ವಾಣಿಜ್ಯ
ಆರ್ ಬಿ ಐ ಹೆಚ್ಚುವರಿ ಹಣ 99,122 ಕೋಟಿ ರೂ ಕೇಂದ್ರಕ್ಕೆ ವರ್ಗಾವಣೆ
ನವದೆಹಲಿ, ಮೇ,21:ಆರ್ ಬಿ ಐ ಹೆಚ್ಚುವರಿ ಹಣ 99,122 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರಕ್ಕೆ ವರ್ಗಾವಣೆ ಮಾಡಲು ಒಪ್ಪಿಗೆ ನೀಡಿದೆ. ಈ ಸಂಬಂಧ ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ಆರ್ ಬಿ ಐ ಮಂಡಳಿ ಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆರ್ಬಿಐ ಮಂಡಳಿಯ ಪ್ರಕಾರ, ಪ್ರಸ್ತುತ ಆರ್ಥಿಕ ಪರಿಸ್ಥಿತಿ, ಜಾಗತಿಕ ಮತ್ತು ದೇಶೀಯ ಸವಾಲುಗಳು ಮತ್ತು ಕೋವಿಡ್ ಎರಡನೇ ಅಲೆ ಆರ್ಥಿಕತೆಯ ಮೇಲೆ ಉಂಟು ಮಾಡಿರುವ ಪ್ರತಿಕೂಲ ಪರಿಣಾಮವನ್ನು ತಗ್ಗಿಸುವ ಸಲುವಾಗಿ…



