Browsing: ರಾಜ್ಯ

ರಾಜ್ಯ

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು ಮೇ 30-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು…

ರಾಜ್ಯದಲ್ಲಿ ಭೀಕರ ಮಳೆ ನಿರೀಕ್ಷೆ,ರೆಡ್ ಅಲಾರ್ಟ್ ಘೋಷಣೆ

ಬೆಂಗಳೂರು, ಮೇ,29-ಬಂಗಾಳ ಉಪಸಾಗರದ ವಾಯುವ್ಯ ಭಾಗ ಒಡಿಸ್ಸಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾದ ಕಾರಣ ರಾಜ್ಯಾದ್ಯಂತ ಮತ್ತೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ರೆಡ್ಡ ಅಲಾರ್ಟ್ ಘೋಷಿಸಲಾಗಿದೆ. ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ವಾಪಕವಾಗಿ ಮಳೆಯಾಗಲಿದೆ. ಇಂದಿನಿಂದ ಮೇ 30ರವರೆಗೂ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ,…

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 28,-“ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನಗರದ ಟೌನ್ ಹಾಲ್ ನಲ್ಲಿ ಬುಧವಾರ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್…

ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು- ಕೆ.ವಿ.ಪ್ರಭಾಕರ್

ಬೆಂಗಳೂರು ಮೇ 28-ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಲಭಿಸಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ತಿಳಿಸಿದರು. ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು ಗಾಂಧಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ವಿಚ್ಛಿದ್ರಕಾರಿ ಶಕ್ತಿಗಳು, ಮತಾಂದತೆ ಹಾಗೂ ಮೂಲಭೂತವಾದ ಒಟ್ಟಾಗಿ…

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯ ಲುಅಶೋಕ ಆಗ್ರಹ*

ಬೆಂಗಳೂರು, ಮೇ 28-ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು…

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ

ಬೆಂಗಳೂರು ಮೇ 27- ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು. ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ…

ಕನ್ನಡ ಭಾಷೆ ನಿರ್ಲಕ್ಷಿಸಿ ಉರ್ದು ಭಾಷಗೆ ಮಹತ್ವ ನೀಡಲಾಗುತ್ಯದೆ ಎನ್ನುವ ಬಿಜೆಪಿ ಅಪಪ್ರಚಾರ ಸುಳ್ಳು- ಸಿಎಂ ಸ್ಪಷ್ಟನೆ

ಬೆಂಗಳೂರು,ಮೇ,27-ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು,ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ. 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ…

ನನ್ನ ಕೊನೆ ಉಸಿರಿರುವವರೆಗೂ ಬರೆಯುತ್ತೇನೆ; ಡಾ.ಬಿ.ಎಲ್.ವೇಣು

ಚಿತ್ರದುರ್ಗ,ಮೇ,27- ನನ್ನ ಬರಹ ಪ್ರಕಟಗೊಳ್ಳುತ್ತಿಲ್ಲ, ಎಲ್ಲಿಯೂ ಕಾಣುತ್ತಿಲ್ಲವೆಂದರೇ ನನ್ನ ಉಸಿರು ನಿಂತಿದೆ ಎಂದೇ ಜನ ಭಾವಿಸಿಕೊಳ್ಳಬೇಕು ಎಂದು ಸಾಹಿತಿ ಬಿ.ಎಲ್.ವೇಣು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಸೇರಿಕಸಾಪ ವತಿಯಿಂದ ಮಂಗಳವಾರ ಆಯೋಜಿಸಿದ್ದ ತಮ್ಮ 80ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಬರವಣಿಗೆ ನನ್ನ ಜೀವಾಳ, ನಾನು ಬರೆಯುತ್ತಿದ್ದರೆ ನಾನು ಚನ್ನಾಗಿ ಇರುತ್ತೇನೆ, ಇಲ್ಲವಾದರೆ ಅನಾರೋಗ್ಯದಿಂದ ಬಳಲುತ್ತೇನೆ ಎಂದರು. ಜನತೆ ನನ್ನನ್ನು ಬಹಳಷ್ಟು ಪ್ರೀತಿಯಿಂದ ಕಾಣುತ್ತಾರೆ. ಸಾಹಿತ್ಯ ಸಮ್ಮೇಳನದಲ್ಲಿ ನನ್ನನು ಅಧ್ಯಕ್ಷನನ್ನಾಗಿಸಿದ್ದಾರೆ. ಆದರೆ, ನಾನು ಸಾಸಿವೆ ಕಾಳಿನಷ್ಟು…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ.ಪ. ಪಂ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಂದ ಅನರ್ದಿಷ್ಟ ಧರಣಿ ಸತ್ಯಾಗ್ರ

ನಾಯಕನಹಟ್ಟಿ ,ಮೇ,27- ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಅನರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಬಿಲ್ ಕಲೆಕ್ಟರ್ ಸಂದೀಪ್ ಮಾತನಾಡಿ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಓ ಪಿ ಎಸ್ ಜಾರಿಗೊಳಿಸಬೇಕು. ಅರೆ ಸರ್ಕಾರಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು, ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ಕೆ ಜೆ ಡಿ, ವಿಮಾ ಸೌಲಭ್ಯ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳು ನಮಗೆ ದೊರೆಯುವಂತಾಗಬೇಕು.…

ಅನಿಲ್ ಕುಂಬ್ಳೆ – ಅರಣ್ಯ ಇಲಾಖೆ ರಾಯಭಾರಿ: ಈಶ್ವರ ಖಂಡ್ರೆ

ಬೆಂಗಳೂರು, ಮೇ 27- ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ…

ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ : ಸಿ.ಎಂ*

ಬೆಂಗಳೂರು ಮೇ 27: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ…

ಕನ್ನಡ ಅಂತಃಸತ್ವದ ಅನಾವರಣಕ್ಕೆಗಮಕ ಕಲೆ ಸಹಕಾರಿ

ಚಿತ್ರದುರ್ಗ,ಮೇ, 26–ಚಿತ್ರದುರ್ಗದ ಗಮಕ ಕಲಾಭಿಮಾನಿಗಳ ಸಂಘವು ಎಷ್ಟೇ ಅಡೆ ತಡೆಗಳು ಬಂದರೂ ಕಷ್ಟ ಕಾರ್ಪಣ್ಯಗಳು ಉಂಟಾದರೂ ನಿರಂತರವಾಗಿ ಗಮಕ ಕಲೆಯ ಪ್ರಚಾರ ಹಾಗೂ ಪ್ರಸಾರಕ್ಕಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸ್ಥಳೀಯ ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷಕೆ.ಎಂ. ವೀರೇಶ್ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗಮಕ ಕಲಾಭಿಮಾನಿಗಳ ಸಂಘವು ಜೆ ಸಿ ಆರ್ ಗಣಪತಿ ದೇವಾಲಯದಲ್ಲಿ ಏರ್ಪಡಿಸಿದ್ದ ಸಂಘದ ನಲವತ್ತನೇ ವಾರ್ಷಿಕೋತ್ಸವದ ನೆನಪಿಗಾಗಿ  22ನೇ ಮಾಸಿಕ ಗಮಕ ವಾಚನ ವ್ಯಾಖ್ಯಾನದಲ್ಲಿ…

ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ – ಎಚ್.ಕೆ ಪಾಟೀಲ

ಬೆಂಗಳೂರು,ಮೇ,26-ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆಗೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿರುತ್ತವೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳಿಗೆ ದಶಕಗಟ್ಟಲೇ ಕಾಯುವ / ವಿಳಂಬಕ್ಕೆ ಮುಕ್ತಿ ನೀಡಲು ಕರ್ನಾಟಕ ಯಶಸ್ವಿಯಾದ ದಿಟ್ಟಹೆಜ್ಜೆಯನ್ನಟ್ಟಿದೆ. ಕರ್ನಾಟಕ ಸರ್ಕಾರ ಕ್ರಾಂತಿಕಾರಕ ತಿದ್ದುಪಡಿಯನ್ನು…

ಸ್ವಚ್ಛವಾಹಿನಿ ಚಾಲಕಿಯರ ವೇತನ ಹಾಗೂ ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಮೇ,26-ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿಗ್ರಾಮ ಪಂಚಾಯತಿಗಳಲ್ಲಿ ಆರಂಭಿಸಿರುವ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ…

ಕೆಎಸ್ಡಿಎಲ್ ಮೇಲೆ ಟೀಕೆ: ವಿಜಯೇಂದ್ರ ವಿರುದ್ಧ ಎಂ ಬಿ ಪಾಟೀಲ ಕಿಡಿ

ಬೆಂಗಳೂರು,ಮೇ,26-ಕೆಎಸ್ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್ ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಸೋಮವಾರ ಕಿಡಿ ಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಲ್ಲಿ ಮಾತನಾಡಿದ ಅವರು, ಕಳೆದ…

ರಾಜ್ಯದಲ್ಲಿ ಭಾರಿ ಮಳೆ, ಇನ್ನೂ ಐದು ದಿನ ಮಳೆ ಮುನ್ಸೂಚನೆ

ಬೆಂಗಳೂರು,ಮೇ,೨೬- ಕಳೆದ ಎರಡು ದಿನಗಳಿಂದ ರಾಜ್ಯದ ಹಲವಾರು ಕಡೆ ಸುರಿಯುತ್ತಿರುವ ಮಳೆಯಿಂದ ಹಲವಾರು ಜಾಶಯಗಳು ತುಂಬಿದ್ದು, ಹಲವು ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿ ಬೆಳಗಾವಿಯಲ್ಲಿ ಮನೆ ಕುಸಿದು ಬಾಲಕನೊಬ್ಬ ಸಾವನ್ನಪ್ಪಿದ್ದರೆ,ಬೆಂಗಳೂರಿನಲ್ಲು ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೆಳಗಾವಿ,ಮಂಗಳೂರು ಉತ್ತರ ಕನ್ನಡ,ಸೇರಿದಂತೆ ರಾಜ್ಯದ ವಿವಿಧ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆ ನೀರಿನಿಂದ ಜನ ಜೀವನ ಅಸ್ತವ್ಯಸ್ತವಾಗಿದೆ, ಬೆಂಗಳೂರಿನಲ್ಲಿ ಹಲವಾರು ಪ್ರದೇಶಗಳು ಜಲಾವೃತವಾಗಿವೆ, ಇಂದು ಬೆಳಿಗ್ಗೆ ಸುರಿದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸಂಚಾರಕ್ಕೂ…

ಬಿಜೆಪಿಯ ೧೮ ಶಾಸಕರ ಅಮಾನತು ರದ್ದು ವಾಪಾಸ್ ಪಡೆದ ಸ್ಪೀಕರ್

ಬೆಂಗಳೂರು,ಮೇ, ೨೫- ಶಿಸ್ತು ಪಾಲನೆ ಮಾಡದೆ ಅಶಿಸ್ತು ವರ್ತಿಸಿದರು ಎನ್ನುವ ಕಾರಣಕ್ಕೆ ಬಿಜೆಪಿಯ ೧೮ ಶಾಸಕರನ್ನು ಅಮಾನತು ಮಾಡಿದ್ದ ಆದೇಶವನ್ನು ವಿಧಾನಸಭಾಕ್ಷ ಯು.ಟಿ.ಖಾದರ್ ಹಿಂಪಡೆದಿದ್ದಾರೆ. ಈ ಕುರಿತು ಅಧಿಕೃತ ಆದೇಶವನ್ನು ಬಿಡುಗಡೆಗೊಳಿಸಿದ್ದು ಎಲ್ಲಾ ೧೮ ಶಾಸಕರ ಅಮಾನತುನ್ನು ರದ್ದು ಪಡಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.ಕಳೆದ ಅಧಿವೇಶನದ ಅವಧಿಯಲ್ಲಿ ಸಭಾದ್ಯಕ್ಷರ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ಮಾನ್ಯ ವಿಧಾನಸಭಾ ಸದಸ್ಯರಾದ ದೊಡ್ಡನಗೌಡ ಹೆಚ್. ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು),…

ಸಮಾನತೆಗಾಗಿ ಕ್ರಾಂತಿ ನಡೆದಿದ್ದು ಕಲ್ಯಾಣದಲ್ಲಿ ಮಾತ್ರ: ಈಶ್ವರ ಖಂಡ್ರೆ

ಮೈಸೂರು,ಮೇ,25-ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಕ್ರಾಂತಿಗಳು ನಡೆದಿವೆ ಆದರೆ, ಸಮಾನತೆಗಾಗಿ, ಸಮಸಮಾಜದ ನಿರ್ಮಾಣಕ್ಕಾಗಿ ಕ್ರಾಂತಿ ನಡೆದಿದ್ದು ಕಲ್ಯಾಣದಲ್ಲಿ ಮಾತ್ರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರು ಕಲಾಮಂದಿರದಲ್ಲಿಂದು ಆಯೋಜಿಸಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೌಢ್ಯ, ಅಸ್ಪೃಶ್ಯತೆ, ಶ್ರೇಣಿರಹಿತ, ಜಾತಿ ರಹಿತ ಸಮಾಜ ಬಸವಾದಿ ಶರಣರ ಕಲ್ಪನೆಯಾಗಿತ್ತು. 800 ವರ್ಷಗಳು ಕಳೆದರೂ ಅದು ಸಾಕಾರವಾಗಿಲ್ಲ ಎಂದರು. ಮಹಿಳೆಯರಿಗೆ ಸಮಾನತೆ ನೀಡಿದ್ದೇ ಬಸವಾದಿ ಶರಣರು. ಅಕ್ಕನಿಗೆ ಮಹಾದೇವಿ ಎಂದು ಹೇಳುವ ಮೂಲಕ…

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಲಕ್ಷ್ಮೀ ಹೆಬ್ಬಾಳಕರ್

* *ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ಚಿಕ್ಕಮಗಳೂರು,ಮೇ,24-ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮಾಜದ ಮಗಳಾಗಿ ಕಾರ್ಯಕ್ರಮಕ್ಕೆ ಬಂದಿರುವೆ. ಬೇರೆ…

ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲು ರಾಜ್ಯಪಾಲ ಥಾವರಚ ಚಂದ್ ಸಲಹೆ

ಬೆಂಗಳೂರು ,ಮೇ,24- “ವಿಪತ್ತು ನಿರ್ವಹಣೆಯ ಪ್ರಮುಖ ಆಧಾರಸ್ತಂಭವೆಂದರೆ ಸ್ಥಳೀಯ ಸಮುದಾಯ. ಸ್ಥಳೀಯ ಜನರಿಗೆ ಸಬಲೀಕರಣ, ಅರಿವು ಮತ್ತು ತರಬೇತಿ ನೀಡಿದರೆ, ವಿಪತ್ತಿನ ಪರಿಣಾಮವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ವಿಪತ್ತು ನಿರ್ವಹಣಾ ಸಮ್ಮೇಳನದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ” ಶಾಲಾ ಹಂತದಿಂದಲೇ ವಿಪತ್ತು ಜಾಗೃತಿ ತರಬೇತಿಯನ್ನು ಪ್ರಾರಂಭಿಸಬೇಕು. ಗ್ರಾಮ…

1 9 10 11 12 13 52
error: Content is protected !!