ರಾಜ್ಯ
ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ
ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು…


















