ರಾಜ್ಯ
ಪತ್ರಿಕೋದ್ಯಮ ಜನಪರ ಕೆಲಸ ಮಾಡುವುದು ಮುಖ್ಯ: ಬಸವರಾಜ ಬೊಮ್ಮಾಯಿ
ಬೆಂಗಳೂರು,ಜೂ,14-ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಶೇಷಾದ್ರಿಪುರಂ ಕಾಲೇಜಿನಲ್ಲಿ ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಡಾ. ಕೂಡ್ಲಿ ಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ನನ್ನ ಆತ್ಮೀಯ ಸ್ನೇಹಿತನಿಗೆ ಈ ಪ್ರಶಸ್ತಿ…


















