ರಾಜ್ಯ
ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ
ಬೆಂಗಳೂರು, ಆ, 14:ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ,…

















