Browsing: ರಾಜ್ಯ

ರಾಜ್ಯ

ಬಿಎಸ್‌ವೈ ಅಧಿಕಾರಕ್ಕೆ ಬಂದಾಗಿನಿಂದಲೂ ಸಂಕಷ್ಟಗಳು ಎದುರಾಗಿವೆ-ಕಾರಜೋಳ

ಧಾರವಾಡ,ಮೇ,೨೦: ಬಿಎಸ್‌ವೈ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದಲೂ ಒಂದಲ್ಲಾ ಒಂದು ಕಷ್ಟಗಳು ಬರುತ್ತಲೇ ಇವೆ ಆದರೆ ಅವೆಲ್ಲವನ್ನು ಅಷ್ಟೆ ಸಲೀಸಾಗಿ ಅವರು ನಿಭಾಯಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ವೃತಾ ಸರ್ಕಾರ ವಿಫಲವಾಗಿದೆ ಎಂದು ಧೂಷಣೆ ಮಾಡುತ್ತಲೆ ಇದ್ದಾರೆ ಆದರೆ ಸರ್ಕಾರ ಎಲ್ಲಿಯೂ ವಿಫಲವಾಗಿಲ್ಲ ಎಷ್ಟೆ ಕಷ್ಟಗಳಿದ್ದರೂ ಅದರ ಮಧ್ಯೆ ಸರ್ಕಾರ ಜನರಿಗೆ ಸ್ಪಂದಿಸುತ್ತಿದೆ ಎಂದ ಅವರು, ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದಾಗಿನಿಂದಲೇ ಸಂಕಷ್ಟಗಳ ಸರಮಾಲೆ ಎದುರಾಗಿದೆ.…

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್:ಸುಧಾಕರ್

ಬೆಂಗಳೂರು, ಮೇ 20:ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಇತ್ತೀಚೆಗೆ 800 ಕಾನ್ಸಂಟ್ರೇಟರ್ ಬಂದಿದ್ದು, ಜಿಲ್ಲೆಗಳಿಗೆ ಹಂಚಲಾಗುತ್ತಿದೆ. ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ ಎಂದರು. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು…

ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅಗತ್ಯ-ಬೊಮ್ಮಾಯಿ

ಬೆಂಗಳೂರು,ಮೇ,20:ಖಾಸಗಿ ಸಂಘಸಂಸ್ಥೆಗಳ ಸಹಭಾಗಿತ್ವ ಇದ್ದಾಗ ಮಾತ್ರ ಕೋವಿಡ್ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಹೀಗಾಗಿ ಕೋವಿಡ್ ವಿರುದ್ಧ ಹೋರಾಟಕ್ಕೆ ಮುಂದಾಗುವ ಖಾಸಗಿ ಸಂಘ-ಸಂಸ್ಥೆಗಳಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿನ ರಾಜೀವ್ ಗಾಂಧಿ ಮಹಾವಿದ್ಯಾಲಯದಲ್ಲಿ ಆರಂಭವಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಪಕ್ಷಾತೀತವಾಗಿ ಕೋವಿಡ್ ವಿರುದ್ಧ…

ರಸಗೊಬ್ಬರಕ್ಕೆ ಕೇಂದ್ರದ ಐತಿಹಾಸಿಕ ತೀರ್ಮಾನ: ಬಿ.ಸಿ.ಪಾಟೀಲ್

ಬೆಂಗಳೂರು,ಮೇ.20:ಕೇಂದ್ರ ಸರ್ಕಾರ ಕೂಡ ಮಹತ್ವ ನಿರ್ಧಾರ ತೆಗೆದುಕೊಂಡಿದೆ‌.ರಸಗೊಬ್ಬರದ ಬೆಲೆಯನ್ನು ಮೊದಲಿನಂತೆ ನೀಡುತ್ತಿದ್ದು,ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್,ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕೃಷಿಕರಿಗೆ ಕೊರತೆ ಇದೆ ಎಂದು ಕೆಲವರು ಹೇಳುತ್ತದ್ದಾರೆ. ಆದರೆ ಸರ್ಕಾರ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಿಸಿದೆ. ಕೃಷಿಕರಿಗೆ,ಹೂಬೆಳೆಗಾರರಿಗೆ ಪರಿಹಾರ ನೀಡಿದ್ದಾರೆ.ಸಂಕಷ್ಟದ ಈ ಪ್ಯಾಕೇಜ್ ಅನ್ನುಸ್ವಾಗತಿಸುವುದಾಗಿ ಹೇಳಿದರು. ಕೊಪ್ಪಳ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಇರುವ ಬಗ್ಗೆ ಸಿಎಂ ಭೇಟಿಯಾಗಿ ಮನವಿ‌ ಸಲ್ಲಿಸಿ 300…

ಲಾಕ್‌ಡೌನ್ ಯಶಸ್ವಿಗೊಳಿಸಲು ಮತ್ತಷ್ಟು ಬಿಗಿ ಕ್ರಮ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು,ಮೇ,೨೦: ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್‌ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್‌ಡೌನ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್‌ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ…

ಗ್ರಾಮೀಣ ಪ್ರದೇಶದಲ್ಲಿ ಮನೆ ಆರೈಕೆ ಇಲ್ಲದಿದ್ದರೆ ಕೋವಿಡ್ ಕೇದ್ರಕ್ಕೆಅವಕಾಶ;ಸುಧಾಕರ್

ಬೆಂಗಳೂರು,ಮೇ,19:ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಸ್ಥಳೀಯರು, ಸಂಘಟನೆ, ಮುಖಂಡರಿದ್ದು, ಕೋವಿಡ್ ನಿರ್ವಹಣೆ ಮಾಡುತ್ತಾರೆ. ರೋಗಿಗೆ ಮನೆ ಆರೈಕೆ ಸೌಲಭ್ಯಗಳಿಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗುತ್ತದೆ ಎಂದು ತಿಳಿಸಿದರು. 2 ಕೋಟಿ ಕೋವಿಶೀಲ್ಡ್ ಲಸಿಕೆ ಖರೀದಿಸಲು ಸೀರಂ…

ಲಾಕ್‌ಡೌನ್ ಹಿನ್ನೆಲೆ-೧,೨೫೦ ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ

ಬೆಂಗಳೂರು,ಮೇ,೧೯: ಕೊರೊನಾ ಎರಡನೇ ಅಲೆ ತೀವ್ರವಾಗಿ ಬಾದಿಸಿದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾಡಲಾಗಿತ್ತು ಹೀಗಾಗಿ ಹಲವು ಅಸಂಘಿಟಿತ ವಲಯಗಳ ಕಾರ್ಮಿಕರಿಗೆ ರೈತರಿಗೆ ದಿನಗೂಲಿ ನೌಕರರಿಗೆ,ಬಡವರು ಹಾಗೂ ನಿರ್ಗತಿಕರಿಗೆ ರಾಜ್ಯ ಸರ್ಕಾರ ೧,೨೫೦ ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಬುಧವಾರ ಬೆಳಿಗ್ಗೆ ಹಿರಿಯ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಿವಿಧ ಅಸಂಘಟಿತ ವಲಯಗಳಿಗೆ ಆರ್ಥಿಕ ಪ್ಯಾಕೇಜ್ ನೀಡಲಾಗುವುದು ಎಂದು ಹೇಳಿದರು. ಆಟೋ,ಕ್ಯಾಬ್ ಚಾಲಕರಿಗೆ ನೋಂದಾಯಿತ ನಿರ್ಮಾಣ…

ನಾಳೆ ಲಾಕ್‌ಡೌನ್ ವಿಸ್ತರಣೆ,ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು,ಮೇ: ಮುಖ್ಯಮಂತ್ರಿ ಬಿ.ಎಸ್.ಯಿಡಯೂರಪ್ಪ ನಾಳೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.ಈ ವೇಳೆ ಲಾಕ್ ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಬಗ್ಗೆ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ನಾಳೆ ೧೧.೩೦ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ ಇದಕ್ಕೂ ಮುನ್ನ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಕುರಿತಂತೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಶೇಷ ಪ್ಯಾಕೇಜ್‌ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಹಣದ ನೆರವು.ಮಡಿವಾಳ, ಸವಿತಾ ಸಮುದಾಯಕ್ಕೆ ನೆರವು ,ಟ್ಟಡ ಕಾರ್ಮಿಕರಿಗೆ ಮನಿ…

ಎರಡನೇ ಹಂತದ ಲಾಕ್‌ಡೌನ್ ನಂತರ ಪ್ಯಾಕೇಜ್ ಘೋಷಣೆ-ಅಶೋಕ್

ಕಾರವಾರ,ಮೇ,೧೮: ಲಾಕ್‌ಡೌನ್ ಮುಂದುವರೆಸಬೇಕೆ ಬೇಡವೇ ಕುರಿತು ಮುಖ್ಯಮಂತ್ರಿಗಳು ನಿರ್ಧರಿsಲಿದ್ದು ಎರಡನೇ ಹಂತದ ಲಾಕ್‌ಡೌನ್ ಘೋಷಣೆ ನಂತರ ಪ್ಯಾಕೇಜ್‌ಘೋಷಣೆಯೂ ಮಾಡುತ್ತಾರೆ ಎನ್ನುವ ಸುಳುವಿನ್ನು ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಭಟ್ಕಳದಲ್ಲಿ ಚಂಡಮಾರುದಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೆ ಬೇಡವೇ ಎನ್ನುವ ಕುರಿತು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಈ ವೇಳೆ ಎರಡನೇ ಹಂತದ ಘೋಷಣೆ ಮಾಡಿದಾಗ ಪ್ಯಾಕೇಜ್ ಕೂಡ ಘೋಷಣೆ ಮಾಡುತ್ತಾರೆ ಎಂದು ಅವರು ಹೇಳಿದರು ಹಳ್ಳಿಗಳಲ್ಲಿ…

ಕೊರೊನಾ ಚಿಕಿತ್ಸೆಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬಿಬಿಎಂಪಿ ಹೊಸ ಹೊಸ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಒಂದು ರೀತಿ ಜ್ಞಾನೋದಯವಾದಂತೆ ಈಗ ಚಿಕಿತ್ಸೆಗೆ ಮೂರು ಹಂತದ ವ್ಯವಸ್ಥೆಯನ್ನು ಮಾಡಲು ಈಗ ನಿರ್ಧರಿಸಿದೆ. ಈ ಕುರಿತಂತೆ ಈ ಮೂರು ಹಂತದ ವ್ಯವಸ್ತೆ ಹೇಗಿರಬೇಕು ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ತಗೆದುಕೊಳ್ಳಬಹುದಾದ ಜಾಗೃತಿ ಕುರಿತಂತೆ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಬಿಡುಗಡೆ ಮಾಡಿದ್ದಾರೆ ಒಟ್ಟು ಮೂರು ಹಂತಗಳಲ್ಲಿ ಚಿಕಿತ್ಸಾ ನಿರ್ಧಾರ ಕೇಂದ್ರಗಳನ್ನು (ಪಿಟಿಸಿ) ಆರಂಭಿಸುವಂತೆ ಸೂಚಿಸಿದ್ದಾರೆ. ಸೋಂಕಿತರ ದೇಹಸ್ಥಿತಿ ಅವಲೋಕಿಸಿ…

ಕೊರೊನಾಗೆ ಬಲಿಯಾದ ಅಂಗನವಾಡಿಕಾರ್ಯಕರ್ತೆಯರಿಗೆ ೩೦ ಲಕ್ಷ ಪರಿಹಾರ-ಜೊಲ್ಲೆ

ಬೆಂಗಳೂರು,ಮೇ,೧೮:ಕೋವಿಡ್-೧೯ ಕ್ಕೆ ಬಲಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ೩೦ ಲಕ್ಷ ರೂ ಪರಿಹಾರ ಧನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೊರೊನಾದಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಎರಡನೇ ಅಲೆಯಲ್ಲಿ ಪೋಷಕರು ತೀರಿ ಹೋಗಿ ಮಕ್ಕಳು ಅನಾಥರಾಗಿರುವ ಪ್ರಕರಣಗಳಿವೆ. ಹೀಗಾಗಿ ಅನಾಥ ಮಕ್ಕಳಿಗೆ ಸಹಾಯ…

ನಕಲಿ ಪತ್ರಕರ್ತನ ಬಂಧಿಸಿದ ಪೊಲೀಸರು

ಹುಬ್ಬಳ್ಳಿ,ಮೇ,೧೮: ನಕಲಿ ಪತ್ರಕರ್ತರ ಹಾವಳಿ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ ಯಾರೆ ಕೇಳಿದರು ಕೆಲವರು ಪತ್ರಕರ್ತ ಎಂದು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ ಇದರ ಪರಿಣಾಮ ಹುಬ್ಬಳಿಯಲ್ಲಿ ಪೊಲೀಸರು ನಕಲಿ ಪತ್ರಕರ್ತನನ್ನು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು…

ಗ್ರಾಮೀಣ ಪ್ರದೇಶದತ್ತ ಹೆಚ್ಚು ಗಮನಹರಿಸುವಂತೆ ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಮೇ17:ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ,ಹೆಚ್ಚು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ಸೋಂಕು ನಿಯಂತ್ರಣ ಸಂಬಂಧಿಸಿದಂತೆ ಸಿಎಂ ಎಲ್ಲಾ ಜಿಲ್ಲಾಧಿಕಾರಿಗಳ,ಜಿಲ್ಲಾ ವರಿಷ್ಟಾಧಿಕಾರಿಗಳ ಸಭೆ ನಡೆಸಿದರು.ಈ ವೇಳೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್​ವೈ, ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸಮಸ್ಯೆ ಉಲ್ಬಣವಾಗುತ್ತಿದೆ. ಅದರ ಮೇಲೂ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದರು. ಬ್ಲ್ಯಾಕ್…

ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರಿಗೂ ವ್ಯಾಕ್ಸಿನ್ ಸೌಲಭ್ಯ – ಜೊಲ್ಲೆ ಭರವಸೆ

çಬೆಂಗಳೂರು ಮೇ,17:ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೊನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್…

ರಾಜ್ಯ ಸರ್ಕಾರ ಸತ್ತೇ ಹೋಗಿದೆ-ಸಿದ್ದು ಲೇವಡಿ

ಕೋಲಾರ,ಮೇ೧೭:ತಜ್ಞರು ಕೊರೊನಾ ಎರಡನೇ ಅಲೆ ಕುರಿತು ವರದಿ ಕೊಟ್ಟರು ಎಚ್ಚೆತ್ತುಕೊಳ್ಳದೆ ಸರ್ಕಾರ ಸತ್ತು ಹೋಗಿದೆ ಇಂತಹ ಮನಗೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಾಗ್ದಾಳಿ ನಡೆಸಿದ್ದಾರೆ ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ ಮುನ್ಸೂಚನೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಾನಗೆಟ್ಟ ಸರ್ಕಾರವನ್ನು ನಾನು…

ರಾಜಕಾರಣ ಬಿಟ್ಟು ಜನರ ಕಷ್ಟಕ್ಕೆ ಸ್ಪಂದಿಸಿ; ನಾರಾಯಣಗೌಡ

ಮಂಡ್ಯ ,ಮೇ17 ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೋವಿಡ್ – 19 ತಡೆಗಟ್ಟಲು ಮಾಡುತ್ತಿರುವ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಶ್ಲಾಘಿಸಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯ ಲ್ಲಿ ಮೆಡಿಸಿನ್ ಕಿಟ್ ವಿತರಣೆ ಮಾಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರ ಜನಪರ ಕಾರ್ಯಗಳನ್ನು ನೆನೆದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿದಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಖುದ್ದು ಅವಲೋಕಿಸುತ್ತಿದ್ದೇನೆ. ನಿಮ್ಮೊಂದಿಗೆ…

ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಮೇ,17: ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ Ôವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಈ ವೇಳೆ ಇತ್ತೀಚೆಗೆ ಕೋವಿಡ್ ನಿಂದ ಸಾವನ್ನಪ್ಪಿದ  ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್,ಸೇರಿದಂತೆ ಸಾವನ್ನಪ್ಪಿದ  ಪತ್ರಕರ್ತರುಗಳಿಗೆ ಶ್ರದ್ದಾಂಜಲಿ ಸಲ್ಲಿಸಿ ನುಡಿ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲು.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ರಾಜ್ಯಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಬಂಗ್ಲೆ ಮಲ್ಲಿಕಾರ್ಜುನ,ಬಿ.ಬಿ.ಎಂ.ಪಿ.ಸದಸ್ಯ…

ಜಿಡಿಎಸ್ ನಿಂದ 2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ

ಬೆಂಗಳೂರು,ಮೇ,17: ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ಲೈನ್‌ ಸಮಾಲೋಚನೆ ನಡೆಸಿದರು. ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ…

ಆನೇಕಲ್ ;ಬೆಡ್ ಬುಕಿಂಗ್, ಮಿನಿ ವಾರ್ ರೂಂ ಸೇವೆಗಳಿಗೆ ಚಾಲನೆ

ಪರಶಿವ ಧನಗೂರು. ಬೆಂಗಳೂರು,ಮೇ17:ಎರೆಡನೇ ಅಲೆಯ ರೂಪಾಂತರಿ ಡಬಲ್ ಮ್ಯುಟೆಂಟ್ ವೈರಸ್ ಆನೇಕಲ್ ತಾಲೂಕಿಗೆ ವಿಶೇಷ ಶಾಪವಾಗಿ ಪರಿಣಮಿಸಿದ್ದು ಈವರೆಗೆ ಬೆಡ್ ಬುಕಿಂಗ್, ಆಮ್ಲಜನಕ ಕೊರತೆ ವೆಂಟಿಲೇಷನ್ ಆಸ್ಪತ್ರೆಗಳ ಅಲಭ್ಯತೆ ಸೋಂಕಿತರನ್ನು ಸಾಕಷ್ಟು ಕಾಡಿತ್ತು. ಬೆಂಗಳೂರಿನ ಬೊಮ್ಮನಹಳ್ಳಿ ವಾರ್ ರೂಂ ಅಕ್ಷರಶಃ ಆನೇಕಲ್ ಜನತೆಗೆ ಮರೀಚಿಕೆಯಾಗಿತ್ತು. ಸಾಕಷ್ಟು ಸಾವುಗಳನ್ನು ಕಂಡ ಜನತೆಗೆ ಬೆಂಗಳೂರು ನಗರ ಜಿಲ್ಲಾದಿಕಾರಿಗಳು ರಾಜ್ಯ ಸರ್ಕಾರದ ಆದೇಶದಂತೆ ಆನೇಕಲ್ ವಿಧಾನ ಸಭಾ ಕ್ಷೇತ್ರದಲ್ಲಿಯೇ ಕೋವಿಡ್-19 ಚಿಕಿತ್ಸೆಯ ಸರಧಿ ತೀರ್ಮಾನ ಕೇಂದ್ರ (ಟ್ರೈಯಾಗಿಂಗ್ ಸೆಂಟರ್) ವನ್ನು ಚಾಲನೆಗೊಳಿಸಿದರು.…

ಹತ್ತನೇ,ಪಿಯು ಪರೀಕ್ಷೆಗಳ ರದ್ದತಿಗೆ ತೀರ್ಮಾನಿಸಿಲ್ಲ-ಸುರೇಶ್‌ಕುಮಾರ್

ಬೆಂಗಳೂರು,ಮೇ,೧೭: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು  ಹೇಳಿದರು ಕೆಲವೆಡೆ ಪರೀಕ್ಷೆ ರದ್ದು ಮಾಡುವ ಬಗ್ಗೆ ಊಹಾಪೋಹವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ…

error: Content is protected !!