Browsing: ರಾಜ್ಯ

ರಾಜ್ಯ

ಹಕ್ಕು ಪತ್ರಕ್ಕಾಗಿ ನಿಲ್ಲದ ಹೋರಾಟ

ರಾಮನಗರ ಜೂ 19: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಅನ್ ಲಾಕ್ ನಂತರ  ಧರಣಿ ಮತ್ತೆ ಮುಂದುವರೆದಿದೆ. 2006 ರ ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಸುಮಾರು ಎಂಟು ವರ್ಷಗಳಿಂದ ಅರಣ್ಯ ಭೂಮಿ ಹಕ್ಕುಪತ್ರಕ್ಕಾಗಿ ಹೋರಾಟ ನಡೆಸುತ್ತಾ ಬಂದಿರುವ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಸಮಾಜದ 24 ಕುಟುಂಬಗಳಿಗೆ ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಒಕ್ಕಲೆಬ್ಬಿಸಿದ ಜಮೀನು ನೀಡದೆ ಅರಣ್ಯ ಇಲಾಖೆ ಕಾನೂನು ಗಾಳಿಗೆ ತೂರಿ…

ಸಿದ್ದಲಿಂಗಯ್ಯ ಸಮಾಜದ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಕೆ. ಶೇಷಾದ್ರಿ.

ರಾಮನಗರ ಜೂ 19: ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದ ಹಾಗೂ ತಮ್ಮ ಕವಿತೆಗಳಿಂದ ಜನರಿಗೆ ಸರಿಯಾದ ಮಾರ್ಗ ತೋರಿಸುವ ಮೂಲಕ ಜನಮಾನಸದಲಿ ಶಾಶ್ವತವಾಗಿ ಉಳಿದ ಅದರ್ಶ ವ್ಯಕ್ತಿ ಡಾ.ಸಿದ್ದಲಿಂಗಯ್ಯ ಎಂದು ಮಾಜಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಹಾಲಿ ನಗರಸಭಾ ಅಧ್ಯಕ್ಷ ಕೆ ಶೇಷಾದ್ರಿ ಹೇಳಿದರು. ನಗರದ ಐಜೂರು ವೃತ್ತದಲ್ಲಿ ಸಿದ್ದಲಿಂಗಯ್ಯರವರಿಗೆ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಸಿದ್ದಲಿಂಗಯ್ಯರವರು ಬಹಳ ಸರಳವಾಗಿ ತಮ್ಮ ಬದುಕನ್ನು ಕಟ್ಟಿಕೊಂಡ ಜೀವನ ನಡೆಸುತ್ತಿದ್ದರು…

ಮೇಕೆದಾಟು ಯೋಜನೆಗೆ ರಾಜ್ಯಕ್ಕೆ ಮುನ್ನಡೆ

ಬೆಂಗಳೂರು, ಜೂ,19:ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮುನ್ನಡೆಯಾಗಿದ್ದಯ ಶೀಘ್ರ ಕಾಮಗಾರಿ ಸಲ್ಲಿಸಲು ಸರ್ಕಾರ ಯೋಜನೆ ರೂಪಿಸಲು ತಯಾರಿ ನಡೆಸಿದೆ. ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. “ಜಲಾಶಯ ನಿರ್ಮಾಣ ವಿವಾದ ಸುಪ್ರೀಂಕೋರ್ಟ್…

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು,ಜೂ,18:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ಸಂತೋಷ ಹಾನಗಲ್ ಅವರನ್ನು ಕನ್ನಡಪರ ಸಂಘಟನೆಗಳು ಅವರ ಕಛೇರಿಯಲ್ಲಿ ಅಭಿನಂದಿಸಿದವು. ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ್, ಮಹಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶಮೂರ್ತಿ, ಕರ್ನಾಟಕ ವಿದ್ಯಾರ್ಥಿಕೂಟದ ಪ್ರಧಾನ ಕಾರ್ಯದರ್ಶಿ ಹರ್ಷ, ವಿಷ್ಣುಸೇನೆಯ ಆನಂದ್ ಮತ್ತಿತರರು ನೂತನ‌…

ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ

ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು,…

ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ

ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್…

ಮಕ್ಕಳಿಗೆ ಬಾಲ ಸೇವಾ ಯೋಜನೆ : ಜೊಲ್ಲೆ

ರಾಮನಗರ ಜೂ 18: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನೆರವು ನೀಡಲು ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆಸಾವಿರ ರೂ. ಹಾಗೂ ಉಚಿತ ಶಿಕ್ಷಣ, ಎಸ್.ಎಸ್.ಎಲ್.ಸಿ.…

ಧರ್ಮಸ್ಥಳ ವಿರುದ್ಧ ಅಪಪ್ರಾಚಾರ;ಕೆ.ಸೋಮನಾಥ್ ನಾಯಕ್ ಗೆ ಮೂರು ತಿಂಗಳು ಜೈಲು ಶಿಕ್ಷೆ

ಬೆಳ್ತಂಗಡಿ,ಜೂ,18: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಅಧ್ಯಕ್ಷ ಕೆ.ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ತನ್ನ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ, ಮೂರು ತಿಂಗಳ ಜೈಲು ಶಿಕ್ಷೆಯ ಹೊರತಾಗಿ, ಕ್ಷೇತ್ರಕ್ಕೆ 4.5 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಲು ನಾಯಕ್ ಒಡೆತನದ ಸ್ಥಿರಾಸ್ತಿಯನ್ನು ಲಗತ್ತಿಸಲು ನ್ಯಾಯಾಲಯ ಆದೇಶಿಸಿದೆ. ಅವರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ತಿಳಿದಿದ್ದರೂ ಶ್ರೀ ಕ್ಷೇತ್ರದ…

ಖಾಸಗಿ ಶಿಕ್ಷಣ ಶಾಲೆಗಳ ಆರ್ ಟಿ ಇ ಹಣ ಬಿಡುಗಡೆ

ಬೆಂಗಳೂರು, ಜೂ,17: ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ದಾಖಲಾದ ವಿದ್ಯಸರ್ಥಿಗಳ ಶುಲ್ಕವನ್ನು ಮರುಪಾವತಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 12 (1) ಸಿ ಅಡಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2012-13ನೇ ಸಾಲಿನಿಂದ ಶೇ.25ರಷ್ಟು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೀಟು ಹಂಚಿಕೆ ಮಾಡಿ,…

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಇಳಿಮುಖ

ಬೆಂಗಳೂರು,ಜೂ,೧೫:ಲಾಕ್‌ಡೌನ್ ಎಫೆಕ್ಟ್ ಮತ್ತು ಕೊರೊನಾ ನಿಯಂತ್ರಣಕ್ಕೆ ತಗೆದುಕೊಂಡಿರುವ ಕೆಲ ನಿರ್ಧಾರಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖ ಕಾಣುತ್ತಿದೆ. ಇದರ ಪರಿಣಾಮವಾಗಿ ಮಂಗಳವಾರ ೫,೦೪೧ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೭,೭೭,೦೧೦ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೩,೧೪೮ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೯೮೫ ಮಂದಿಗೆ ಸೋಂಕು ದೃಢಪಟ್ಟಿದ್ದು,…

ಖಾಸಗಿ ಶಾಲೆಗಳ ಶುಲ್ಕವನ್ನುಸರ್ಕಾರ ನಿರ್ಧರಿಸಬೇಕು-ಸಿಎಂಗೆ ಸಿದ್ದು ಪತ್ರ

ಬೆಂಗಳೂರು, ಜೂ.೧೫:ಶೈಕ್ಷಣಿಕ ವರ್ಷ ಆರಂಭವಾಗಿರುವ ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್ಗಳಿಗೆ ಪಾವತಿಸಬೇಕಾದ…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

ಹೊರಗಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆಗೆ ಆದ್ಯತೆ: ಬಿಬಿಎಂಪಿ

ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವರ್ಚುವಲ್ ರೂಪದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸಿದರೆ, ಮಾತ್ರ ಈ ಸೋಂಕಿನ ವಿರುದ್ಧದ ಹೋರಾಟ ಯಶಸ್ಸು ಕಾಣಲು ಸಾಧ್ಯ. ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್…

ಕೊರೊನಾ ದಿಂದ ಸಾವನ್ನಪ್ಪಿದ ಕುಟುಂಬಕ್ಕೆ ೧ ಲಕ್ಷ ರೂ ಪರಿಹಾರ

ಬೆಂಗಳೂರು, ಜೂ, ೧೪; ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದ ದುಡಿಯುವ ಒಬ್ಬ ವ್ಯಕ್ತಿಗೆ ಒಂದು ಲಕ್ಷರೂಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಕೊರೊನಾದಿಂದ ಸತ್ತವರ ಕುಟುಂಬಗಳಿಗೆ ೧ಲಕ್ಷ ರೂ ನೀಡುವ ಘೋಷಣೆ ಮಾಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ರಾಜ್ಯ ಸರ್ಕಾರ ಪಾತ್ರವಾಗಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ ಅವರು, “ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು ೨೦…

ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಹಿರಿಯ ಪತ್ರಕರ್ತರಾದ ಸುರೇಶ್ ಚಂದ್ರ, ದವಡಬೆಟ್ಟ ನಾಗರಾಜ್, ದಾವಣಗೆರೆಯ ಹೆಚ್.ಎನ್.ಮುನೇಶ್ ರವರಿಗೂ, ರಾಷ್ಟ ಪ್ರಶಸ್ತಿ ವಿಜೇತರಾದಂತ ಚಲನ ಚಿತ್ರನಟರಾದ ಸಂಚಾರಿ ವಿಜಯ್, ಕೆ.ಸಿ.ಎನ್.ಚಂದ್ರು ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ…

ವೃತ್ತ,ಮೇಲ್ಸೇತುವೆಗೆ ಡಾ. ಸಿದ್ದಲಿಂಗಯ್ಯ ನಾಮಕರಣ ಮಾಡಲು ಸಿಎಂಗೆ ರಾಮುಲು ಮನವಿ

ಬೆಂಗಳೂರು. ಜೂ.೧೪: ಸಾಮಾಜಿಕ ಸಮಾನತೆಗಾಗಿ ಕಾವ್ಯ, ಸಾಹಿತ್ಯಗಳನ್ನು ರಚಿಸಿ ಪ್ರೇರಣೆ ನೀಡಿ, ಜನಮಾನಸದಲ್ಲಿರುವ ಖ್ಯಾತ ಲೇಖಕ, ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೆಲ್ಸೇತೆಗೆ ಡಾ. ಸಿದ್ದಲಿಂಗಯ್ಯ ಅವರ ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯಕ್ಷೇತ್ರಕ್ಕೆ ಹಾಗೂ ಇಡೀ ರಾಜ್ಯಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ.…

ನಾಳೆಯಿಂದ ಅನ್ ಲಾಕ್ ;ಜನರಿಗೆ ರಲೀಫ್

ಬೆಂಗಳೂರು,ಜೂ,13: ಕಳೆದ ಒಂದೂವರೆ ತಿಂಗಳಿಂದ ಲಾಕ್ ಡೌನ್ ನಿಂದ ಮನೆಯೊಳಗಿದ್ದ ಜನರಿಗೆ ರಿಲ್ಯಾಕ್ಷ ಸಿಗಲಿದೆ. ಹೌದು ನಾಳೆಯಿಂದ ಅನ್ ಲಾಕ್ ಆಗಲಿರುವ ಕೆಂಗೆಟ್ಟ ಜನರಿಗೆ ಅರ್ಧ ರಿಲೀಫ್ ಸಿಗಲಿದೆ.ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ಗೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು, ಇದರನ್ವಯ ನಾಳೆ ಬೆಳಗ್ಗೆ…

ಶುಲ್ಕವಿವಾದ: ಸಚಿವರ ದ್ವಂದ್ವ ಹೇಳಿಕೆಗೆ ಪೋಷಕರ ಅಳಲು

ಬೆಂಗಳೂರು,೧೩:ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಅಹಂಕಾರದ ಎಲ್ಲೆ ಮೀರಿದಂತೆ ಕಾಣುತ್ತಿದೆ ಅಥವಾ ಶಿಕ್ಷಣ ವ್ಯವಸ್ಥೆಯನ್ನೇ ಒಂದು ರೀತಿ ಕುಲಗೆಡುವ ವ್ಯವಸ್ಥಿತಿ ಸಂಚು ಎನ್ನುವಂತಿದೆ ಅವರ ನೀಡುವ ಪ್ರತಿ ಹೇಳಿಕೆಗಳು. ಹೌದು ಸುರೇಶ್ ಕುಮಾರ್ ಅವರ ಪ್ರತಿಬಾರಿಯ ಹೇಳಿಕೆಗಳು ಶಿಕ್ಷಣಕ್ಕೆ ಮಾದರಿಯಾಗುವ ಬದಲು ದ್ವಂದ್ವನಿಲುವುಗಳಾಗಿವೆ ಒಂದು ಬಾರಿ ಹೇಳಿದ ಹೇಳಿಕೆಗೂ ಇನ್ನೊಂದು ಬಾರಿ ನೀಡುವ ಹೇಳಿಕೆಗೂ ಗೊಂದಲಗಳು ಸೃಷ್ಟಿಯಾಗುತ್ತಿವೆ ಇದರಿಂದ ಸಾರ್ವಜನಿಕ ಶಿಕ್ಷಣಾಧಿಕಾರಿಗಳು ಕೂಡ ಒಂದು ರೀತಿ ಗರಬಡದವರಂತಾಗಿದ್ದಾರೆ. ರಾಜಧಾನಿಯ ಪ್ರತಿಷ್ಠಿತ ಶಾಲೆಗಳ ಶುಲ್ಕ ವಿಚಾರವಾಗಿ ಸಾರ್ವನಿಕರು…

ಮೈಸೂರು ಜಿಲ್ಲಾಧಿಕಾರಿಯಾಗಿ ಸಿಂಧೂರಿ ಮರುನೇಮಕಕ್ಕೆ ಸಹಿ ಅಭಿಯಾನ

ಮೈಸೂರು,ಜೂ.೧೨: ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು ಎನ್ನುವ ಆನ್‌ಲೈನ್ ಸಹಿಸಂಗ್ರಹಣೆ ನಡೆಯುತ್ತಿದೆ. ಹೌದು ಚೇಂಜ್ ಆರ್ಗ್ ಎಂಬ ಈ ಆನ್‌ಲೈನ್ ಬ್ರಿಂಗ್ ಬ್ಯಾಂಕ್ ರೋಹಿಣಿ ಎಂಬ ಸಹಿ ಸಂಗ್ರಹ ಅಭಿಯಾನ ಸಾಮಾಜಿಕ ಜಾಲಗಣಗಳಲಿ ಆರಂಭವಾಗಿದ್ದು ಸರಿ ಸುಮಾರು ೨೭೦೦೦ ಕ್ಕೂ ಹೆಚ್ಚು ಮಂದಿ ಸಹಿ ಮಾಡಿದ್ದಾರೆ. ರೋಹಿಣಿ ಸಿಂಧೂರಿಯವರು ಖಡಕ್ ಅಧಿಕಾರಿಯಾಗಿದ್ದು, ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಅದಕ್ಕಾಗಿ ಅವರು ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಇದೀಗ ಅವರನ್ನು ವರ್ಗಾವಣೆ ಮಾಡಿರುವುದು ಅವರ…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

1 39 40 41 42 43 49
error: Content is protected !!