ರಾಜಕೀಯ
ಸಿಎಂ ಸಿದ್ದರಾಮಯ್ಯನವರ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಆರ್.ಅಶೋಕ
ಬೆಂಗಳೂರು, ಏಪ್ರಿಲ್ 26-ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ…