡ ಜೀವನ ನಡೆಸುತ್ತಿದ್ದರು…

ಮೇಕೆದಾಟು ಯೋಜನೆಗೆ ರಾಜ್ಯಕ್ಕೆ ಮುನ್ನಡೆ

ಬೆಂಗಳೂರು, ಜೂ,19:ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮುನ್ನಡೆಯಾಗಿದ್ದಯ ಶೀಘ್ರ ಕಾಮಗಾರಿ ಸಲ್ಲಿಸಲು ಸರ್ಕಾರ ಯೋಜನೆ ರೂಪಿಸಲು ತಯಾರಿ ನಡೆಸಿದೆ. ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. “ಜಲಾಶಯ ನಿರ್ಮಾಣ ವಿವಾದ ಸುಪ್ರೀಂಕೋರ್ಟ್…

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು,ಜೂ,18:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ಸಂತೋಷ ಹಾನಗಲ್ ಅವರನ್ನು ಕನ್ನಡಪರ ಸಂಘಟನೆಗಳು ಅವರ ಕಛೇರಿಯಲ್ಲಿ ಅಭಿನಂದಿಸಿದವು. ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ್, ಮಹಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶಮೂರ್ತಿ, ಕರ್ನಾಟಕ ವಿದ್ಯಾರ್ಥಿಕೂಟದ ಪ್ರಧಾನ ಕಾರ್ಯದರ್ಶಿ ಹರ್ಷ, ವಿಷ್ಣುಸೇನೆಯ ಆನಂದ್ ಮತ್ತಿತರರು ನೂತನ‌…

ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ

ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು,…

ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ

ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್…

ಮಕ್ಕಳಿಗೆ ಬಾಲ ಸೇವಾ ಯೋಜನೆ : ಜೊಲ್ಲೆ

ರಾಮನಗರ ಜೂ 18: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನೆರವು ನೀಡಲು ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆಸಾವಿರ ರೂ. ಹಾಗೂ ಉಚಿತ ಶಿಕ್ಷಣ, ಎಸ್.ಎಸ್.ಎಲ್.ಸಿ.…

ಧರ್ಮಸ್ಥಳ ವಿರುದ್ಧ ಅಪಪ್ರಾಚಾರ;ಕೆ.ಸೋಮನಾಥ್ ನಾಯಕ್ ಗೆ ಮೂರು ತಿಂಗಳು ಜೈಲು ಶಿಕ್ಷೆ

ಬೆಳ್ತಂಗಡಿ,ಜೂ,18: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಅಧ್ಯಕ್ಷ ಕೆ.ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ತನ್ನ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ, ಮೂರು ತಿಂಗಳ ಜೈಲು ಶಿಕ್ಷೆಯ ಹೊರತಾಗಿ, ಕ್ಷೇತ್ರಕ್ಕೆ 4.5 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಲು ನಾಯಕ್ ಒಡೆತನದ ಸ್ಥಿರಾಸ್ತಿಯನ್ನು ಲಗತ್ತಿಸಲು ನ್ಯಾಯಾಲಯ ಆದೇಶಿಸಿದೆ. ಅವರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ತಿಳಿದಿದ್ದರೂ ಶ್ರೀ ಕ್ಷೇತ್ರದ…

ಖಾಸಗಿ ಶಿಕ್ಷಣ ಶಾಲೆಗಳ ಆರ್ ಟಿ ಇ ಹಣ ಬಿಡುಗಡೆ

ಬೆಂಗಳೂರು, ಜೂ,17: ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ದಾಖಲಾದ ವಿದ್ಯಸರ್ಥಿಗಳ ಶುಲ್ಕವನ್ನು ಮರುಪಾವತಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 12 (1) ಸಿ ಅಡಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2012-13ನೇ ಸಾಲಿನಿಂದ ಶೇ.25ರಷ್ಟು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೀಟು ಹಂಚಿಕೆ ಮಾಡಿ,…

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಇಳಿಮುಖ

ಬೆಂಗಳೂರು,ಜೂ,೧೫:ಲಾಕ್‌ಡೌನ್ ಎಫೆಕ್ಟ್ ಮತ್ತು ಕೊರೊನಾ ನಿಯಂತ್ರಣಕ್ಕೆ ತಗೆದುಕೊಂಡಿರುವ ಕೆಲ ನಿರ್ಧಾರಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖ ಕಾಣುತ್ತಿದೆ. ಇದರ ಪರಿಣಾಮವಾಗಿ ಮಂಗಳವಾರ ೫,೦೪೧ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೭,೭೭,೦೧೦ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೩,೧೪೮ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೯೮೫ ಮಂದಿಗೆ ಸೋಂಕು ದೃಢಪಟ್ಟಿದ್ದು,…

ಖಾಸಗಿ ಶಾಲೆಗಳ ಶುಲ್ಕವನ್ನುಸರ್ಕಾರ ನಿರ್ಧರಿಸಬೇಕು-ಸಿಎಂಗೆ ಸಿದ್ದು ಪತ್ರ

ಬೆಂಗಳೂರು, ಜೂ.೧೫:ಶೈಕ್ಷಣಿಕ ವರ್ಷ ಆರಂಭವಾಗಿರುವ ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್ಗಳಿಗೆ ಪಾವತಿಸಬೇಕಾದ…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

1 23 24 25 26 27 33
error: Content is protected !!