Browsing: ವಾಣಿಜ್ಯ

ವಾಣಿಜ್ಯ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌ by-ಕೆಂಧೂಳಿ ಬೆಂಗಳೂರು, ಏ,03-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋವನ್ನು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಬಿಡುಗಡೆ ಮಾಡಿದರು.ವ ನಂತರ ಮಾತನಾಡಿದ ಸಚಿವರು, ಭಾರತಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇ ಬಹುಮುಖ್ಯವಾದ ಪಾತ್ರವಹಿಸಿದೆ. ಉದ್ಯೋಗಾವಕಾಶವಾಗಿರಲಿ ಅಥವಾ ವಿವಿಧ ವಲಯಗಳಲ್ಲಿ ಎಂಎಸ್‌ಎಂಇಯು ತನ್ನದೇ ಆದ ಪ್ರಾಮುಖ್ಯತೆ…

ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ಉದ್ಯಮ ಮಂಥನ

ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ಉದ್ಯಮ ಮಂಥನ by-ಕೆಂಧೂಳಿ ಬೆಂಗಳೂರು,ಮಾ,19-ರಾಜ್ಯವನ್ನು ಜಾಗತಿಕ ಮಟ್ಟದ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಏಪ್ರಿಲ್‌ ಕೊನೆ ವಾರದಲ್ಲಿ ಎರಡು ದಿನಗಳ ʻಉದ್ಯಮ ಮಂಥನʼ ಕಾರ್ಯಕ್ರಮ ನಡೆಸಲಾಗುವುದು. ಇದರಲ್ಲಿ ಉತ್ಪಾದನಾ ವಲಯದಲ್ಲಿ ಮುಂಚೂಣಿಯಲ್ಲಿರುವ ಉದ್ದಿಮೆಗಳ ಮುಖ್ಯಸ್ಥರನ್ನು ಕರೆದು, ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ವಿಧಾನಸೌದದ ತಮ್ಮ ಕಚೇರಿಯಲ್ಲಿ ಈ ಕುರಿತು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಾಥಮಿಕ…

ನಾಲ್ಕು ಕೃಷಿ ಉತ್ಪನ್ನ ಯಶವಂತಪುರದಿಂದ ಶಿಫ್ಟ್ -ಶಿವಾನಂದ ಪಾಟೀಲ ಭರವಸೆ

ನಾಲ್ಕು ಕೃಷಿ ಉತ್ಪನ್ನ ಯಶವಂತಪುರದಿಂದ ಶಿಫ್ಟ್ -ಶಿವಾನಂದ ಪಾಟೀಲ ಭರವಸೆ by-ಕೆಂಧೂಳಿ ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ನಾಲ್ಕು…

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ನಕಾನ್ಸುಲ್ ಜನರಲ್

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ನಕಾನ್ಸುಲ್ ಜನರಲ್ by-ಕೆಂಧೂಳಿ ಬೆಂಗಳೂರು,ಮಾ,13- ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ಹೇಳಿದ್ದಾರೆ. ಅವರು ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ…

ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ

ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ by-ಕೆಂಧೂಳಿ ಬೆಂಗಳೂರು,ಮಾ,05- ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಬೇಕಾಗುವ ಸಾಧನಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಕಾಲಿನ್ಸ್ ಏರೋಸ್ಪೇಸ್ ಎಂಜಿನಿಯರಿಂಗ್ ಕಂಪನಿಯು ಯಲಹಂಕ ಸಮೀಪದ ವೆಂಕಟಾಲ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಪರೀಕ್ಷಾ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲಿನ್ಸ್ ಏರೋಸ್ಪೇಸ್ ಕಂಪನಿಯು `ಪವರ್ಡ್ ಬೈ…

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ…

ಜಿಮ್ ಬಂಪರ್: ₹10.27 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಖಾತ್ರಿ

ಜಿಮ್ ಬಂಪರ್: ₹10.27 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಖಾತ್ರಿ by-ಕೆಂಧೂಳಿ ಬೆಂಗಳೂರು,ಫೆ,15- ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ…

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.14-ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2023 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು…

ಜಿಮ್ ಇನ್ವೆಸ್ಟ್ ಕರ್ನಾಟಕ 25,ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ- ಶಶಿ ತರೂರ್

ಜಿಮ್ ಇನ್ವೆಸ್ಟ್ ಕರ್ನಾಟಕ 25,ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ- ಶಶಿ ತರೂರ್ by-ಕೆಂಧೂಳಿ ಬೆಂಗಳೂರು,,ಫೆ,14- ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಶುಕ್ರವಾರ ಪ್ರತಿಪಾದಿಸಿದರು. ‘ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)’ದಲ್ಲಿ ‘ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು’ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ…

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕತ by-ಕೆಂಧೂಳಿ ಬೆಂಗಳೂರು,ಫೆ,13-ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿ ಅಭಿಮತ

ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿ ಅಭಿಮತ by-ಕೆಂಧೂಳಿ ಬೆಂಗಳೂರು, ಫೆ. 12-ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ ಹೂಡಿಕೆ ಸಮಾವೇಶ ಮಾತ್ರವಲ್ಲ. ಇದು ಭವಿಷ್ಯವನ್ನು ರೂಪಿಸುವ ನಮ್ಮ ಸಹಯೋಗದ ಹಾಗೂ ಕೈಗಾರಿಕಾ…

ರಾಜ್ಯಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಭರವಸೆ

ರಾಜ್ಯಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಭರವಸೆ by-ಕೆಂಧೂಳಿ 15 ಸಾಧಕ ಉದ್ಯಮಗಳಿಗೆ ಇನ್ವೆಸ್ಟ್ ಕರ್ನಾಟಕ ಪುರಸ್ಕಾರ ಪ್ರದಾನ ಬೆಂಗಳೂರು,ಫೆ,12-ರಾಜ್ಯಗಳ ಪ್ರಗತಿಯೇ ದೇಶದ ಪ್ರಗತಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಭಾಗಿತ್ವ ಹಾಗೂ ಸಹಕಾರ ತತ್ತ್ವದ ಮೇಲೆ ಕೆಲಸ ಮಾಡಿದರೆ ಭಾರತವು 2047ರ ಹೊತ್ತಿಗೆ 30 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಯಲಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರವು ಕರ್ನಾಟಕಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರು…

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ ಬೆಂಗಳೂರು,ಫೆ,12-ವಿಪ್ರೋ-ಜಿಇ ಹೆಲ್ತ್ ಕೇರ್ ಸಂಸ್ಥೆಯು ಕರ್ನಾಟಕದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಇನ್ನೂ 8,000 ಕೋಟಿ ರೂ. ಹೂಡಿಕೆ ಮಾಡಲಿದೆ. ಇದು ಕಳೆದ ಎರಡು ದಶಕಗಳಲ್ಲಿ ವಿನಿಯೋಗಿಸಿರುವ 32 ಸಾವಿರ ಕೋಟಿ ರೂ. ಬಂಡವಾಳದ ಮುಂದುವರಿದ ಭಾಗವಾಗಿದೆ ಎಂದು ಕಂಪನಿಯ ದಕ್ಷಿಣ ಏಷ್ಯಾ ವಿಭಾಗದ ಮುಖ್ಯಸ್ಥ ಚೈತನ್ಯ ಸರವಟೆ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ನಡೆದ `ಜಗತ್ತಿನ ಅಗತ್ಯಗಳಿಗೆ ಮೇಕ್ ಇನ್…

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ by-ಕೆಂಧೂಳಿ ಬೆಂಗಳೂರು,ಫೆ,12-: ಸ್ವಯಂಚಾಲಿತ ಕಾರುಗಳು ಮುಂದಿನ ದಿನಗಳಲ್ಲಿ ಸಂಚಾರ ಕ್ಷೇತ್ರದಲ್ಲಿನ ಬಹುದೊಡ್ಡ ತಂತ್ರಜ್ಞಾನವಾಗಲಿದೆ ಎಂದು ‘ಮರ್ಸಿಡಿಸ್-ಬೆನ್ಜ್ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಸಂತೋಷ್‌ ಅಯ್ಯರ್‌ ಬುಧವಾರ ಅಭಿಪ್ರಾಯಪಟ್ಟರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ‘ಜಾಗತಿಕ ಹೂಡಿಕೆ ಸಮಾವೇಶ’ದಲ್ಲಿ ನಡೆದ ‘ವೇಗದ ನಗರೀಕರಣದ ವೇಳೆ ಸಂಚಾರ ಕ್ಷೇತ್ರದ ಭವಿಷ್ಯ’ ಗೋಷ್ಠಿಯಲ್ಲಿ ಮಾತನಾಡಿದರು. ಸರಕಾರ ಕಾರುಗಳ ಮೇಲೆ 68% ತೆರಿಗೆ ವಿಧಿಸುತ್ತಿದೆ. ಆದರೆ ಆ ಹಣ ಬೇರೆಡೆ ಬಳಕೆಯಾಗುತ್ತಿರುವುದು ಈ…

ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ

ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’ by-ಕೆಂಧೂಳಿ ಬೆಂಗಳೂರು,ಫೆ,12- `ನಾವು ಸೆಮಿಕಂಡಕ್ಟರ್ ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’ ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್…

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ…

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ,…

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರುಫೆ,11-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ…

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್ by-ಕೆಂಧೂಳಿ ಬೆಂಗಳೂರು,ಫೆ,11- ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.…

1 2 3
error: Content is protected !!