ವಿಜ್ಞಾನ-ತಂತ್ರಜ್ಞಾನ
ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ
ಬೀದರ್, ನ.07-ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ…















