ಸಿನೆಮಾ
ಕ್ರೈಂ ಥ್ರಿಲ್ಲರ್ ಮಾರಿಗೋಲ್ಡ್..!
ಆರಂಭದಿಂದಲೂ ತನ್ನ ಶೀರ್ಷಿಕೆಯ ಮೂಲಕವೇ ನಿರೀಕ್ಷೆ ಹುಟ್ಟಿಸಿರುವ, ತೀರ್ಥಳ್ಳಿ ಹುಡುಗ ದಿಗಂತ್ ಅಭಿನಯದ ಚಿತ್ರ ಮಾರಿಗೋಲ್ಡ್. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದು, ಹಿನ್ನೆಲೆ ಸಂಗೀತ ಅಳವಡಿಕೆ ಕೊನೇ ಹಂತದಲ್ಲಿದೆ. ಇಷ್ಟರಲ್ಲೇ ಸೆನ್ಸಾರ್ ಅಂಗಳಕ್ಕೆ ಹೋಗಲು ಸಿದ್ದವಾಗಿರುವ ‘ಮಾರಿಗೋಲ್ಡ್’ ಚಿತ್ರ. ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ. ಪಕ್ಕಾ ಕ್ರೈಮ್ ಥ್ರಿಲ್ಲರ್ ಕಥಾನಕ ಹೊಂದಿರುವ ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ರಾಘವೇಂದ್ರ ನಾಯಕ್…