Browsing: ರಾಷ್ಟ್ರೀಯ

ರಾಷ್ಟ್ರೀಯ

ಜಿಎಸ್ ಟಿ ಸರಳೀಕರಣದಿಂದ ರಾಜ್ಯಕ್ಕೆ 2.50 ಲಕ್ಷ ಕೋಟಿ ನಷ್ಟ- ಕೃಷ್ಣ ಭೈರೇಗೌಡ

ನವದೆಹಲಿ, ಆ30- ಕೇಂದ್ರ ಸರ್ಕಾರ ಜಿಎಸ್ ಟಿ ಸರಳೀಕರಣ ಮಾಡಿರು ವ ಕಾರಣ ರಾಜ್ಯಗಳ ತೆರಿಗೆಯಲ್ಲಿ 2.50 ಲಕ್ಷ ಕೋಟಿ ನಷ್ಟವಾಗುತ್ತಿದ್ದುವಿದರವಲಾಭ ಕೆಲವು ಕಂಪನಿಗಳಿಗೆ ಸಿಗುವಂತಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಳವಳ ವ್ಯಕ್ತ ಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿ ರೂಪಾಯಿಯಿಂದ 2.5 ಲಕ್ಷ ಕೋಟಿ…

ಮಂಡ್ಯ ಜಿಲ್ಲೆ ಸೇರಿ ರಾಜ್ಯದ ಹೆದ್ದಾರಿ ಬಗ್ಗೆ ಗಡ್ಕರಿಯೊಂದಿಗೆ ಎಚ್.ಡಿ.ಕೆ ಚರ್ಚೆ

ನವದೆಹಲಿ,ಆ,21-ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ…

ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ನವದೆಹಲಿ,ಆ,13-ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು; 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು…

ಕರ್ನಾಟಕ,ಮಹಾರಾಷ್ಟ್ರದಲ್ಲಿ ಮತಗಳ್ಳತನ ಸಂಬಂಧ ದಾಖಲೆ ಬಿಡುಗಡೆಮಾಡಿದ ರಾಹುಲ್ ಗಾಂಧಿ

ನವದೆಹಲಿ, ಆ,08-ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 2004 ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಇಂದು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದರು. ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ.…

ಬೆಂಗಳೂರಿನಲ್ಲಿ ಆಲ್ ಖೈದಾ ಉಗ್ರ ಸಂಘಟನೆ ನಾಯಕಿ ಯ ಬಂಧನ

ಬೆಂಗಳೂರು, ಜು,30-ಭಯೋತ್ಪಾದನಾ ಸಂಘನೆಗಳೊಂದಿಗೆ ಸಂಬಂಧ ಹೊಂದಿರುವವರ ವಿರುದ್ಧ ಸಮರ ಸಾರಿರುವ ವಿಶೇಷ ತನಿಖಾ ದಳ ಬೆಂಗಳೂರಿನಲ್ಲಿ ನೆಲಸಿದ್ದನ್ನು ಪತ್ತೆ ಹಚ್ಚಿದೆ. ಆಪರೇಷನ್ ಸಿಂಧೂರ ನಂತರ ದೇಶದಲ್ಲಿ ಉಗ್ರರ ಜೊತೆ ನಂಟು ಹೊಂದಿ ವಿವಿಧ ರಾಜ್ಯಗಳಲ್ಲಿ ನೆಲಸಿ ಮಾಹಿತಿ ಸಂಗ್ರಹಿದ್ದವರನ್ನು ಬಂಧಿಸುತ್ತಾ ಬಂದಿದೆ. ಗುಜರಾತ್ ಎಟಿಎಸ್ ಬೆಂಗಳೂರಿನ ಮಹಿಳೆಯನ್ನು ಬಂಧಿಸಿದೆ, ಅವರು ಭಯಾನಕ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಲಾಗುತ್ತದೆ. ಮಹಿಳೆಯ ಹೆಸರು ಶಮಾ ಪರ್ವೀನ್, ಈಕೆಗೆ 30 ವರ್ಷ. ಗುಪ್ತಚರ ಮಾಹಿತಿಯ ಆಧಾರದ…

ಉಪರಾಷ್ಟ್ರಪತಿ ರೇಸ್‌ನಲ್ಲಿರುವ ಪ್ರಮುಖ ಹೆಸರು ಹರಿವಂಶ್ ನಾರಾಯಣ್

ನವದೆಹಲಿ,ಜು,೨೪-ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಆ ಸ್ಥಾನಕ್ಕೆ ಯಾರು ಎನ್ನುವ ಕುತೂಹಲಗಳು ಇವೆ ಈ ಮಧ್ಯೆ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಹೌದು.. ಹರಿವಂಶ್ ನಾರಾಯಣ್ ಸಿಂಗ್ ಅವರು ರಾಷ್ಟ್ರಪತಿ ದ್ರೌಪತಿ ಮುರ್ಮ ಅವರನ್ನು ಭೇಟಿ ಮಾಡಿ ಬಂದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು ಬಹುತೇಕ ಇವರನ್ನು ಉಪರಾಷ್ಟ್ರಪತಿಯನ್ನಾಗಿ ನೇಮಕ ಮಾಡುವ ಸಾದ್ಯತೆಳು ಹೆಚ್ಚಾಗಿವೆ ಎನ್ನುತ್ತವೆ ಮೂಲಗಳು ಬಿಹಾರ ಮೂಲದ ಹರಿವಂಶ್‌ಗೆ ಅಪಾರ ರಾಜಕೀಯ ಅನುಭವವಿದೆ.…

ಅಕ್ರಮ ಹಣ ವರ್ಗಾವಣೆ ಪ್ರಕರಣ-ರಿಲಿಯನ್ಸ್ ಗ್ರೂಪ್ ಮೇಲೆ ಇಡಿ ದಾಳಿ

ನವದೆಹಲಿ,ಜು,೨೪-ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಬಂಧಿಸಿದಂತೆ ಜಾರಿ ನಿರ್ದೆಶನಾಲಯ(ಇಡಿ) ದೆಹಲಿ ಮತ್ತು ಮುಂಬೈನಲ್ಲಿರುವ ರಿಲಯನ್ಸ್‌ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆ ನಡೆಸಲಾಗಿದೆ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಎರಡು ಎಪ್‌ಐಆರ್ ಪ್ರಕರಣಕ್ಕೆ ಕುರಿತಂತೆ ಈ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ ಕಾರ್ಯಾಚರಣೆಯ ಭಾಗವಾಗಿ, ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ೫೦ ಕ್ಕೂ ಹೆಚ್ಚು ಅನಿಲ್ ಅಂಬಾನಿ ಅವರ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ೨೫ ಕ್ಕೂ ಹೆಚ್ಚು…

ನಿಕ್ಕಂ, ಸೇರಿ ನಾಲ್ವರು ರಾಜ್ಯ ಸಭೆಗೆ ನಾಮ ನಿರ್ದೇಶನ

ನವದೆಹಲಿ,ಜು.೧೩- ಸಾರ್ವಜನಿಕ ಸೇವೆ,ಕಾನೂನು,ರಾಜತಾಂತ್ರಿಕತೆ ಮತ್ತು ವಿದ್ವಾಂಸರ ಕೊಡಿಗೆಗಳನ್ನು ಪರಿಗಣಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಲ್ಕು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. ನಾಮನಿರ್ದೇಶಿತರಾದ ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಅನುಭವಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಿಂ, ಕೇರಳ ಮೂಲದ ಶಿಕ್ಷಣ ತಜ್ಞ ಮತ್ತು ಸಮಾಜಿಕ ಕಾರ್ಯಕರ್ತ ಸಿ.ಸದಾನಂದನ್ ಮಾಸ್ಟರ್ ಮತ್ತು ಖ್ಯಾತ ಇತಿಹಾಸಕಾರ ಡಾ.ಮೀನಾಕ್ಷಿ ಜೈನ್ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ ಈ ನಾಮ ನಿರ್ದೇಶನಗಳು,ಸಾಹಿತ್ಯ,ವಿಜ್ಞಾನ,ಕಲೆ ಮತ್ತು ಸಾಮಾಜಿಕ ಸೇವೆಯಂತಹ ಕ್ಷೇತ್ರಗಳಲ್ಲಿ ಶ್ರೇಷ್ಠತೆ…

ಉಡುಪಿ ಮೂಲಕ ವಿವಿಧ ದೇಶಗಳಿಗೆ ಡ್ರಗ್ಸ್ ಮಾರುತ್ತಿದ್ದ ಜಾಲ ಪತ್ತೆ,10 ಮಂದಿ ಬಂಧನ

ನವದೆಹಲಿ, ಜು,03-ಕರ್ನಾಟಕದ ಉಡುಪಿ ಮೂಲಕ ಹತ್ತಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ದೆಹಲಿ ಪೊಲೀಸರು ಬೇದಿಸಿದ್ದು ಈ ಸಂಬಂಧ 10 ಮಂದಿಯನ್ನು ಬಂದಿಸಿದ್ದಾರೆ. ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್…

ತೆಲಂಗಾಣ; ರಸಾಯಿನಕ ಕಾರ್ಖಾನೆಯಲ್ಲಿ ಸ್ಪೋಟ ಸತ್ತವರ ಸಂಖ್ಯೆ 34 ಕ್ಕೆ ಏರಿಕೆ

ಸಂಗಾರೆಡ್ಡಿ (ತೆಲಂಗಾಣ),ಜು,01- ಜಿಲ್ಲೆಯ ಪಾರ್ಮಾಸ್ಯೂಟಿಕಲ್ ಘಟಕವೊಂದರಲ್ಲಿ ಸೋಮವಾರ ಬೆಳಗ್ಗೆ ರಿಯಾಕ್ಟರ್ ಸ್ಫೋಟ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತೆಲಂಗಾಣ ಆರೋಗ್ಯ ಸಚಿವ ದಾಮೋದರ ರಾಜಾ ನರಸಿಂಹ ತಿಳಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆರ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಜಿ. ವಿವೇಕ್ ವೆಂಕಟಸ್ವಾಮಿ, ”ಇಂದು ಬೆಳಗ್ಗೆ 8 ಮಂದಿ ಸಾವನ್ನಪ್ಪಿದ್ದರು. ಮತ್ತೆ ನಾಲ್ಕು ಮಂದಿಯ ಮೃತದೇಹ ಪತ್ತೆಯಾಗಿದೆ” ಎಂದು ಹೇಳಿದ್ದಾರೆ. ಪಾಶಮಿಲಾರಾಂ ಕೈಗಾರಿಕಾ ಎಸ್ಟೇಟ್‌ನಲ್ಲಿರುವ…

ಪುರಿ ಜಗನ್ನಾಥ ಯಾತ್ರೆ ವೇಳೆ ಬಿಸಿಲಿನ ತಾಪ ಮತ್ತು ಜನದಟ್ಟಣೆಗೆ ನೂರಾರು ಮಂದಿಅಸ್ವಸ್ಥ

ಒಡಿಶಾ,ಜೂ,೨೮-ದೇಶದ ಪ್ರತಿಷ್ಠಿತ ಪುರಿ ರಥಯಾತ್ರೆಯಲ್ಲಿ ಬಿಸಿಲಿನ ತಾಪ ಜನದಟ್ಟಣೆಯಿಂದಗಿ ನೂರಾರು ಮಂದಿ ಅಸ್ವಸ್ಥರಾಗಿದ್ದು ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳುತಿಳಿಸಿವೆ ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಒಡಿಶಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

ಮುಂಬೈನಲ್ಲಿ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ಪೈಲಟ್‌ಗೆ ಕಿರುಕುಳ-ಮೂವರ ವಿರುದ್ಧ ದೂರು ದಾಖಲು

ಮುಂಬೈ,ಜೂ.೨೨- ಕೆಲಸ ಮುಗಿಸಿ ತೆರಳೂತ್ತಿದ್ದ ಮಹಿಳಾ ವಿಮಾನಯಾನ ಪೈಲಟ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಬರ್ ಕ್ಯಾಬ್ ಚಾಲಕ ಮತ್ತು ಇತರ ಇಬ್ಬರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಕಳೆದ ಗುರುವಾರ ರಾತ್ರಿ ೧೧.೧೫ ರ ಸುಮಾರಿಗೆ ಮಹಿಳೆ ದಕ್ಷಿಣ ಮುಂಬೈನಿಂದ ಘಾಟ್ರೋಪರ್‌ನಲ್ಲಿರುವತನ್ನ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯ ಪತಿ ನೌಕಾಪಡೆಯ ಅಧಿಕಾರಿ, ಆದರೆ ಅವರಿಗೆ ಇನ್ನೂ ಸರ್ಕಾರಿ ವಸತಿ ಸಿಗದ ಕಾರಣ, ಮಹಿಳೆ ಘಾಟ್ರೋಪರ್‌ನಲ್ಲಿ ವಾಸಿಸುತ್ತಿರು.ಗುರುವಾರ…

ಇನ್ನೂ ಮುಂದೆ ವಾಹನಗಳ ಪಾಸ್ಟ್ಯಾಗ್ ವಾರ್ಷಿಕ 3000. ರೂ ಪಾಸ್ – ಗಡ್ಕರಿ

ಹೊಸದಿಲ್ಲಿ,ಜೂ,28-ಹೆದ್ದಾರಿಗಳಲ್ಲಿ ಸರಾಗ ಪ್ರಯಾಣಕ್ಕಾಗಿ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್‌ನ್ನು ಪರಿಚಯಿಸುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಷಯವನ್ನು ಅವರು ಹಂಚಿಕೊಂಡಿದ್ದು,ವಾರ್ಷಿಕ ಪಾಸ್‌ಗೆ 3,000 ರೂ.ದರವನ್ನು ನಿಗದಿಗೊಳಿಸಲಾಗಿದ್ದು, 2025,ಆ.15ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಹೊಸ ಫಾಸ್ಟ್‌ಟ್ಯಾಗ್ ಪಾಸ್ ಕಾರು,ಜೀಪ್ ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಅದನ್ನು ಪಡೆದುಕೊಂಡ ದಿನಾಂಕದಿಂದ ಒಂದು ವರ್ಷದವರೆಗೆ ಅಥವಾ 200 ಟ್ರಿಪ್‌ಗಳವರೆಗೆ,ಇವುಗಳಲ್ಲಿ ಯಾವುದು ಮೊದಲು ಬರುತ್ತದೆಯೋ ಅಲ್ಲಿಯವರೆಗೆ ಸಿಂಧುವಾಗಿರುತ್ತದೆ. ಇದುಟೋಲ್‌ಗೆಸಂಬಂಧಿಸಿದಕುಂದುಕೊರತೆಗಳನ್ನು,ವಿಶೇಷವಾಗಿ…

ಹೊಟ್ಟೆನೋವು ಸಮಸ್ಯೆ-ಸೋನಿಯಾಗಾಂಧಿ ಮತ್ತೇ ಆಸ್ಪತ್ರೆಗೆ ದಾಖಲು

ನವದೆಹಲಿ,ಜೂ.೧೬- ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹೊಟ್ಟೆ ನೋವಿನಿಂದ ಬಳಲಿದ ಸೋನಿಯಾ ಗಾಂಧಿಯನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ೭೮ ವರ್ಷದ ಸೋನಿಯಾ ಗಾಂಧಿ ಈ ತಿಂಗಳ ಆರಂಭದಲ್ಲಿ ಆರೋಗ್ಯ ಕ್ಷೀಣಿಸಿದ ಕಾರಣ ಆಸ್ಪತ್ರೆ ದಾಖಲಾಗಿದ್ದರು. ಬಳಿಕ ಸುಧಾರಿಸಿಕೊಂಡು ಬಿಡುಗಡೆಯಾಗಿದ್ದ ಸೋನಿಯಾ ಗಾಂಧಿ ಇದೀಗ ಒಂದೇ ವಾರದಲ್ಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಹೊಟ್ಟೆ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಈ ಬಾರಿ ಸೋನಿಯಾ ಗಾಂಧಿ ಆಸ್ಪತ್ರೆ ದಾಖಲಾಗಿದ್ದಾರೆ. ಗಂಗಾ ರಾಮ್…

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ೭ ಮಂದಿ ಸಾವು

ಉತ್ತರಾಖಂಡ,ಜೂ,೧೫- ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡದ್ದು, ಪೈಲಟ್ ಸೇರಿ ೭ ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ವಿಮಾನ ೬ ಮಂದಿ ಪ್ರಯಾಣಿಕರನ್ನು ಗುಪ್ತಕಾಶಿಗೆ ಹೊತ್ತು ತೆರಳುತ್ತಿದ್ದು, ಈ ವೇಳೆ ಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ ೫.೩೦ರ ಸುಮಾರಿಗೆ ಪತವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಹೆಲಿಕಾಪ್ಟರ್ ಪತನವನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ…

ಅಹಮದಬಾದ್ ಬಳಿ ಏರ್ ಇಂಡಿಯಾ ವಿಮಾನ ಪತನ; 247 ಮಂದಿ ಸಾವು

ಅಹಮದಾಬಾದ್, ಜೂ,12-ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಏರ್ ಇಂಡಿಯಾ ವಿಮಾನ ಕೆಲವೇ ನಿಮಿಷಗಳಲ್ಲಿ ಮಣಿನಗರ ಪ್ರದೇಶದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ವೈದ್ಯರ ವಸತಿ ಸಮುಚ್ಚಯಕ್ಕೆ ಅಪ್ಪಳಿಸಿದೆ. ಈ ಭೀಕರ ದುರಂತದಲ್ಲಿ ಮೂವರು ವೈದ್ಯರು ಹಾಗೂ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಹಲವರು…

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ-ಎಚ್.ಡಿ.ಕೆ

ನವದೆಹಲಿ,ಜೂ,02-ದೇಶದ ಉದ್ದಗಲಕ್ಕೂ ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ರೂಪಿಸಲಾಗಿರುವ ₹4,150 ಕೋಟಿ ಮೊತ್ತದ ಬೃಹತ್‌ ಹೂಡಿಕೆ ಯೋಜನೆಯನ್ನು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ನವದೆಹಲಿಯ ಬೃಹತ್‌ ಸಚಿವಾಲಯದ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ದೇಶದಲ್ಲಿ ಭೂಸಾರಿಗೆ ಕ್ಷೇತ್ರದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂಬ ಪ್ರಧಾನಿಗಳ ಸಂಕಲ್ಪವನ್ನು ಈಡೇರಿಸುವ ಗುರಿಯೊಂದಿಗೆ ಈ ಹೂಡಿಕೆ ಯೋಜನೆಯನ್ನು ಘೋಷಣೆ…

ಪಾಕ್-ಭಾರತ ಸಂಘರ್ಷದಲ್ಲಿ ಯುದ್ಧವಿಮಾನಗಳು ನಷ್ಟ ನಿಜ-ಚೌವಾಣ್

ನವದೆಹಲಿ,ಜೂ,೦೧-ಪಾಕ್-ಭಾರತ ಸಂಘರ್ಷದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿ ಪರಿಣಾಮ ಭಾರತೀಯ ಸೇನೆ ಜೆಟ್‌ಗಳು ನಷ್ಟವಾಗಿದೆ ಎನ್ನುವುದನ್ನು ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಒಪ್ಪಿಕೊಂಡಿದ್ದಾರೆ. ಆದರೆ ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾ ಹೇಳಿರುವುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ ಬ್ಲೂಮಬರ್ಗ್ ಟಿವಿಗೆ ನೀಡಿರುವ ಸಂದರ್ಶನದಲ್ಲಿ ಅವರು ಲೋಪಗಳನ್ನು ಸರಿಪಡಿಸಿಕೊಂಡು ಭಾರತೀಯ ಮಿಲಟರಿ ಪಡೆ ತಕ್ಕ ಶಾಸ್ತಿ ಮಾಡಿತು ಎಂದು ಅವರು ಹೇಳಿದ್ದಾರೆ, ಈ ವೇಳೆ ಎಷ್ಟು ವಿಮಾನಗಳು ಯುದ್ಧದಲ್ಲಿ ಕಳೆದುಕೊಳ್ಳಲಾಯಿತು ಎನ್ನುವ…

ಥಾಯ್ಲೆಂಡ್ ನ ಸುಚಾತಾ ಚುಂಗ್ ಸಿರಿ ಗೆ ಮಿಸ್ ವರ್ಲ್ಡ್ ಕಿರೀಟ

ಹೈದರಾಬಾದ್,ಮೇ,೩೧ ಹೈದರಾಬಾದ್ ನಲ್ಲಿ ನಡೆದ ೭೨ನೇ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಥಾಯ್ಲೆಂಡ್ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರು ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡರು. ಶನಿವಾರ ಸಂಜೆ ಹೈದರಾಬಾದ್‌ನಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ವಿಶ್ವ ಸುಂದರಿ ಕಿರೀಟವು ಸುಚಾತಾ ಅವರ ಪಾಲಾಯಿತು. ಭಾರತವನ್ನು ಪ್ರತಿನಿಧಿಸಿದ್ದ ನಂದಿನಿ ಗುಪ್ತಾ ಅವರು ಟಾಪ್ ೮ರಲ್ಲಿ ಸ್ಥಾನ ಪಡೆಯಲು ವಿಫಲರಾದರು. ಥಾಯ್ಲೆಂಡ್ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರಿಗೆ ಸುಮಾರು ೮ ಕೋಟಿ ರೂಪಾಯಿಯ ಬೆಲೆ ಬಾಳುವ ವಜ್ರದ…

ಆಪರೇಷನ್ ಸಿಂಧೂರ ಭಯೋತ್ಪಾದನೆ ಹೋರಾಟಕ್ಕೆ ಹೊಸ ವಿಶ್ವಾಸ ಮೂಡಿಸಿದೆ-ಮೋದಿ

ನವದೆಹಲಿ,ಮೇ೨೫- ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಭಾರತದ ಅಚಲ ಬದ್ದತೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದು, ಆಪರೇಷನ್ ಸಿಂಧೂರ್ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಇದು ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರವಾಗಿದೆ. ಈ ಚಿತ್ರವು ಇಡೀ ದೇಶವನ್ನು ದೇಶsಕ್ತಿಯ ಭಾವನೆಗಳಿಂದ ತುಂಬಿಸಿ ತ್ರಿವರ್ಣ ಧ್ವಜದಲ್ಲಿ ಅಲಂಕರಿಸಿದೆ ಎಂದಿದ್ದಾರೆ ಆಪರೇಷನ್ ಸಿಂಧೂರ್ ಯಶಸ್ಸಿನ ನಂತರದ ಮೊದಲ ಬಾರಿಗೆ ತಮ್ಮ ಮಾಸಿಕ ರೇಡಿಯೋ…

1 2 3 10
error: Content is protected !!