ರಾಜ್ಯ
ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಜೂ.29-“ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ”…