ರಾಜ್ಯ
ಎಡಬಿಡದೆ ಮಳೆಯಿಂದ ಡ್ಯಾಂಗಳಿಂದ ಹರಿಬಿಟ್ಟ ನೀರು,ಪ್ರವಾಹದ ಭೀತಿಯಲ್ಲಿ ಜನ
ಬೆಂಗಳೂರು,ಜು,26:ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಕಾರಣ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಮನೆಗಳು ಕುಸಿದಿವೆ. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿವೆ. ಭಾರೀ…