ರಾಜಕೀಯ
ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಿಂದಗಿ,( ಕೋಕಟನೂರು),ಅ,24:ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಭಾನುವಾರ ಸಿಂದಗಿ ಮತಕ್ಷೇತ್ರದ ಕೊಕಟನೂರು ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಣ್ಣೆ ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ. ದಾಸಶ್ರೇಷ್ಠರಾದ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು…