Browsing: ರಾಜ್ಯ

ರಾಜ್ಯ

ವಸತಿ ಯೋಜನೆಗಳ ಫಲಾನುಭವಿಗಳಿಗೆ ಶೀಘ್ರ ಹಂಚಿಕೆಗೆ ಹುಡ್ಕೋದಿಂದ ಸಾಲ ಪಡೆಯಲು ಸಿಎಂ ಸೂಚನೆ

ಬೆಂಗಳೂರು, ಸೆ,10-ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ…

ಅಕ್ರಮ ಆಸ್ತಿ ಸಂಪಾದನೆ ಆರೋಪ- ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಸೆ,10- ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರಿವ ಲೋಕಾಯುಕ್ತ ಇಂದು ರಾಜ್ಯದ 69 ಕಡೆ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ, ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸುತ್ತಿದ್ದು ಅಪಾರ ಹಣ,ಚ್ನಾಭರಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಬೀದರ್ ಜಿಲ್ಲೆಯ 24 ಕಡೆ, ಚಿಕ್ಕಮಗಳೂರು, ಹಾಸನ, ರಾಮನಗರ, ಉಡುಪಿ ಸೇರಿದಂತೆ ಒಟ್ಟು 69 ಕಡೆ ಈ ದಾಳಿ…

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ, ಲಿಂಗಾಯತ ಎಂದೇ ಬರೆಸಲು ಮಹಾಸಭಾ ಮನವಿ

ಬೆಂಗಳೂರು, ಸೆ.7- ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಹಿಂದಿನಿಂದಲೂ ಮಹಾಸಭಾ ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ. ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು…

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ

ವಿಜಯಪುರ,ಸೆ,06-ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ…

ಇಂದು ನಾಳೆ ನಡೆಯಬೇಕಿದ್ದ ಕೆಪಿಎಸ್ ಸಿ ಪರೀಕ್ಷೆ ರದ್ದು

ಬೆಂಗಳೂರು, ಸೆ,06-ಕೆಪಿಎಸ್ ಸಿ(ಕರ್ನಾಟಕ ಲೋಕಸೇವಾ ಆಯೋಗ)ವು ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಇಂದು ಮತ್ತು ನಾಳೆ ನಿಗಧಿ ಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದು ಪಡಿಸಿದೆ. ಆಯೋಗದ ಅಧಿಸೂಚನೆ ಸಂಖ್ಯೆ ಪಿಎಸ್ಸಿ 1 ಆರ್ಟಿಬಿ-4/2024 ದಿನಾಂಕ 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹುದ್ದೆಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ 231…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು, ಸೆ.05-“ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎನ್ನುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ…

ಬ್ಯಾಲೆಟ್ ಪೇಪರ್ ಬಳಕೆಗೆ ಮುಂದಾದ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು,ಸೆ.೫- ಬರುವ ಸ್ಥಳೀಯ ಚುನಾವಣೆಗಳಿಗೆ ಇವಿಎಂ ಯಂತ್ರ ಬದಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್ ಸರ್ಕಾರದ ಸಂಪುಟ ತಗೆದುಕೊಂಡಿರುವ ನಿರ್ಧಾರವನ್ನು ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ್ಲ ಎಕ್ಸ್ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿರುವ ಅವರು, ಇವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ ೨೦೨೩ರ ಚುನಾವಣೆಯಲ್ಲಿ ಆರಿಸಿ ಬಂದಿರುವ ೧೩೬ ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ…

ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು, ಸೆ. 4-ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.ನಂತರದ ಮಾತನಾಡಿದ ಅವರು ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ…

ಧರ್ಮಸ್ಥಳ ಪ್ರಕರಣ- ಎನ್ಐಎ ತನಿಖೆಗೆ ವಹಿಸಲು ಸ್ವಾಮೀಜಿಗಳ ಮನವಿ

ನವದೆಹಲಿ, ಸೆ,04- ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಕುರಿತು ಎನ್ಐಎ ತನಿಗೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸ್ಮಾಮೀಜೊಗಳ ನಿಯೋಗ ಮನವಿ ಮಾಡಿದೆ. ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಗೆ ಭೇಟಿ ನೀಡಿದ ವಚನಾನಂದ ಸ್ವಾಮೀಜಿಗಳ ನಿಯೋಗ ಧರ್ಮಸ್ಥಳ ಪ್ರಕರಣ ಕುರಿತು ಚರ್ಚೆ ನಡೆಸಿದರು. ಸ್ವಾಮೀಜಿಗಳಿಂದ ಅಮಿತ್ ಶಾ ಅವರು ಬುರುಡೆ ಪ್ರಕರಣ ಕುರಿತು ಮಾಹಿತಿ ಪಡೆದರು. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದು ತಿಳಿಸಿದರು. ಪ್ರಕರಣ…

ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ

ಬೆಂಗಳೂರು,ಆ,30–ಶ್ರೀಸಾಮಾನ್ಯನ ನುಡಿಗಟ್ಟಿನಲ್ಲ ಭಕ್ತಿ ಮತ್ತು ಭಗವಂತ‌ನ ಪಾರಮ್ಯವನ್ನು ಗೇಯತೆಯ ಧ್ವನಿಯಲ್ಲಿ ಸಾರಿದ್ದು ದಾಸಸಾಹಿತ್ಯದ ಹಿರಿಮೆಯಾಗಿದೆ. ಇಂತಹ ದಾಸಸಾಹಿತ್ಯದ 65 ಸಂಪುಟಗಳನ್ನು ತಮ್ಮ‌ ನೇತೃತ್ವದ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸಲಾಗುತ್ತಿದೆ. ಇವುಗಳ ಪೈಕಿ ಈಗಾಗಲೇ ಅರವತ್ತಕ್ಕೂ ಹೆಚ್ಚು ಸಂಪುಟಗಳು ಬಿಡುಗಡೆಗೆ ಸಿದ್ಧವಾಗಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಕಾಗಿನೆಲೆ ಮಹಾಸಂಸ್ಥಾನ ಪೀಠವು ಶನಿವಾರ ಇಲ್ಲಿನ ಕೇತೋಹಳ್ಳಿಯಲ್ಲಿ ಏರ್ಪಡಿಸಿದ್ದ, ಕನಕದಾಸ ಸಾಹಿತ್ಯದ ವೈಚಾರಿಕ ಅನುಸಂಧಾನದ ‘ತಲ್ಲಣಿಸದಿರು ಮನವೇ’ ವಿಚಾರ…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ

ಬೆಂಗಳೂರು, ಆ,30- ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಇಂದು ಮುಂದುವರೆದಿದೆ ಕಲ್ಯಾಣ ಕರ್ನಾಟಕದ ಕಲಬುರ್ಗಿ ಯಾದಗಿರಿ ಜಿಲ್ಲೆಗಳಲ್ಲೂ ಮಳೆ ಮುಂದುವರೆದಿದ್ದು ನದಿ ಪಾತ್ರ ಗ್ರಾಮಗಳಲ್ಲಿ ಜಮೀನಿಗೆ ನೀರು ನುಗ್ಗೆ ಭಾರಿ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿದೆ ಗೇರು ಸೊಪ್ಪು ಜಲಾಶಯದಿಂದ ಶರಾವತಿ ನದಿಗೆ ಹರಿಸಿದ್ದರಿಂದ ಹೊನ್ನಾವರದ ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿತ್ತು ನದಿ ಪಾತ್ರದ ಹೆರಂಗಡಿ ,ಸರಳಗಿ ,ಗುಂಡಬಾಳ ,ಬೇರೊಳ್ಳಿ ಸೇರಿ ಗ್ರಾಮಗಳ ಮನೆಗೆ ನೀರು ನುಂಗಿತ್ತು…

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು, ಆ. 30-“ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಡಿ. ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ…

ಮಹೇಶ್ ಶೆಟ್ಟಿ ತೀಮಿರೋಡಿ ಬಂಧನ

ಉಡುಪಿ,ಆ,21-ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು ಪೊಲೀಸ್ ಠಾಣೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ರಹ್ಮಾವರ ಠಾಣೆ ಬಳಿ ಜನ ಸೇರುವಂತಿಲ್ಲ.…

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು ಆ,21-ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು,…

ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಲು ಸೂಚನೆ: ಖಂಡ್ರೆ

ಬೆಂಗಳೂರು, ಆ.21- ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ…

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು, ಆ.21-ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು. ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ…

ಬಿಜೆಪಿಯಿಂದ ಧರ್ಮಯಾತ್ರೆ’ಗೆ ಚಾಲನೆ

ಬೆಂಗಳೂರು,ಆ21-: ಬಿಜೆಪಿ ಬ್ಯಾಟರಾಯನಪುರ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ ಅವರ ನೇತೃತ್ವದಲ್ಲಿ ಕೊಡಿಗೇಹಳ್ಳಿಯ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ ‘ಧರ್ಮಯಾತ್ರೆ’ ಅಭಿಯಾನಕ್ಕೆ ಇಂದು ಬೆಳಿಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚಾಲನೆ ನೀಡಿದರು. ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ವಾಹನಗಳೊಂದಿಗೆ ಅಭಿಯಾನವನ್ನು ಆರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಈ ಯಾತ್ರೆ ನಡೆಯುತ್ತಿದೆ. ಇಂದು ಸಂಜೆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ, 20 -ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ‌ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು ಒಳಮೀಸಲಾತಿ ಕುರಿತು ವಿಧಾನ‌ ಪರಿಷತ್‌ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು   ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ…

ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ- ಡಿಕೆಶಿ

ಬೆಂಗಳೂರು, ಆ.16-“ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ…

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ಬೆಂಗಳೂರು,ಆ,೧೬- ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ (೮೧) ವಿಧಿವಶರಾಗಿದ್ದಾರೆ. ಕೆಲವು ದಿನಗಳ ಹಿಂದೆ ತಮ್ಮ ಹೇಳಿಕೆಗಳಿಂದಲೇ ಸ್ವಾಮೀಜಿ ಸುದ್ದಿ ಮಾಡಿದ್ದರು. ಈ ಹೇಳಿಕೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ತಡರಾತ್ರಿ ವಿಧಿವಶರಾದರು. ಬೆಂಗಳೂರಿನ ಕೆಂಗೇರಿಯಲ್ಲಿ ಮಠವನ್ನು ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಕ ಕ್ಷೇತ್ರಕ್ಕೆ ಸ್ವಾಮೀಜಿ ಅಪಾರ ಕೊಡುಗೆಯನ್ನು ನೀಡಿದ್ದರು. ಶ್ರೀ ಚಂದ್ರಶೇಖರನಾಥ…

error: Content is protected !!