Browsing: ರಾಜ್ಯ

ರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯ ನಿರೀಕ್ಷೆ;ಸಿ.ಎಂ

ಹುಬ್ಬಳ್ಳಿ, ಡಿ 12: ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ…

ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ’ ವ್ಯಾಪ್ತಿಗೆ: ಡಾ.ಅಶ್ವತ್ಥನಾರಾಯಣ

ಬೆಂಗಳೂರು,ಡಿ,11: ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ’ ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರದಲ್ಲಿ ಇತ್ತೀಚೆಗೆ ಚಾಲನೆ ಕಂಡಿದ್ದ `ಜನಸೇವಕ’ ಕಾರ್ಯಕ್ರಮ ಕುರಿತಾದ ವಾರ್ಡ್ ವಾರು ಪ್ರತ್ಯೇಕ ಕಿರುಹೊತ್ತಿಗೆ ಬಿಡುಗಡೆ ಹಾಗೂ ಜನರಿಗೆ ಸಾಂಕೇತಿಕವಾಗಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.…

ಕಂಪನಿಗಳಿಗೆ ಸಾಮಾಜಿಕ ಒಳಗೊಳ್ಳುವಿಕೆ ದೃಷ್ಟಿಕೋನ ಮುಖ್ಯ: ಅಶ್ವತ್ಥನಾರಾಯಣ

ಬೆಂಗಳೂರು,ಡಿ,10:  ಕೇವಲ ವಾಣಿಜ್ಯ ಲಾಭದ ದೃಷ್ಟಿಯಿಂದ ಕಂಪನಿಗಳನ್ನು ನಡೆಸುವುದರ ಬದಲು ಸಮಾಜದ ಪ್ರತಿಯೊಬ್ಬರನ್ನೂ ಒಳಗೊಳ್ಳುವಂತಹ ದೃಷ್ಟಿಕೋನವು ಉದ್ಯಮಗಳಲ್ಲಿ ಬೇರೂರಬೇಕಾಗಿದೆ. ಇದರಿಂದ ಮಾತ್ರ ಸಮಾಜವು ಪ್ರಗತಿ ಸಾಧಿಸಬಲ್ಲದು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ನಡೆದ 12ನೇ ಸಿಎಸ್ಆರ್ ನಾಯಕತ್ವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿರುವ ಯೂನಿಕಾರ್ನ್ ಕಂಪನಿಗಳಲ್ಲಿ ಶೇ.60ರಷ್ಟು ರಾಜ್ಯದಲ್ಲೇ ಇದ್ದು, ಇವು ಈಗ ಸಾಮಾಜಿಕ ವಲಯಗಳತ್ತಲೂ ಗಮನ ಹರಿಸುತ್ತಿರುವುದು ಸ್ವಾಗತಾರ್ಹ…

ಕರ್ನಾಟಕದಲ್ಲಿ ಮೊದಲ ಒಮೈಕ್ರಾನ್ ಪತ್ತೆ

ಬೆಂಗಳೂರು,ಡಿ,02: ಬೆಂಗಳೂರಿನ ಇಬ್ಬರಿಗೆ ಒಮೈಕ್ರಾನ್ ವೈರಸ್​  ತಗುಲಿದೆ. ಭಾರತದಲ್ಲಿ ಮೊದಲ ಒಮೈಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್​ ತಿಳಿಸಿದ್ದಾರೆ. ಒಮೈಕ್ರಾನ್ ಬಂದಿರುವ ಇಬ್ಬರಿಗೂ 2 ಡೋಸ್ ಕೊರೊನಾ ಲಸಿಕೆ ಆಗಿದೆ. ಮೂರು ದಿನದಿಂದ ಅವರಿಬ್ಬರ ರಿಪೋರ್ಟ್ ಗೆ ಕಾಯುತ್ತಿದ್ದೆವು. ಕೇಂದ್ರ ಸರ್ಕಾರ ಎರಡೂ ಸ್ಯಾಂಪಲ್ ಗಳಲ್ಲಿ ಒಮಿಕ್ರಾನ್ ಪ್ರಬೇಧ ಇದೆ ಎಂದು ದೃಢಪಟ್ಟಿದೆ. ಕರ್ನಾಟಕದಲ್ಲಿ ವಿದೇಶದಿಂದ ಬಂದವರಿಗೆ ಬಹಳ ತುರ್ತಾಗಿ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಒಮಿಕ್ರಾನ್ ಸೋಂಕನ್ನು ನಾವು ಬೇಗ ಕಂಡು…

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

ಬೆಂಗಳೂರು,ಡಿ,02: ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮೈಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಇತ್ತೀಚೆಗೆ ವೈದ್ಯರನ್ನು ಕುರಿತು ನಿರ್ಮಿಸಿ, ಬಿಡುಗಡೆ ಮಾಡಿರುವ `ಪ್ರೇಮಂ ಪೂಜ್ಯಂ’ ಚಿತ್ರದ ನಾಯಕ ನಟ ಪ್ರೇಮ್ ಅವರು ಗುರುವಾರ ತಮ್ಮನ್ನು ಇಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ಎನ್ಇಪಿ ಭಾರತ ಕೇಂದ್ರಿತ; ಸಂಶೋಧನೆ, ನಾವೀನ್ಯತೆಗೆ ಒತ್ತು;ಅಶ್ವತ್ಥ್ ನಾರಾಯಣ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತ ಕೇಂದ್ರಿತವಾಗಿದ್ದು, ಶಿಕ್ಷಣ ಕ್ರಮದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಯನ್ನು ಗುರಿಯಾಗಿ ಹೊಂದಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಎಜುಕೇಷನ್ ಪ್ರೊಮೋಷನ್ ಸೊಸೈಟಿ ಆಫ್ ಇಂಡಿಯಾ (ಇಪಿಎಸ್ಐ), ಕುಪೇಕಾ ಮತ್ತು ಕಾಮೆಡ್-ಕೆ ಸಂಘಟನೆಗಳು ಜತೆಗೂಡಿ ಮಂಗಳವಾರ ಏರ್ಪಡಿಸಿದ್ದ `ಎನ್ಇಪಿ ಜಾರಿ: ಶಿಕ್ಷಣ ಸಂಸ್ಥೆಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು’ ವಿಚಾರ ಗೋಷ್ಠಿಯಲ್ಲಿ…

ರದಜ್ಯದಲ್ಲಿ ಲಾಕ್ ಡೌನ್ ಮಾಡುವ ಯಸವುದೇ ಪ್ರಸ್ತಾಪ ಇಲ್ಲ: ಸುಧಾಕರ್

ಬೆಂಗಳೂರು, ನ.29: ಓಮಿಕ್ರಾನ್ ರೂಪಾಂತರ ತಳಿ ಬಗ್ಗೆ ತೀವ್ರ ಆತಂಕ ಬೇಡ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೆಲವರು ಲಾಕ್‌ಡೌನ್ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿದೆ. ಸಾರ್ವಜನಿಕರು ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು. ಲಾಕ್‌ಡೌನ್ ಮಾಡುವ ಅಗತ್ಯವೇ ಇಲ್ಲ. ಸರ್ಕಾರದ ಮುಂದೆ ಅಂತಹ ಪ್ರಸ್ತಾಪವೂ ಇಲ್ಲ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನು ಮೂರನೇ ಅಲೆ…

ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ

ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…

ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ- ಸಿಎಂ

Post by kendhooli desk ದಾವಣಗೆರೆ, ನ, 26: ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವವುದು ಹಾಸ್ಯಾಸ್ಪದ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್ ಕಾಮಗಾರಿಗಳನ್ನು ತನಿಖೆಗೊಳಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿನ ಗುತ್ತಿಗೆದಾರರ ಪರ್ಸೆಂಟೇಜ್ ಅನುಭವವನ್ನು ಪತ್ರದಲ್ಲಿ ಬರೆದಿದ್ದಾರೆ.…

ಬಂಡವಾಳ ಆಕರ್ಷಿಸಲು ಬೆಂಗಳೂರಿನಲ್ಲಿ ಮೊರಾಕ್ಕೊ ರೋಡ್-ಶೋ

ಬೆಂಗಳೂರು,ನ,25: ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವರು ಮಾತನಾಡಿದರು. `ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ…

ಉನ್ನತ ಶಿಕ್ಷಣಕ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ

ಬೆಂಗಳೂರು,ನ,25: ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕುರಿತು ಉಚಿತವಾಗಿ ಮಾರ್ಗದರ್ಶನ ಹಾಗೂ ಉನ್ನತ ಮಟ್ಟದ ಕಾಲೇಜುಗಳಿಗೆ ದಾಖಲಾತಿಗೆ ಕೌನ್ಸಲಿಂಗ್ ನೀಡಲು ಅಮೆರಿಕಾ ಮೂಲದ ನೆಸ್ಟ್‌ಲಿಂಗ್ ಸಂಸ್ಥೆ ತನ್ನ ಮೊದಲ ಕೌನ್ಸಿಲಿಂಗ್ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ.ಇದಲ್ಲದೆ ಈ ಕೇಂದ್ರಲ್ಲಿ ಕೌನ್ಸಲಿಂಗ್ ಪಡೆದು ವಿದೇಶಕ್ಕೆಉನ್ನತ ಶಿಕ್ಷಣಕ್ಕೆ ಕೌನ್ಸಲಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ* ಓದಲು ತೆರಳುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ಸ್ಕಾಲರ್‌ಶಿಪ್‌ ನೀಡುವುದಾಗಿಯೂ ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ…

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ‌ಘೋಷಣೆ

ಬೆಂಗಳೂರು,ನ,16:  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ  ಇಂದು ನಡದ ಪನೀತ್ ನಮನ ಕಾರ್ಯಕ್ರರಮದಲ್ಲಿ ಘೋಷಿಸಿದರು ಮುಂದುವರೆದು ಮಾತನಾಡಿದ ಬೊಮ್ಮಾಯಿ   ಹಾಗೆಯೇ ಡಾ.ರಾಜ್ ಕುಮಾರ್ ಸ್ಮಾರಕದಂತೆಯೇ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು. ನಾನು ಬಾಲ್ಯದಿಂದ ಪುನೀತ್ ರಾಜ್ ಕುಮಾರ್  ನೋಡಿದ್ದೇನೆ. ಅವರು ನಮಗೆ ಬಹಳ ಆತ್ಮೀಯರಾಗಿದ್ದರು.  ಬಾಲ ನಟನಿದ್ದಾಗಲೇ ರಾಷ್ಟ್ರಪ್ರಶಸ್ತಿ ಪಡೆದಿದ್ದರು.  ಇಂತಹ ಕಾರ್ಯಕ್ರಮ ಮಾಡುತ್ತೇವೆ ಎಂದುಕೊಂಡಿರಲಿಲ್ಲ.…

ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರಗಳ ಮಂಜೂರು

ಬೆಂಗಳೂರು,ನ,15: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ. ಲೋಕಾಪೂರದಲ್ಲಿ 400 ಕಿ.ವ್ಯಾ ಸಾಮಾರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣವಾಗಲಿದ್ದು, ಹೆಬ್ಬಾಳ, ಮುಗಳಖೋಡ, ಮಾಚಕನೂರು, ಮಲ್ಲಾಪೂರ ಮತ್ತು ಮಂಟೂರು ಕ್ರಾಸ್ಗಳಲ್ಲಿ 110 ಕಿ.ವ್ಯಾ ಸಾಮಾರ್ಥ್ಯದ 5 ವಿದ್ಯುತ್ ವಿತರಣಾ ಕೇಂದ್ರಗಳು ಒಟ್ಟು 60.25 ಕೋಟಿ ರೂ.…

ನದಿಗಳ ಜೋಡಣೆ: ರಾಜ್ಯಗಳಿಗೆ ನೀರು ಹಂಚಿಕೆ ನಂತರ ಡಿಪಿಆರ್- ರಾಜ್ಯದ ಮನವಿ ಪರಿಗಣಿಸಲು ಅಮಿತ್ ಷಾ ಸೂಚನೆ

ಬೆಂಗಳೂರು, ನ,15:ಗೋದಾವರಿ, ಕೃಷ್ಣಾ, ಕಾವೇರಿ ಮತ್ತು ಪಾಲಾರ್ ನದಿ ಜೋಡಣೆ ಡಿಪಿಆರ್ ಸಿದ್ಧ ಪಡಿಸುವ ಮುನ್ನ ರಾಜ್ಯಗಳ ನೀರಿನ ಹಂಚಿಕೆ ಆಗಬೇಕೆಂದು ರಾಜ್ಯ ಸಲ್ಲಿಸಿರುವ ಅಹವಾಲು ಪರಿಗಣಿಸಿ, ಮುಂದುವರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ 14ರಂದು ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಭಾಗವಹಿಸಿ, ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಈ ಮಾಹಿತಿ ನೀಡಿದರು.…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಬೆಂಗಳೂರು,ನ,೦೯: ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ನಿಮಗಳ ಅನುಸಾರ ಕವಿತೆಗಳನ್ನು ಕಳುಹಿಸಬಹುದು. ಹಸ್ತಪ್ರತಿ ಕಳಿಸಲು ನಿಯಮಗಳು ಈ ಕೆಳಗಿನಂತಿವೆ. ೧. ಮೂವತ್ತಕ್ಕಿಂತಲೂ ಹೆಚ್ಚಿನ ಸ್ವರಚಿತ ಕನ್ನಡ ಕವಿತೆಗಳನ್ನು ಹಸ್ತಪ್ರತಿಯು ಒಳಗೊಂಡಿರಬೇಕು. ೨. ಅನುವಾದಿತ, ಹನಿಗವನ ಮತ್ತು ಚುಟುಕು ಕವಿತೆಗಳ ಹಸ್ತಪ್ರತಿಗಳು ಬೇಡ. ೩. ಪ್ರವೇಶವನ್ನು ಕಳಿಸುವ ಯುವಕವಿಗಳು ನಲವತ್ತೈದು ವರ್ಷದೊಳಗಿನವರಾಗಿರಬೇಕು. ೪ ಈ ಪ್ರಶಸ್ತಿಯು ೫,೦೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ೫.…

ರಾಜ್ಯದ ೨೫ ವಿಧಾನರಪಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು,ನ,೦೯:ಕರ್ನಾಟಕ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ ೨೫ ಸ್ಥಾನಗಳಿಗೆ ಡಿಸೆಂಬರ್ ೧೦ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ ೧೪ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ ೧೬ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ ೨೩ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ ೨೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ ೨೬ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ ೧೦ ಶುಕ್ರವಾರ ಬೆಳಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ. ಬೆಂಗಳೂರು ನಗರ,…

ಅಪ್ಪು ಅನ್ನ ಸಂತರ್ಪಣೆಗೆ ಹರಿದು ಬಂದ ಜನಸಾಗರ

ಬೆಂಗಳೂರು,ನ,೦9: ನಾಡಿನಾದ್ಯಂತ ಮತ್ತೆ ಹರಿದು ಬಂದು ಒಂದೆಡೆ ಸೇರಿದ ಅಭಿಮಾನದ ಹೊಳೆ. ಮೇರೆ ಮೀರಿದ ಜಯಘೋಷ, ಅಭಿಮಾನದ ಹರಿವಿಗೆ ಸಾವಿರಾರು ನದಿಗಳು… ಎಂಬ ಹೊಸ ಭಾವನಾತ್ಮಕ ರೂಪಕಕ್ಕೆ ಪುನೀತ್ ಪುಣ್ಯಸ್ಮರಣೆಯ ೧೨ನೇ ದಿನ ಸಾಕ್ಷಿಯಾಯಿತು ಪುಣ್ಯಸ್ಮರಣೆಯ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಗರದ ಅರಮನೆ ಮೈದಾನದ ‘ತ್ರಿಪುರವಾಸಿನಿ’ ಅಂಗಣದಲ್ಲಿ ನಡೆಯಿತು. .ಪುನೀತ್ ಪತ್ನಿ ಅಶ್ವಿನಿ, ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದರು. ಬಳಿಕ ಶಿವರಾಜ್‌ಕುಮಾರ್ ರಕ್ತದಾನ ಮಾಡಿದರು. ಅನ್ನಸಂತರ್ಪಣೆಗೆ ಚಾಲನೆ ನೀಡಿದ ಬಳಿಕ ಭಾವುಕರಾದ…

1 27 28 29 30 31 49
error: Content is protected !!