Browsing: ರಾಜ್ಯ

ರಾಜ್ಯ

ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ರಾಜೇಶ್ವರಿ

ಬೆಂಗಳೂರು ಜುಲೈ 24: ಕರೋನಾ ಸಾಂಕ್ರಾಮಿಕದ ಲಾಕ್‌ಡೌನ್‌ ನಿಂದ ತೀವ್ರ ತೊಂದರೆಗೀಡಾಗಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ನಟಿ ರಾಜೇಶ್ವರಿ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ  ಆಯೋಜಿಸಲಾಗಿರುವ ಇಂಡಿಯನ್‌ ಆರ್ಟಿಸನ್ಸ್‌ ಬಜಾರ್‌ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರೋನಾ ಎರಡನೇ ಅಲೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ತೊಂದರೆಗೀಡಾಗಿದ್ದು ಕರಕುಶಲಕರ್ಮಿಗಳು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಗಾಗ್ಗೆ ಆಯೋಜಿಸಲಾಗುತ್ತಿದ್ದ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಬಹಳಷ್ಟು ಕರಕುಶಲಕರ್ಮಿಗಳಿಗೆ ಅಗತ್ಯ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಒದಗಿಸುತ್ತಿತ್ತು.…

26ರಿಂದ ಡಿಗ್ರಿ ಕಾಲೇಜ್‌ ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

ಬೆಂಗಳೂರು,ಜು,21: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಬುಧವಾರ ಟೊಕಿಯೋ ಒಲಿಂಪಿಕ್‌-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್‌ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಮಾತನಾಡಿದರು. ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ…

ದ್ವಿತೀಯ ಪಿಯು ಫಲಿತಾಂಶ ಪ್ರಕಟ;ದ.ಕ.ಜಿಲ್ಲೆ ಪ್ರಥಮಸ್ಥಾನ

ಬೆಂಗಳೂರು,ಜು,೨೦:ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಫಿಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮಸ್ಥಾನ ಗಳಿಸಿಕೊಂಡಿದೆ. ಪ್ರಾಥಮಿಮಿ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು,.ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೪,೫೦,೭೦೬ ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ೧,೪೭,೦೫೬ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ೬೮,೭೨೯ ವಿದ್ಯಾರ್ಥಿಗಳು ಜಸ್ಟ್ ಪಾಸಾಗಿದ್ದಾರೆ. ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಪರೀಕ್ಷೆ ಇಲ್ಲದೆ…

ಕುಮಾರ ನಿಜಗುಣ ಸ್ವಾಮೀಜಿ ಇನ್ನಿಲ್ಲ

ಡಾ ಆರೂಢಭಾರತೀ ಸ್ವಾಮೀಜಿ ಬೆಂಗಳೂರು, ಜು,20:ಮೈಸೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿಯ ಶ್ರೀ ನಿಜಗುಣ ಶಿವಯೋಗಿ ಕ್ಷೇತ್ರದ ಶ್ರೀ ಕುಮಾರ ನಿಜಗುಣ ಸ್ವಾಮೀಜಿಯವರು(88) ಇಂದು ಬೆಳಿಗ್ಗೆ 2 ಘಂಟೆಗೆ ಮೈಸೂರಿನಲ್ಲಿ ಲಿಂಗೈಕ್ಯರಾದರು. ಇಂದು ಮಧ್ಯಾಹ್ನ ಚಿಲಕವಾಡಿಯ ಶ್ರೀ ನಿಜಗುಣ ಕ್ಷೇತ್ರದಲ್ಲಿ ಹರ ಗುರು ಚರಮೂರ್ತಿಗಳ ಭಕ್ತಾದಿಗಳ ಸಮ್ಮುಖದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಸಮಾಧಿ ಮಾಡಲಾಗುವುದು. ಶ್ರೀಗಳು ವಯೋವೃದ್ಧ ಹಿರಿಯ ಸಂನ್ಯಾಸಿಗಳು. ಗೃಹಸ್ಥಾಶ್ರಮದಲ್ಲಿ ವಕೀಲರಾಗಿದ್ದವರು. ಸಿದ್ಧಗಂಗೆಯ ಶ್ರೀ ಶಿವಕುಮಾರ ಮಹಾ ಸ್ವಾಮಿಗಳವರಿಂದ ಸಂನ್ಯಾಸ ದೀಕ್ಷೆ ಪಡೆದವರು. ಕೊಳ್ಳೇಗಾಲ…

ಬಾವೈಕ್ಯತೆ ಸಾರುವ ಅಪರೂಪದ ವಿದ್ಯಾಸಂಸ್ಥೆ-ಶಿವಾನಂದ ತಗಡೂರು

ಶಿಕಾರಿಪುರ,ಜು,೧೯:ನಾನು ಊಹೇ ಕೂಡ ಮಾಡಿರಲಿಲ್ಲ ಬಹುಶಃ ಕೋಮು ಸೌಹಾರ್ದಯುತ ಸಂಸ್ಥೆ ಇದಾಗಿರಬೇಕೆಂದು ಕೊಂಡಿದ್ದೆ.ಆದರೆ ಸಂಸ್ಕಾರ ಬಾವೈಕ್ಯತೇ ಸಾರುವ ಅಪರೂಪದ ವಿದ್ಯಾಸಂಸ್ಥೆ ಎಂದು ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬಣ್ಣಿಸಿದರು. ಅವರು ನಗರದ ಜುಬೇದ ವಿದ್ಯಾ ಸಂಸೆ ಹಮ್ಮಿಕೊಂಡಿದ್ದ ವಿಶೇಷ ಸನ್ಮಾನ ಸಮಾರಂಭ ದಲ್ಲಿ ಬಾಗಿವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು. ಇಲ್ಲಿ ಕಾಯಕದ ವಿದ್ಯಾ ಸಂಸ್ಥೆ ಇರುವುದು ಬಹಳ ಹೆಮ್ಮೆಯ ಸಂಗತಿ.ಸುಮಾರು ಹದಿನೇಳು ಎಕರೆ ಪ್ರದೇಶದಲ್ಲಿ ಜಾತಿಭೇದ ವಿಲ್ಲದೆ ಸಮಾಜ ಮುಖಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೀರ್ತಿಗೆ…

ಅಧಿಕಾರ ಹೋದರೆ ಹೋಗಲಿ,ಸಂಘಟನೆ ಕೆಲಸಮಾಡ್ತೀನಿ; ಈಶ್ವರಪ್ಪ ಅಕ್ರೋಶ

ಶಿವಮೊಗ್ಗ,ಜು,19: ಮಂತ್ರಿಸ್ಥಾನ ಹೋದರೆ ಹೋಗಲಿ. ನಾನೇನೂ ಗೂಟ ಹೊಡ್ಕೊಂಡು ಕೂರಲು ಬಂದಿಲ್ಲ. ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ಮಂತ್ರಿ ಸ್ಥಾನ ಇಲ್ಲಾಂದರೆ ಸಂಘಟನೆಯ ಕೆಲಸ ಮಾಡ್ತೀನಿ. ಸಂಘಟನೆಯ ಹಿರಿಯರು ವಹಿಸಿಕೊಡುವ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ಹೊರಹಾಕಿದರು. ಬಿಜೆಪಿ ರಸಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ಭಹಿರಂಗ ಗೊಂಡ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪ ಪದಚ್ಯುತರಾಗಲಿದ್ದಾರೆ. ಈಶ್ವರಪ್ಪ, ಶೆಟ್ಟರ್ ಟೀಂ ಹೊರ ಹೋಗುತ್ತಾರೆ. ಮೂವರಲ್ಲಿ ಒಬ್ಬರು ಅಧಿಕಾರ…

ಮತ್ತಷ್ಟು ನಿಯಮ ಸಡಿಲ; ಚಿತ್ರಮಂದಿರ, ಕಾಲೇಜುಗಳಿಗೆ ಅವಕಾಶ

ಬೆಂಗಳೂರು,ಜು,೧೮:ಕೋವಿಡ್ ನಿಯಮಗಳನ್ನು ಹಂತ ಹಂತವಾಗಿ ಸಡಿಲಿಸುತ್ತಾ ಬರುತ್ತಿರುವ ಸರ್ಕಾರ ಈಗ ಮತ್ತಷ್ಟು ಅನ್‌ಲಾಕ್ ಪ್ರಕ್ರಿಯೆಯನ್ನುಮಾಡಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ ಎಸ್ ಯಡ್ಯೂರಪ್ಪ ಇಂದು ಸಚಿವರುಗಳ ಜೊತೆ ಸಭೆ ನಡೆಸಿ ಕೆಲವು ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಡೆದ ಸಭೆಯಲ್ಲಿ ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ, ಕೆಲವು ನಿಯಮಗಳನ್ನು ಸಡಿಲ ಮಾಡಿದ್ದು ಪ್ರಯೋಜನವಾಗಿದೆಯಾ ಕೋವಿಡ್ ಸ್ಥಿತಿಗತಿ ಹೇಗಿದೆ ಎನ್ನುವುದರ ಬಗ್ಗೆ ವಿವರವಾಗಿ ಚರ್ಚಿಸಲಾಯ್ತು. ನಂತರ ಅನ್‌ಲಾಕ್?ನ ಮುಂದಿನ ಹಂತದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಇದರಂತೆ ಸಚಿವರು ಹಾಗು…

ಕಾವೇರಿ ಹೋರಾಟಗಾರ ,ಮಾಜಿ ಸಂಸದ ಜಿ.ಮಾದೇಗೌಡ ನಿಧನ

ಮಂಡ್ಯ,ಜು,17: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೋರಾಟಗಾರ ಜಿ.ಮಾದೇಗೌಡ (92) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. 1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ…

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ ಬೆಳಗಾವಿ ,ಜು,16: ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಇಂದು ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಬೇಟಿ ನೀಡಿ,ಗದಗ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಪೂಜ್ಯ ಡಾ ಅಲ್ಲಮಪ್ರಭು ಮಹಾಸ್ವಾಮಿಗಳಿಗೆ ಸತ್ಕರಿಸಿ ಆಶೀರ್ವಾದ ಪಡೆದರು. ನಂತರ ,ಮಾದ್ಯಮಗಳೊಂದಿಗೆ ಮಾತನಾಡಿದ ಅವರು,ಲಿಂಗೈಕ್ಯ ಫ.ಗು ಹಳಕಟ್ಟಿಯವರು ತಾವೇ ಪ್ರಕಟಿಸಿದ ಶಿವಾನುಭವ ಪತ್ರಿಕೆಯನ್ನು ಶೇಖರಿಸುವ ಕಾರ್ಯ ನಾಗನೂರ ರುದ್ರಾಕ್ಷಿಮಠ ಮಾಡಿದೆ. ಅದರ ಮರು ಮುದ್ರಣಕ್ಕೆ ನಾವು ಈಗಾಗಲೇ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ…

ಡಿಸೆಂಬರ್ ವರೆಗೂ ಜಿ.ಪಂ.ತಾಲೂಕು ಪಂಚಾಯ್ತಿ ಚುನಾವಣೆ ಇಲ್ಲ

ಬೆಂಗಳೂರು,ಜು,15:ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿ ಗೋಷ್ಠಿಯಲ್ಲಿ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯಗಳ ಕುರಿತು ವಿವರ ನೀಡಿದರು. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್‌ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ…

ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ;ಬೊಮ್ಮಾಯಿ

ಮೈಸೂರು,ಜು,14:ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಏರ್ಪಡಿಸಲಾಗಿದ್ದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ…

ಮೇಕೆದಾಟು ಯೋಜನೆ,ಸರ್ವಪಕ್ಷ ಸಭೆ ಅನಿವಾರ್ಯ-ಎಂ.ಬಿ.ಪಾಟೀಲ್

ವಿಜಯಪುರ,ಜು,೧೩: ಮೇಕೆ ದಾಟು ಯೋಜನೆಗೆ ತಮಿಳು ಸರ್ಕಾರದ ಅಗತ್ಯವಿಲ್ಲ ಎಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಸಭೆ ಕರೆದು ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಅನಿವಾರ್ಯತೆ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು. ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.…

ಮೇಕೆದಾಟು ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್?

ಬೆಂಗಳೂರು, ಜು. ೧೩: ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಯಾವುದೇ ನಿರ್ಧಾರ ತಗೆದುಕೊಂಡಿದ್ದರೂ ಕೇಂದ್ರ ಸರ್ಕಾರ ತಮ್ಮದೆ ನಿರ್ಧಾರವನ್ನು ತಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ದಾಟಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್ ಮಿಷನ್ ಯೋಜನೆ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆದಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ…

ರಸ್ತೆಗೆ ಟೊಮೊಟೊ ಸುರಿದು ಪ್ರತಿಭಟನೆ

ರಾಮನಗರ ಜು 13: ಬೆಲೆ ಕುಸಿತದಿಂದ ಕಂಗೆಟ್ಟ ರೈತರು ರಾಮನಗರದ ಎಂಪಿಎಂಸಿ ಬಳಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮೊಟೊ ಸುರಿದು ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ನಗರದ ಎಪಿಎಂಸಿ ಎದುರು ಬೆಂಗಳೂರು ಮೈಸೂರು ರಾಷ್ಟ್ರೀಯ ತಡೆದ ರೈತರು ತಾವು ಬೆಳೆದ ಟೊಮೊಟೊವನ್ನು ರಸ್ತೆ ಸುರಿದ ಕೇಂದ್ರ ಹಾಗೂ ರಾಜ್ಯ ಸರಕಾಗಳ ವಿರುದ್ಧ ಧಿಕ್ಕಾರ ಕೂಗಿದರು. ಬೆಳೆ ಇಳಿಕೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಪಟ್ಟಣದ ರೈತ ಸುಜೀವನ್ ಕುಮಾರ್ ಮಾತನಾಡಿ,…

ಡಾ ಆರೂಢಭಾರತೀ ಸ್ವಾಮೀಜಿಗಳಿಂದ ಡಾ ವೀರೇಂದ್ರ ಹೆಗ್ಗಡೆ ಭೇಟಿ.

ಧರ್ಮಸ್ಥಳ, ಜು,13:ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಅಂತಾರಾಷ್ಟ್ರೀಯ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಸಂಸ್ಕೃತ ಗುರುಕುಲದ ಬಗ್ಗೆ ಹಾಗೂ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿದ್ಧಸೂಕ್ತಿಯ ಮೊದಲ ಭಾಗವನ್ನು ಅರ್ಪಿಸಲಾಯಿತು. ಡಾ ವೀರೇಂದ್ರ ಹೆಗ್ಗಡೆ ಅವರು ಡಾ ಆರೂಢಭಾರತೀ ಸ್ವಾಮೀಜಿಯವರ ಕಾರ್ಯಚಟುವಟಿಕೆಗಳ ಬಗ್ಗೆ…

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ

ಬೆಂಗಳೂರು,ಜು,12:ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು. 2021- 22 ನೇ ಸಾಲಿಗೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ ಮುಂದುವರಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು, ಬಾಡ ಗ್ರಾಮದಲ್ಲಿ ಸಂಗೀತ ಕಾರಂಜಿ ಹಾಗೂ ಕನಕದಾಸರ ಅರಮನೆಯ ದರ್ಬಾರ್ ಹಾಲ್…

ಎಸ್ಸೆಸ್ಸೆಲ್ಸಿ: ಭರವಸೆ ಮೂಡಿಸಿದ ತೀರ್ಪು-ಸುರೇಶ್ ಕುಮಾರ್

ಬೆಂಗಳೂರು,ಜು,12: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ…

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ

ಚಿಕ್ಕಮಗಳೂರು,ಜು,12: ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ(43) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ಚಿಕ್ಕಮಗಳೂರಿನ ಗೋಣಿಬೀಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ…

ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

ಹುಬ್ಬಳ್ಳಿ,ಜು,೧೨: ಇಲ್ಲಿನ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್‌ನಾರಾಯಣ ಅವರು ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು ಹುಬ್ಬಳ್ಳಿ ಪ್ರವಾಸದಲ್ಲಿರುವ ಅವರು ಇಲ್ಲಿನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ…

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಪ್ರಮಾಣ ವಚನ

ಬೆಂಗಳೂರು, ಜು, 11:ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇóಷ ಸಮಾರಂಭದಲ್ಲಿ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ನೂತನ ರಾಜ್ಯಪಾಲರು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್.…

1 36 37 38 39 40 49
error: Content is protected !!