ವೈದ್ಯೋ ನಾರಾಯಣೋ ಹರಿಃ
ರಾಜ್ಯಾದ್ಯಂತ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಚಾಲನೆ
ಬೆಂಗಳೂರು, ಜು,03-ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ…