ರಾಜ್ಯ
ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅಂತ್ಯಕ್ರಿಯೆ
ಬೆಂಗಳೂರು,ಜೂ,೧೨: ನಿನ್ನೆ ನಿಧನರಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಇದಕ್ಕೂ ಮುನ್ನ ಸಾರ್ವಜಿನಕರ ದರ್ಶನಕ್ಕೆ ಕೆಲ ಕಾಲ ಅವಕಾಶ ಮಾಡಿಕೊಡಲಾಗಿತ್ತು.ಅಂತ್ಯಕ್ರಿಯೆ ವೇಳೆ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಚೀಫ್ ಕಮಿಷನರ್ ಗೌರವ್ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರು ಶುಕ್ರವಾರ…