ರಾಜ್ಯ
ಬ್ಲಾಕ್ ಫಂಗಸ್ ಔಷಧ ತರಿಸಿಕೊಳ್ಳುವಂತೆ ಸರ್ಕಾರಕ್ಕೆ ಎಚ್ಡಿಕೆ ಸಲಹೆ
ಬೆಂಗಳೂರು, ಮೇ ೧೭: ರಾಜ್ಯದಲ್ಲಿ ಎಲ್ಲರಲ್ಲೂ ಭಯ ಹುಟ್ಟಿಸಿರುವ ಕಪ್ಪು ಶಿಲೀಂಧ್ರದ ಔಷಧಗಳನ್ನು ತರಿಸಿಕೊಳ್ಳುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ತರಿಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ ೧,೦೫೦ ವಾಯ್ಲ್ಗಳು (ಶೀಶೆ)…