Browsing: ರಾಜ್ಯ

ರಾಜ್ಯ

ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ

ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ by-ಕೆಂಧೂಳಿ ಮೈಸೂರು,ಫೆ,೦೧- ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಇಂದು ಬೆಳಿಗ್ಗೆ ಬೆಂಗಾವಲು ಪಡೆ ಇಲ್ಲದೆ ಖಾಸಗಿ ಕಾರಿನಲ್ಲಿ ಸುತ್ತಿದ ಸಿದ್ದರಾಮಯ್ಯ ಬೆಳಗಿನ ಉಪಹಾರಕ್ಕೆ ಮೈಸೂರಿನ ಪ್ರಸಿದ್ದ ಮೈಲಾರಿ ಹೊಟೇಲ್‌ಗೆ ಭೇಟಿ ನೀಡಿ ಅಲ್ಲಿ ಉಪಾಹಾರ ಸವಿದರುಇಡ್ಲಿ, ಮಸಾಲೆ ದೋಸೆ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ…

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ by ಕೆಂಧೂಳಿ ಬೆಂಗಳೂರು, ಫೆ,01- ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE)ರ ಎರಡನೇ ಆವೃತ್ತಿಯ ಸಮಾವೇಶಕ್ಕೆ ರಾಜ್ಯವು ಪ್ರವಾಸೋದ್ಯಮ ಇಲಾಖೆಯ ಮೂಲಕ ಸಜ್ಜಾಗಿದ್ದು,ಫೆಬ್ರವರಿ 26 ರಿಂದ 28 ರಂದು 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) BIEC, ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ವಿಧಾನಸೌಧದ…

ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ  ದಾಳಿ 

ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ  ದಾಳಿ      by ಕೆಂಧೂಳಿ ಬೆಂಗಳೂರು, ಜ,31- ರಾಜ್ಯದ ಹಲವೆಡೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ರಾಯಚೂರು ,ಬೆಳಗಾವಿ ಮತ್ತು ಬಾಗಲಕೋಟೆಯ ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ…

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ, 30- ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಜನವರಿ 30 , 1948 ರಂದು ಮತಾಂಧನಾಗಿದ್ದ ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ಇಹಲೋಕವನ್ನು ತ್ಯಜಿಸಿದ್ದರೂ, ಅವರ…

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹ     by ಕೆಂಧೂಳಿ ಬೆಂಗಳೂರು, ಜ,30-ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್,ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೂಡಲೇ ನಡೆಸಬೇಕು’ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್, ‘ಗ್ರಾಮ ಸ್ವರಾಜ್ಯದ ಪರಿಕಲ್ಪನೆಯ ಮೂಲಕ ಭಾರತದಲ್ಲಿ ಸ್ವಾವಲಂಬಿ ಗ್ರಾಮಗಳ ಸ್ಥಾಪನೆ ಗಾಂಧೀಜಿ ಅವರ ಕನಸಾಗಿತ್ತು. ಅದಕ್ಕಾಗಿ ಅವರು ಪ್ರತಿ ಗಾಮದಲ್ಲೂ ಪಂಚಾಯಿತಿಗಳ ಸ್ಥಾಪನೆಗೆ…

ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಲು ಕರೆ

ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಲು ಕರೆ by ಕೆಂಧೂಳಿ ಚಿತ್ರದುರ್ಗ,ಜ,29-ನಮ್ಮ ಜನಗಳಿಗೆ ವಿಜ್ಞಾನದ ಆವಿಷ್ಕಾರಗಳು ಬೇಕು ಆದರಿಂದ ಕಂಡು ಹಿಡಿದ ಮೊಬೈಲ್ .ಟಿ.ವಿ. ವಾಟ್ಸಾಪ್, ಕಾರುಗಳು ಬೇಕು, ಆದರೆ ವೈಜ್ಞಾನಿಕವಾದ ಚಿಂತನೆ ಬೇಡವಾಗಿದೆ ಎಂದು ರಾಷ್ಟ್ರೀಯ ವಿಚಾರವಾದಿಗಳ ಸಂಘ, ಕರ್ನಾಟಕದ ಅಧ್ಯಕ್ಷರಾದ ಪ್ರೊ. ನರೇಂದ್ರ ನಾಯಕ್ ತಿಳಿಸಿದರು. ಚಿತ್ರದುರ್ಗ ನಗರದ ಹೊರವಲಯದ ಭೋವಿಗುರುಪೀಠದಲ್ಲಿ ಎಸ್.ಜೆ.ಎಸ್. ಸಮೂಹ ಸಂಸ್ಥೆವತಿಯಿಂದ ಎಸ್‍ಜೆಎಸ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವೈಜ್ಞಾನಿಕತೆಗಿರುವ ಸವಾಲು ಹಾಗೂ ಪರಿಹಾರೋಪಾಯಗಳು” ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಮಾನವರಾದವರು ಯಾವುದೇ ವಿಷಯವನ್ನು ಪ್ರಶ್ನಿಸದೇ…

ಸಂಚಾರಿ ನಿಯಮಗಳನ್ನು ಪಾಲಿಸಲು ಸಲಹೆ

ಸಂಚಾರಿ ನಿಯಮಗಳನ್ನು ಪಾಲಿಸಲು ಸಲಹೆ by ಕೆಂಧೂಳಿ ಚಿತ್ರದುರ್ಗ, ಜ,29- ಸಂಚಾರ ನಿಯಮಗಳನ್ನು ತಪ್ಪದೇ ವಾಹನ ಸವಾರರೆಲ್ಲರೂ ಸಾಮಾನ್ಯವಾಗಿ ಎಲ್ಲರೂ ಪಾಲಿಸಿದರೆ ಅನೇಕ ಅಪಘಾತ ಹಾಗೂ ಆಘಾತಗಳು ಆಗುವುದಿಲ್ಲ ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಭರತ್.ಎಂ. ಕಾಳಿಸಿಂಗೆ ಅವರು ಸಲಹೆ ಮಾಡಿದರು. ಅವರು ನೆಹರು ಯುವ ಕೇಂದ್ರ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಪ್ರಾದೇಶಿಕ ಸಾರಿಗೆ ಕಛೇರಿ ಚಿತ್ರದುರ್ಗ,ಎಸ್. ಜೆ.ಎಂ ಪಾಲಿಟೆಚ್ನಿಕ್ ಮತ್ತು ಶ್ರೀ ನೀಲಕಂಠ ಮೆಮೋರಿಯಲ್ ಪ್ಯಾರಾಮೆಡಿಕಲ್ ಕಾಲೇಜು ಚಿತ್ರದುರ್ಗ,ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟೀಯ ರಸ್ತೆ ಸುರಕ್ಷತಾ…

ರೋಟರಿ ಸೆಂಟ್ರಲ್‌ನಿಂದ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ

ರೋಟರಿ ಸೆಂಟ್ರಲ್‌ನಿಂದ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ by – ಕೆಂಧೂಳಿ ಶಿವಮೊಗ್ಗ,ಜ,29-ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು. ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ ನೀಡಿ ಮಾತನಾಡಿ, ರೋಟರಿ ಸಂಸ್ಥೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ. ಇದರಿಂದ…

ಕೆಪಿಎಸ್‌ಸಿಗೆ ಕೆಎಟಿ ನೋಟಿಸ್

ಕೆಪಿಎಸ್‌ಸಿಗೆ ಕೆಎಟಿ ನೋಟಿಸ್ by ಕೆಂಧೂಳಿ ಬೆಂಗಳೂರು,ಜ,೨೯-ಪರಿಕ್ಷೆಯಲ್ಲಿ ದೋಷಪೂರಿತ ಕಂಡುಬಂದಿರುವ ಕಾರಣ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಗೆ ಕರ್ನಾಟಕ ನ್ಯಾಯಮಂಡಳಿ ನೊಟೀಸ್ ಜಾರಿಮಾಡಿದೆ. ೨೦೨೪ರ ಡಿಸೆಂಬರ್ ೨೯ ರಂದು ೩೮೪ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆ ನಡೆಸಿತ್ತು ಇದರಲ್ಲಿ ದೋಷಪೂರಿತ ಕಂಡುಬಂದಿರುವ ಕಾರಣ ಪರಿಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ವಿದ್ಯಾರ್ಥಿಗಳು ಕರ್ನಾಟಕ ನ್ಯಯಮಂಡಳಿ (ಕೆಎಟಿ)ಗೆ ಮೊರ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಯಾಂಗ ಸದಸ್ಯ ಎಸ್.ವೈ ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್…

ಗ್ರಾಮೀಣ ವಿದ್ಯಾರ್ಥಿಗಳ ಕಲಿಕಾಮಟ್ಟ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲು ಸಲಹೆ

ಗ್ರಾಮೀಣ ವಿದ್ಯಾರ್ಥಿಗಳ ಕಲಿಕಾಮಟ್ಟ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲು ಸಲಹೆ ಚಿತ್ರದುರ್ಗ, ಜ,28-ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಾಗ ಕೇವಲ ನಗರಗಳಲ್ಲಿ ಕಲಿಯುವ ಮಕ್ಕಳ ಕಲಿಕಾ ಮಟ್ಟವನ್ನಷ್ಟೇ ಪರಿಗಣಿಸದೆ ಗ್ರಾಮೀಣ ಪ್ರದೇಶದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಸಹ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಬೇಕು ಎಂದು ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು. ನಗರದ ನಮ್ಮ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ “ಇತಿಹಾಸ ಹಾಗೂ ಗಣಿತಶಾಸ್ತ್ರ ವಿಷಯಗಳ ಸರ್ಕಾರಿ ಉಪನ್ಯಾಸಕರುಗಳ…

ಕುಡಿಯವ ನೀರಿನ ದರ ಹೆಚ್ಚಳದ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿ

ಕುಡಿಯವ ನೀರಿನ ದರ ಹೆಚ್ಚಳದ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿ byಕೆಂಧೂಳಿ ಬೆಂಗಳೂರು, ಜ.28-“ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ…

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ- ಸಿಎಂ

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ- ಸಿಎಂ by ಕೆಂಧೂಳಿ ಬೆಂಗಳೂರು,ಜನವರಿ 28 : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು…

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ by ಕೆಂಧೂಳಿ ಬೆಂಗಳೂರು ಜ27-ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು.…

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ by ಕೆಂಧೂಳಿ ಬೆಂಗಳೂರು, ಜ,27-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ‌ ಸರ್ಕಾರದ ಮುಖ್ಯ ಸಚೇತಕ…

ವಿವಿಧತೆಯಲ್ಲಿ ಏಕತೆಯೇ ನಿಜವಾದ ಗಣರಾಜ್ಯ-ಇಮ್ಮಡಿ ಸಿದ್ದರಾಮೇಶ್ವರ

ವಿವಿಧತೆಯಲ್ಲಿ ಏಕತೆಯೇ ನಿಜವಾದ ಗಣರಾಜ್ಯ-ಇಮ್ಮಡಿ ಸಿದ್ದರಾಮೇಶ್ವರ by ಕೆಂಧೂಳಿ ಚಿತ್ರದುರ್ಗ, ಜ,27-ವಿವಿಧತೆಯಲ್ಲಿ ಏಕತೆ ಎನ್ನುವ ವಾಕ್ಯ ಬದುಕಿನ ತಾತ್ವಿಕತೆಯೂ ಆಗಬೇಕು. ಸಂಸ್ಕೃತಿ, ಸಂಪ್ರದಾಯ, ಭಾಷೆ, ಎಲ್ಲವೂ ವಿಭಿನ್ನವಾಗಿದ್ದಾಗಲೂ ಅದರಲ್ಲಿಯೇ ಒಗ್ಗಟ್ಟು ತರುವುದಿದೆಯೆಲ್ಲ ಅದೇ ನಿಜವಾದ ಗಣರಾಜ್ಯ ಎಂದು ಭಾವಿಸುತ್ತೇವೆ ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಎಸ್ ಜೆ ಎಸ್ ಸಮೂಹ ಸಂಸ್ಥೆಗಳು ಏರ್ಪಡಿಸಿದ ಗಣರಾಜ್ಯೋತ್ಸವದ ಧ್ವಜಾರೋಹ ನೇರವೇರಿಸಿ ಮಾತನಾಡಿದ ಅವರು ಅಂಬೇಡ್ಕರ ನೀಡಿದ ಭಾರತದ ಸಂವಿಧಾನ ಕೇವಲ ದಾಖಲೆಗಳ ಹೊತ್ತಗೆ…

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿ.ಎಂ.

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿ.ಎಂ. ಬೆಂಗಳೂರು, ಜ, 27-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು…

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ by ಕೆಂಧೂಳಿ ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,…

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ by ಕೆಂಧೂಳಿ ಬೆಂಗಳೂರು, ಜ.26-“ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು; “76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ…

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ by ಕೆಂಧೂಳಿ ಬೆಂಗಳೂರು,ಜ,26- ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು. ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ,26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು…

1 3 4 5 6 7 33
error: Content is protected !!