ರಾಜಕೀಯ
ದೇವಗೌಡರ ೮೮ ನೇ ಜನ್ಮದಿನಕ್ಕೆ ಶುಭಕೋರಿದ ಗಣ್ಯರು
ಬೆಂಗಳೂರು,ಮೇ೧೮:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ೮೮ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಜನ್ಮದಿನದ ಅಂಗವಾಗಿ ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಅವರ ಕುಟುಂಬ ವರ್ಗ ಸರಳವಾಗಿ ಜನ್ಮದಿನವನ್ನು ಆಚರಿಸಿದರು. ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆಯೇ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭ ಹಾರೈಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹಾಗೂ ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ…