ಸೆ.೮ಕ್ಕೆ ಕೊಟ್ಟಿಗೆಹಾರದಲ್ಲಿ ತೇಜಸ್ವಿ ಸಾಹಿತ್ಯ ವಿಚಾರ ಮಂಥನ
ಚಿಕ್ಕಮಗಳೂರು. ಸೆ, ೫: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ ೮ ರಂದು ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ ೧೧;೩೦ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ”ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ” ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ…