ರಾಜ್ಯ
ಕನ್ನಡ ಧ್ವಜಕ್ಕೆ ಬೆಂಕಿ; ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು,ಡಿ,15: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ ಎಂದಿರುವ ಅವರು. ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಎಂಇಎಸ್ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ…



















