Browsing: ರಾಜ್ಯ

ರಾಜ್ಯ

ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ

ಬೆಂಗಳೂರು, ಜೂ.18-“ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ, ಜಲ ಸಂರಕ್ಷಣೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್…

ನಂದಿನಿ ಬ್ರ್ಯಾಂಡ್ ಅನ್ನು ಕಾಂಗ್ರೆಸ್ ಸರ್ವನಾಶಮಾಡಲು ಹೊರಟಿದೆ- ಅಶೋಕ್ ವ್ಯಂಗ್ಯ

ಬೆಂಗಳೂರು, ಜೂ,18-ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ…

ಜಿಲ್ಲಾ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬೆಂಗಳೂರು,ಜೂ,18-ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿದರಲ್ಲದೆ, ವಿಶೇಷ ಸಭೆಯಲ್ಲಿ ಪಾಲ್ಗೊಂಡರು. ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಪಕ್ಷದ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪದಾಧಿಕಾರಿಗಳು ಮತ್ತು ಎಲ್ಲ ನೂತನ…

532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿ.ಎಂ ಘೋಷಣೆ

ಬೆಂಗಳೂರು ಜೂ 18- ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು…

ದೇಶದ ಪ್ರಥಮ ಸಫಾರಿ ಇ.ವಿ. ಬಸ್ ಗೆ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು, ಜೂ. 18- ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್…

10 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಇಂಜಿನಿಯರ್

ಬೆಂಗಳೂರು, ಜೂ,18- 10 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಗುತ್ತಿಗೆದಾರರ ಕಡತವನ್ನು ಪರಿಶೀಲಿಸಿ ಕಳಿಸಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಣದ ಸಹಿತ ಯರಪ್ಪ ರೆಡ್ಡಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಬೆಂಗಳೂರು, ಜೂ,15-: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ…

ಸಿ.ಎಂ., ಡಿ.ಸಿ.ಎಂ. ರಾಜೀನಾಮೆಗೆ ಒತ್ತಾಯಿಸಿ 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

15 ಬೆಂಗಳೂರು,ಜೂ,15- ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ  ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು…

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ; ದೇವೇಗೌಡ

ಬೆಂಗಳೂರು,ಜೂ,15- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. *ಜನರೊಂದಿಗೆ ಜನತಾದಳ* ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮ…

ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

ಯಾದಗಿರಿ,ಜೂ,14- ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಆರೋಗ್ಯ…

ಸಮರ್ಥ ಆಡಳಿತದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ: ಬಿ.ವೈ.ವಿಜಯೇಂದ್ರ

ಕಲಬುರ್ಗಿ,ಜೂ,14-ಯುಪಿಎ ಸರಕಾರದ ಅವಧಿಯಲ್ಲಿ ಭಾರಿ ಹಗರಣಗಳು ನಡೆದಿದ್ದವು. ಬಳಿಕ ಎನ್.ಡಿ.ಎ. ಅವಧಿಯಲ್ಲಿ ಈ ದೇಶಕ್ಕೆ ಉಜ್ವಲ ಭವಿಷ್ಯವಿದೆ; ಭಾರತದಲ್ಲಿ ಭ್ರಷ್ಟಾಚಾರರಹಿತ ಆಡಳಿತ ನೀಡಲು ಸಾಧ್ಯವಿದೆ ಎಂಬುದನ್ನು ನರೇಂದ್ರ ಮೋದಿಜೀ ಅವರ ಸರಕಾರ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತಲುಪಬಹುದು ಎಂಬ ವಿಶ್ವಾಸವನ್ನು ನರೇಂದ್ರ ಮೋದಿಜೀ ಅವರ ಸರಕಾರ ನೀಡಿದೆ ಎಂದು ತಿಳಿಸಿದರು. 11…

ಲಕ್ಷ ವೃಕ್ಷ’ ಅಭಿಯಾನಕ್ಕೆ ಚಾಲನೆ..

ಕಲಬುರ್ಗಿ ,ಜೂ,14- ವಿಶ್ವ ಪರಿಸರ ದಿನಾಚರಣೆ ಸಂಬಂಧ ದೇಶಾದ್ಯಾಂತ ಆಯೋಜಿಸಿರುವ ‘ಲಕ್ಷ ವೃಕ್ಷ’ ಅಭಿಯಾನದ ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ಶಾಸಕರಾದ ಬಸವರಾಜ್ ಮತ್ತಿಮೂಡ, ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಮಾಜಿ ಶಾಸಕ ಅಪ್ಪು ಪಾಟೀಲ್, ಜಿಲ್ಲಾಧ್ಯಕ್ಷ…

371ಜೆ ಜಾರಿ ಹಿಂದೆ ಖರ್ಗೆ,ದರ್ಮಸಿಂಗ್ ಹೋರಾಟದ ಶ್ರಮ ಇದೆ; ಸಿ.ಎಂ

ಯಾದಗಿರಿ ಜೂ 14-ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ…

ಪತ್ರಿಕೋದ್ಯಮ ಜನಪರ ಕೆಲಸ ಮಾಡುವುದು ಮುಖ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು,ಜೂ,14-ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಶೇಷಾದ್ರಿಪುರಂ ಕಾಲೇಜಿನಲ್ಲಿ ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಡಾ. ಕೂಡ್ಲಿ ಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ನನ್ನ ಆತ್ಮೀಯ ಸ್ನೇಹಿತನಿಗೆ ಈ ಪ್ರಶಸ್ತಿ…

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ, 12: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ…

ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ

ಬೆಂಗಳೂರು,ಜೂ,11-ಅಪಾಯಕಾರಿ ಸಿಎಚ್ ಪೌಡರ್‌ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ತಿಮ್ಮಾಪೂರ ಅವರು, ರಾಯಚೂರು ಸೇರಿದಂತೆ ಆಂಧ್ರ, ತೆಲಂಗಾಣ ಗಡಿಯಲ್ಲಿ ನಿಷೇಧಿತ ಸಿಹೆಚ್ ಪೌಡರ್ ಮಿಕ್ಸಿಂಗ್‌ನಿಂದ ಸೇಂದಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಡಬೇಕು. ಸಿಹೆಚ್ ಪೌಡರ್ ಮಿಕ್ಸಿಂಗ್‌ಗೆ ಅವಕಾಶ ಸಿಗದಂತೆ ಎಚ್ಚರವಹಿಸಬೇಕು.…

ಕೀರ್ತನಾ ವೈದ್ಯಕೀಯ ನೆರವಿಗೆ ಮೋಹನ್ ದಾಸ್ ಪೈ, ರವಿ ಪೈ ಗೆ ಜಮೀರ್ ಅಹಮದ್ ಮನವಿ

ಬೆಂಗಳೂರು,ಜೂ,11-ಅನುವಂಶೀಯ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ – ಕಿಶೋರ್ ದಂಪತಿಯ ಎರಡು ವರ್ಷದ ಮಗು ಕೀರ್ತನಾ ಗೆ ಸಿ ಎಸ್ ಆರ್ ನಿಧಿಯಡಿ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರು, ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ಮುಖ್ಯಸ್ಥ ಮೋಹನ್ ದಾಸ್ ಪೈ ಹಾಗೂ ಸೆಂಚುರಿ ಬಿಲ್ಡರ್ಸ್ ನ ರವಿ ಪೈ ಅವರಿಗೆ ಮನವಿ ಸಲ್ಲಿಸಿದರು. ಕೀರ್ತನಾ ವೈದ್ಯಕೀಯ ಚಿಕಿತ್ಸೆಗೆ 16 ಕೋಟಿ ರೂ. ವೆಚ್ಚ ಆಗಲಿದ್ದು ಜಮೀರ್ ಅಹಮದ್ ಖಾನ್…

ಅಧ್ಯಕ್ಷರನ್ನು ಬದಲಿಸಲ್ಲ, ಸಂಪುಟ ವಿಸ್ತರಣೆ ಮಾಡಲ್ಲ: ಖರ್ಗೆ

ಕಲಬುರಗಿ,ಜೂ,11- ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ, ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದಾಗ, ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ…

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?- ಶ್ರೀರಾಮುಲು

ಬೆಂಗಳೂರು,ಜೂ,11-ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಮಕ್ಕಳ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದೇ ಹಣದಲ್ಲಿ ಇವತ್ತು ಸಂಸದರು ಮತ್ತು ವಿಧಾನಸಭಾ ಸದಸ್ಯರಾಗಿರಬಹುದು. ಆದರೆ ಈ ನಾಡಿನ ಜನ ಎಲ್ಲವನ್ನು ನೋಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ ಸಂಸದ…

ಮುಂದಿನ 3 ವರ್ಷದಲ್ಲಿ 60 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದಿನೆ: ಸಿ.ಎಂ ಭರವಸೆ

ದೊಡ್ಡಬಳ್ಳಾಪುರ ಜೂ 11-ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ…

1 3 4 5 6 7 49
error: Content is protected !!