Browsing: Uncategorized

ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಸಂಘಟನೆ ಪ್ರತಿಭಟನೆ

ಬೆಳಗಾವಿ, ಡಿ, ೨೦: ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹೀರೇಬಾಗೇವಾಡಿ ಟೋಲ್ ಬಳಿ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ರಕ್ಷ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣಗೌಡ ಅವರನ್ನೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆ ಎಂಇಎಸ್ ಪುಂಡಾಟ ಖಂಡಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯ ನಿರೀಕ್ಷೆ;ಸಿ.ಎಂ

ಹುಬ್ಬಳ್ಳಿ, ಡಿ 12: ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ…

ಯುವ ಸಬಲೀಕರಣ, ಮಹಿಳಾ ಉದ್ಯಮಶೀಲತೆ ಗುರಿ: `ಕೋಡ್ ಉನ್ನತಿ’ ಉಪಕ್ರಮಕ್ಕೆ ಚಾಲನೆ

ಬೆಂಗಳೂರು,ಡಿ,10: ರಾಜ್ಯದಲ್ಲಿ ಯುವಜನ ಸಬಲೀಕರಣ ಮತ್ತು ಮಹಿಳಾ ಉದ್ಯಮಶೀಲತೆಯನ್ನು ಸಾಧಿಸುವ ಮಹತ್ವಾಕಾಂಕ್ಷೆಯುಳ್ಳ `ಕೋಡ್ ಉನ್ನತಿ’ ಉಪಕ್ರಮಕ್ಕೆ ಐಟಿ, ಬಿಟಿ ಮತ್ತು ಕೌಶಲ್ಯ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಇಲ್ಲಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ, ಯೋಜನೆಯ ಅಂಗವಾಗಿ ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ (ಯುಎನ್ ಡಿಪಿ), ಎಸ್ ಎ ಪಿ ಲ್ಯಾಬ್, ಕೌಶಲ್ಯಾಭಿವೃದ್ಧಿ ಮತ್ತು ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು ಒಡಂಬಡಿಕೆಗೆ ಸಹಿ ಹಾಕಿದವು. ಇದರ ಅಂಗವಾಗಿ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು,…

ಶಿವಾಜಿ ಗಣೇಶನ್ ಅಭಿನಯದ ಪಂತುಲು ನಿರ್ಮಾಣದ ಮಕ್ಕಳ ರಾಜ್ಯ

ಶಿವಾಜಿ ಗಣೇಶನ್ ಅಭಿನಯದ  ಪಂತುಲು ನಿರ್ಮಾಣದ ಮಕ್ಕಳ ರಾಜ್ಯ ಬಿ.ಆರ್.ಪಂತುಲು ನಿರ್ಮಿಸಿ ನಿರ್ದೇಶಿಸಿದ ಕಪ್ಪು-ಬಿಳುಪು ಜಾನಪದ ಕಥಾ ಹಂದರದ ‘ಮಕ್ಕಳ ರಾಜ್ಯ‘ ಚಲನಚಿತ್ರ ೧೯೬೦ರಲ್ಲಿ ತೆರೆಗೆ ಬಂದಿತು. ಬಿ.ಆರ್.ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಜೊತೆಯಲ್ಲಿ ಎಂ.ವಿ.ರಾಜಮ್ಮನವರ ಎಂ.ವಿ.ಆರ್ ಪ್ರೊಡಕ್ಷನ್ಸ್ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದರು, ಮಕ್ಕಳ ಪಾತ್ರಗಳನ್ನೇ ಪ್ರಧಾನವಾಗಿಟ್ಟುಕೊಂಡು ತಯಾರಾದ ಮೊದಲ ಚಿತ್ರ ಇದು. ಈ ಚಿತ್ರದಲ್ಲಿ ಹಿರಿಯ ನಟರ ಅಭಿನಯಕ್ಕಿಂತಲೂ ಮಕ್ಕಳ ಅಭಿನಯವೇ ಪ್ರಮುಖವಾಗಿತ್ತು. ಆ ಕಾಲಕ್ಕೆ ಇದೊಂದು ಪ್ರಯೋಗಾತ್ಮಕ ಚಿತ್ರವೆಂದೇ ಹೇಳಬಹುದಿತ್ತು. ಎಸ್.ಆರ್.ಪುಟ್ಟಣ್ಣ ಕಣಗಾಲ್…

ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್..!

writing-ಪರಶಿವ ಧನಗೂರು ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್ ದೇಶದ ಆರ್ಥಿಕತೆಯನ್ನೆ ಬುಡಮೇಲು ಮಾಡಲು ಹೊರಟಿದ್ದ, ಭಾರತವನ್ನೇ ಬೆಚ್ಚಿ ಬೀಳಿಸಿದ್ದ ಬಹುಕೋಟಿ ಛಾಪಾ ಕಾಗದದ ಹಗಹರಣವೂ 2001ರಲ್ಲಿ ಬೆಳಕಿಗೆ ಬಂದದ್ದು ಬೆಂಗಳೂರಿನಲ್ಲೇ! ಸುಮಾರು ಹತ್ತು ವರ್ಷಗಳ ಕಾಲ ಸಿಬಿಐ ಮತ್ತು ಹಲವು ರಾಜ್ಯಗಳ ಪೊಲೀಸರಿಂದ ತನಿಖೆ ಗೊಳಪಟ್ಟಿದ್ದ 20.000 ಕೋಟಿ ರೂಪಾಯಿಗಳ ಮೌಲ್ಯದ ಈ ನಕಲಿ ಛಾಪಾ ಕಾಗದದ ಹಗಹರಣದ ರೂವಾರಿ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಅಬ್ದುಲ್ ಕರೀಂ ಲಾಲಾ ತೆಲಗಿ.…

2020ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ವಿದೇಶಿಹೂಡಿಕೆಗೆ ದುಬೈ ಭೇಟಿ ನೆರವು: ನಿರಾಣಿ

ಬೆಂಗಳೂರು,ಅ.21-‘ದುಬೈ ಎಕ್ಸ್ ಪೋ 2020’ಭೇಟಿಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ರಾಜ್ಯದಲ್ಲಿ ಅನೇಕ ಪ್ರತಿಷ್ಠಿತ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಇದರಿಂದ ಉದ್ಯೋಗ ಅವಕಾಶಗಳು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್‌. ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮೂರು ದಿನಗಳಲ್ಲಿ ಕಾಲ ನಡೆದ ದುಬೈ ಎಕ್ಸ್ ಪೋ ದಲ್ಲಿ ಐಟಿಬಿಟಿ ಸಚಿವ ಡಾ. ಅಶ್ವಥ್ ನಾರಾಯಣ, ದುಬೈ-ಭಾರತೀಯ ಕೌನ್ಸಿಲರ್ ಡಾ. ಅಮನ್ ಪುರಿ, ಹೆಚ್ಚುವರಿ ಮುಖ್ಯ…

ದಸರಾ;ಮಾರ್ಗಸೂಚಿ ಬಿಡುಗಡೆ,ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು,ಅ,06; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ…

ಬತ್ತಬಾರದು ಭಾವಗಳ ಒರತೆ

ವಿ.ಮಂಜುಳ ಪಟೇಲ್ ಅವರು ಕವನ ಲೇಖನಗಳನ್ನು ಬರೆದಿದ್ದಾರೆ,ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಶೀಘ್ರ ಕವನ ಸಂಕಲನ ಹಾಗೂ ಕಾದಂಬರಿ ಪ್ರಕಟಗೊಳ್ಳಲಿದೆ.ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಅವರು ಟಿಕ್ ಟಾಕ್ ನಲ್ಲಿ ಹೆಚ್ಚು ಕಾಣಸಿಕೊಳ್ಲಕುತ್ತಿದ್ದಾರೆ…ಇವರು ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಿದ್ದಾರೆ. ವಿ. ಮಂಜುಳಾ ಪಟೇಲ್ ಬತ್ತಬಾರದು ಭಾವಗಳ ಒರತೆ ವಾಸ್ತವದ ಹಂಗನ್ನು ಮೀರಿ ಆ ನಿನ್ನ ನೆನಪುಗಳಲ್ಲಿ ಮೆದ್ದಾಗಲೆಲ್ಲ ಇಳಿದು ಬಿಡುವುದು ಮನಸ್ಸು ನಿನ್ನ ಪ್ರೀತಿಯ ಭಿಕ್ಷಾಟನೆಗೆ ಮಮಕಾರದಿ ಕರೆದು ಬಿಡು ನಿನ್ನ ಒಲವಿಗೆ ಒಮ್ಮೆಯಾದರೂ ಒಲವ ರಾಗ ಹೊಸತೇನಲ್ಲ…

ಯಾರಿಗೆ ಯಾರುಂಟು ಯರವಿನ ಸಂಸಾರ

ಜಾತಿ ಮತ್ತು ಹಣ ಬಲದ ರಾಜಕಾರಣ ಇನ್ನೆಷ್ಟು ವರ್ಷ ಕಾಲ ಇರುತ್ತದೋ ಹೇಳಲಾಗದು. ಗುಜರಾತ್ ಸಿಎಂ ಆಗಿರುವ ಭೂಪೇಂದ್ರ ಪಟೇಲರಿಗೆ ಜಾತಿ ತೋರಿಸಿ ಚುನಾವಣೆ ಗೆಲ್ಲುವ ಅಧಿಕಾರವನ್ನು ಬಿಜೆಪಿ ಹೈಕಮಾಂಡ್ ನೀಡಿದೆ. ಕರ್ನಾಟಕದಲ್ಲೂ ಪ್ರಬಲ ಲಿಂಗಾಯತ-ವೀರಶೈವ ಸಮುದಾಯಕ್ಕೆ ಬೊಮ್ಮಾಯಿ ಮುಖ ತೋರಿಸುವ ಕೆಲಸ ಮಾಡಿದೆ. “ಮುದುಕರ ಕಾಲ ಮುಗಿಯಿತು” ಎಂಬ ಸಂದೇಶವನ್ನು ಯುವ ಮತದಾರರಿಗೆ ರವಾನಿಸುವ ಯತ್ನಕ್ಕೂ ಬಿಜೆಪಿ ಕೈ ಹಾಕಿರುವಂತಿದೆ. ಯಾರಿಗೆ ಯಾರುಂಟು ಯರವಿನ ಸಂಸಾರ ಮುದಿಗೂಬೆಗಳನ್ನು ನೋಡಿ ನೋಡಿ ಸಾಕಾಗಿದೆ ಎನ್ನುವುದು ಭಾರತದ ಪ್ರಚಲಿತ…

ಸೆ.೮ಕ್ಕೆ ಕೊಟ್ಟಿಗೆಹಾರದಲ್ಲಿ ತೇಜಸ್ವಿ ಸಾಹಿತ್ಯ ವಿಚಾರ ಮಂಥನ

ಚಿಕ್ಕಮಗಳೂರು. ಸೆ, ೫: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ ೮ ರಂದು ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ ೧೧;೩೦ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ”ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ” ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ…

ಬಿಎಸ್‌ವೈ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಬೊಮ್ಮಾಯಿ

ಬೆಂಗಳೂರು, ಸೆ.೫:ಬರುವ ಏಳರಂದು ಮುಖ್ಯಮಂತ್ರಿ ಬಸವಾರಾಜ್ ಬೊಮ್ಮಾಯಿ ದಹೆಲಿಗೆ ತೆರಳಿ ಮುಖಂಡರನ್ನು ಭೇಟಿ ಮಾಡುವ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದರು. ಈ ಬಾರಿ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಕೆಲವು ಪ್ರಮುಖ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ, ನಿಗಮ-ಮಂಡಳಿಗಳಿಗೆ ನೇಮಕಾತಿ,ಕೆಲವು ಸಚಿವರ ಖಾತೆ ಬದಲಾವಣೆಯಂತಹ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.…

ಸೆ.೬ರಿಂದ ಆರನೇ ತರಗತಿಯಿಂದ ೮ನೇ ತರಗತಿ ಶಾಲೆಗಳು ಆರಂಭ

ಬೆಂಗಳೂರು,ಆ,೩೦:ಕೊವಿಡ್ ದೃಢಪ್ರಮಾಣದರ ಶೇಕಡ ೨ಕ್ಕಿಂತ ಕಡಿಮೆ ಇರುವ ಎಲ್ಲ ತಾಲ್ಲೂಕುಗಳಲ್ಲೂ ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ೬ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ತೀರ್ಮಾನಗಳನ್ನು ಪ್ರಕಟಿಸಿದ ಕಂದಾಯ ಸಚಿವ ಆರ್. ಅಶೋಕ, ಪ್ರತಿ ತರಗತಿಯ ವಿದ್ಯಾರ್ಥಿಗಳನ್ನು ಎರಡು ಗುಂಪುಗಳಾಗಿ ವಿಭಜಿಸಿ, ದಿನ ಬಿಟ್ಟು ದಿನ ತರಗತಿ ನಡೆಸಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳನ್ನು ನಡೆಸಲಿದ್ದು, ಶನಿವಾರ…

ಕೊನೆಗೂ ಪ್ರವಾಸೋದ್ಯಮ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಆನಂದ್ ಸಿಂಗ್

ಬೆಂಗಳೂರು,ಆ.೨೪: ಖಾತೆ ವಿಚಾರಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ಸದ್ಯಕ್ಕೆ ಶಮನವಾಗಿದ್ದು, ಇಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಸಚಿವ ಆನಂದ್ ಸಿಂಗ್ ಅವರು ತಮ್ಮ ರಾಜೀನಾಮೆ ನಿರ್ಧಾರ ತಿಳಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದರು. ಸಿಂಗ್ ಜೊತೆಗೆ ರಾಜೂಗೌಡ ಕೂಡ ಬಂದಿದ್ದರು. ಸಿಎಂ ಬೊಮ್ಮಾಯಿ ಆನಂದ್ ಸಿಂಗ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುಡುಕಿನ ನಿರ್ಧಾರ ಕೈಗೊಳ್ಳಬೇಡಿ, ಇರುವ ಖಾತೆಯಲ್ಲೇ ಮುಂದುವರೆಯಿರಿ. ನಾಳೆ…

ಬಣ್ಣಿಸುವರಾರದನು? ಮಂಕುತಿಮ್ಮ

ಸಿದ್ಧಸೂಕ್ತಿ :       ಬಣ್ಣಿಸುವರಾರದನು? ಮಂಕುತಿಮ್ಮ. ಜಗದ ಉಗಮ ನೆಲೆ ಗತಿ ನಿಗೂಢ. ಬಗೆ ಬಗೆಯ  ರಚನೆಯನಾರು ಬಲ್ಲರು? ಕುಂಬಾರ ಗಡಿಗೆ ಮಾಡಿದ ತೆರದಿ ತಾಯಿ ಮಗುವ ರಚಿಪಳೇ? ಸಾವೇನು ಏಕೆ ರಹಸ್ಯ ಬಲ್ಲವರಾರು? ಉಂಡು ಮಿಕ್ಕಿದ ಎಂಜಲದ ಅಗುಳು ಯಾವ ಕಾಲುವೆಯಲಿ ಹರಿದು ಎಲ್ಲಿ ಸೇರುವುದೋ? ಯಾವುದಕ್ಕೆ ಆಹಾರವಾಗುವುದೋ? ಎಲ್ಲಿ ಮಣ್ಣಾಗುವುದೋ? ಅದರ ಸತ್ತ್ವ ಹೀರಿ ಯಾವುದು ಬೆಳೆಯುವುದೋ? ಆ ಬೆಳೆ ಯಾರಿಗೆ ಆಹಾರವಾಗುವುದೋ? ಅದರಿಂದ ಅವರಿಂದ ಯಾರ್ಯಾರಿಗೆ ಏನೇನಾಗುವುದೋ? ತಿಳಿದವರಾರು? ಹೇಳುವವರಾರು?…

ಕ್ರಿಕೆಟ್ ಕಾಶಿ ಲಾರ್ಡ್ಸ್ ಭಾರತಕ್ಕೆ ರೋಚಕ ಗೆಲುವು..!

Reported By : H.D Savita ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತವು1 51ರನ್ ಗಳ ಅಂತರದಲ್ಲಿ ರೋಚಕ ಗೆಲುವು ದಾಖಲಿಸಿದೆ. ಅಂತಿಮ ದಿನದಾಟದಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಗೆಲುವನ್ನು ಮತ್ತಷ್ಟು ಸ್ಮರಣಿಯವಾಗಿಸಿ ಕೊಂಡಿತು. ಈ ಮೂಲಕ 5ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತವು 1-0 ದಿಂದ ಮುನ್ನಡೆ ಪಡೆದಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯವಾಗಿತ್ತು.

ಸ್ವಾತಂತ್ರ್ಯೋತ್ಸವದಲ್ಲಿ ನಾಡಿನ ಜನತೆಗೆ ಬಂಬರ್ ಕೊಡುಗೆ ಘೋಷಿಸಿದ ಸಿಎಂ

ಬೆಂಗಳೂರು, ಆ. ೧೫: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮೊದಲ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡಿದರು. ಈ ವೇಳೆ ಹನ್ನೊಂದು ಹೊಸ ಯೋಜನೆಗಳನ್ನು ಸಿಎಂ…

ರಶ್ಮಿಕ ಮಂದಣ್ಣರ ಬಣ್ಣದ ಬದುಕಿನ ಮಾತು…!

ಭಾರತೀಯ ಚಿತ್ರರಂಗದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಲವು ವರ್ಷಗಳ ನಂತರ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್‌ಗಳ ಬಗ್ಗೆ ಹಂಚಿಕೊಂಡ ರಶ್ಮಿಕಾ ಟ್ರೋಲ್ ಪೇಜ್‌ಗಳನ್ನು ಎದುರಿಸಿದ್ದು ಹೇಗೆ ಎಂದು ರಿವೀಲ್ ಮಾಡಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ಗ್ರಾಫ್ ಎತ್ತರಕ್ಕೆ ಏರುತ್ತಿದೆ ಆದರೆ ಒಮ್ಮ ವೈಯಕ್ತಿಕ ಜೀವನದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಟ್ರೋಲ್‌ಗೆ ಗುರಿಯಾದರು. ಈ ಪರಿಸ್ಥಿತಿಯನ್ನು ಪೋಷಕರ ಜೊತೆ ಎದುರಿಸಿದ್ದ ರಶ್ಮಿಕಾ ಮಂದಣ್ಣ ಹೇಗೆ ನಿಭಾಯಿಸಿದ್ದರು ಎಂದು ಹೇಳಿಕೊಂಡಿದ್ದಾರೆ. ’ಪ್ರಾರಂಭದಲ್ಲಿ ಇದು ತುಂಬಾನೇ ಕಷ್ಟವಾಗಿತ್ತು.…

ಒಲಂಪಿಕ್ಸ್: ‘ಹಾಕಿ’ ವೀರರಿಗೆ ಕಂಚಿನ ಹಾರ..!

Reported By: H.D.Savita ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್​ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ಕುತೂಹಲದಿಂದ ಕೂಡಿದ್ದ ಕಾದಾಟದಲ್ಲಿ,  ಪಂದ್ಯ ಶುರುವಾದ ಕೆಲವೇ ಕ್ಷಣಗಳಲ್ಲಿ ಜರ್ಮನಿ…

ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಫೈನಲ್ ಗೆ ಪ್ರವೇಶ

Reported By: H.D.Savita ಟೋಕಿಯೋ: ಭಾರತದ ಜಾವಲಿನ್‌ ಪಟು ನೀರಜ್ ಚೋಪ್ರಾ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲೇ 86.55 ಮೀಟರ್‌ ಎಸೆಯುವ ಮೂಲಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನ ಜಾವಲಿನ್‌ನಲ್ಲಿ ಪದಕ ಗೆಲ್ಲಬಲ್ಲ ನೆಚ್ಚಿನ ಭಾರತೀಯ ಅಥ್ಲೀಟ್‌ಗಳಲ್ಲಿ ನೀರಜ್ ಚೋಪ್ರಾ ಕೂಡಾ ಒಬ್ಬರು ಎನಿಸಿದ್ದಾರೆ. ಫೈನಲ್ ಪಂದ್ಯ ಅಗಸ್ಟ್ 7ರಂದು ನಡೆಯಲಿದೆ. ಫೈನಲ್‌ಗೆ ಪ್ರವೇಶ ಪಡೆಯಲು 83.5 ಮೀಟರ್ ನಿಗದಿ ಮಾಡಲಾಗಿತ್ತು. ಎ ಹಾಗೂ ಬಿ ಗುಂಪಿನಲ್ಲಿ ಅಗ್ರ 12 ಜಾವಲಿನ್‌ ಪಟುಗಳು ಫೈನಲ್‌ಗೆ…

ಟೋಕಿಯೋ ಒಲಂಪಿಕ್ಸ್ : ಭಾರತದ ಯುವ ಬಾಕ್ಸರ್ ಗೆ ಕಂಚಿನ ಹಾರ

Reported By: H.D. Savita ಟೋಕಿಯೋ: ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ. ಮಹಿಳಾ ಬಾಕ್ಸಿಂಗ್‌ನ 69 ಕೆ.ಜಿ ವಿಭಾಗದ ಸೆಮಿಫೈನಲ್‌ನಲ್ಲಿ ಲವ್ಲಿನಾ, ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ 0-5ರಿಂದ ಸೋಲು ಅನುಭವಿಸಿದರು. ಆಗಲೇ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿರುವ ಲವ್ಲಿನಾ, ಚಿನ್ನದ ಪದಕ ಗುರಿಯನ್ನಿರಿಸಿದ್ದರು. ಆದರೆ ಅಂತಿಮ ನಾಲ್ಕರ ಘಟ್ಟದಲ್ಲಿ ಎಡವಿದ್ದರು.…