Browsing: ಜಿಲ್ಲೆ

ಜಿಲ್ಲೆ

ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ

ಬೆಂಗಳೂರು,ಆ,30–ಶ್ರೀಸಾಮಾನ್ಯನ ನುಡಿಗಟ್ಟಿನಲ್ಲ ಭಕ್ತಿ ಮತ್ತು ಭಗವಂತ‌ನ ಪಾರಮ್ಯವನ್ನು ಗೇಯತೆಯ ಧ್ವನಿಯಲ್ಲಿ ಸಾರಿದ್ದು ದಾಸಸಾಹಿತ್ಯದ ಹಿರಿಮೆಯಾಗಿದೆ. ಇಂತಹ ದಾಸಸಾಹಿತ್ಯದ 65 ಸಂಪುಟಗಳನ್ನು ತಮ್ಮ‌ ನೇತೃತ್ವದ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸಲಾಗುತ್ತಿದೆ. ಇವುಗಳ ಪೈಕಿ ಈಗಾಗಲೇ ಅರವತ್ತಕ್ಕೂ ಹೆಚ್ಚು ಸಂಪುಟಗಳು ಬಿಡುಗಡೆಗೆ ಸಿದ್ಧವಾಗಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಕಾಗಿನೆಲೆ ಮಹಾಸಂಸ್ಥಾನ ಪೀಠವು ಶನಿವಾರ ಇಲ್ಲಿನ ಕೇತೋಹಳ್ಳಿಯಲ್ಲಿ ಏರ್ಪಡಿಸಿದ್ದ, ಕನಕದಾಸ ಸಾಹಿತ್ಯದ ವೈಚಾರಿಕ ಅನುಸಂಧಾನದ ‘ತಲ್ಲಣಿಸದಿರು ಮನವೇ’ ವಿಚಾರ…

ಹುಚ್ಚವ್ವನಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

*ವರದಿ :-ಆಂಜನೇಯ ನಾಯಕನಹಟ್ಟಿ ಜಗಳೂರು,ಆ,-ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು‌‌ ಶೀಘ್ರ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿಮಕ್ಕಳು ಶಾಲೆಯ ಮುಂಭಾಗದಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಿದರು. ಹುಚ್ಚನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2013 ರಿಂದಲೂ ಮೂರು ಶಿಕ್ಷಕರು ಮಾತ್ರ ಇದ್ದು. ಸದರಿ ದಿನಾಂಕದ ಶಾಲಾ ಹಾಜರಾತಿಯ ಪ್ರಕಾರ 65 ಮಕ್ಕಳಿದ್ದು ಒಂದರಿಂದ ಎಂಟನೇ ತರಗತಿವರೆಗೆ ತರಗತಿಗಳು ಇರುತ್ತವೆ ಈ ತರಗತಿಗಳಲ್ಲಿ ಕೇವಲ ಮೂರು…

ಆ.11ರಂದು ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಉದ್ಘಾಟನೆ

ಶಿವಮೊಗ್ಗ,ಆ,11-ನೂತನವಾಗಿ ನಿರ್ಮಿಸಿರುವ ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಳಸರೋಹಣ ಅಷ್ಟ ಬಂಧನ ಮಹಾ ಕುಂಭ ಅಭಿಷೇಕ ಮಹೋತ್ಸವ ಆಗಸ್ಟ್ 13 ರಂದು ನೆರವೇರಲಿದೆ. ಅಂದು ಬೆಳಗ್ಗೆ ಪೂಜೆ ಆರಂಭಗೊಂಡು ದಿ. 14 ಗುರುವಾರ ಬೆಳಿಗ್ಗೆ 9:00 ರಿಂದ 10.30 ರವರೆಗೆ ನಡೆಯುವ ನೂತನ ದೇವಸ್ಥಾನ ಪ್ರವೇಶ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಅಷ್ಟ ಬಂಧನ ಮತ್ತು ಮಾಹಾ ಕುಂಭಾಭಿಷೇಕ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದೆ.  ಅಭಿಷೇಕವನ್ನು…

ನಾಯಕನಹಟ್ಟಿ; ಸ್ಥಳೀಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಲು ಒತ್ತಾಯ

ವರದಿ :- ಅಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ ,ಆ,05-ಹೊರರಾಜ್ಯದ ವ್ಯಾಪಾರಸ್ಥರ ಬದಲಾಗಿ ಸ್ಥಳೀಯ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ಅವರಿಗೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಪಟ್ಟಣದ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ (ಶೆಟ್ಟಿಬಣ), ಕರ್ನಾಟಕ ರಕ್ಷಣ ವೇದಿಕೆ ಕನ್ನಡ ಸೇನೆ ಹಾಗೂ ಕರುನಾಡ ನವ ನಿರ್ಮಾಣ ವೇದಿಕೆ ನಾಯಕನಹಟ್ಟಿ ವರ್ತಕರ ಸಂಘದಿಂದ ಮಂಗಳವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್‌ರವರಿಗೆ ಮನವಿ ಸಲ್ಲಿಸಿದರು. ನಾಯಕನಹಟ್ಟಿ ಪಟ್ಟಣದಲ್ಲಿ ವಿವಿಧ…

ಬೆಂಗಳೂರು ನಗರ ವಿಶ್ವವಿದ್ಯಾನಿಲಯ; *ಕಣ್ಮನ ಸೂರೆಗೊಂಡ ವಿನ್ಯಾಸ ವೈಭವ-2 ಫ್ಯಾಷನ್ ಶೋ

ಬೆಂಗಳೂರು,ಆ,-04-  ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಫ್ಯಾಷನ್ ಮತ್ತು ಉಡುಪು ವಿನ್ಯಾಸ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ “ವಿನ್ಯಾಸ ವೈಭವ-2” ಫ್ಯಾಷನ್ ಶೋ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡು ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಒಟ್ಟು 12 ತಂಡಗಳ 64 ವಿದ್ಯಾರ್ಥಿಗಳು ವಿವಿಧ ಪರಿಕಲ್ಪನೆಗಳನ್ನು ಆಧರಿಸಿದ ವರ್ಣರಂಜಿತ ಉಡುಪು ವಿನ್ಯಾಸ ಪ್ರದರ್ಶಿಸುತ್ತಾ ಆಕರ್ಷಕ ಹಾವಭಾವಗಳ ಬಿಂಕದ ನಡಿಗೆಯ ಮೂಲಕ ಸಭಿಕರನ್ನು ಬೆರಗುಗೊಳಿಸಿದರು. ಝಗಮಗಿಸುವ ಬೆಳಕಿನ ಚಿತ್ತಾರಗಳ ಹಿನ್ನೆಲೆಯ ವೇದಿಕೆಯ ಮೇಲೆ ಸಾಂಪ್ರದಾಯಿಕ…

ಬೆಂಗಳೂರು ವಿ.ವಿ.ಯಲ್ಲಿ ಆತ್ಮೀಯ ಬಿಳ್ಕೊಡಿಗೆ ಸಮಾರಂಭ

ಬೆಂಗಳೂರು ,ಆ,02- ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಸ್.ಹರಿಪ್ರಸಾದ್ ಹಾಗೂ ಆಡಳಿತ ವಿಭಾಗದ ಅಧೀಕ್ಷಕರಾದ ಟಿ.ಪದ್ಮಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ ಅಭಿನಂದಿಸಲಾಯಿತು. ಸೆಂಟ್ರಲ್ ಕಾಲೇಜಿನ ಸರ್ ಸಿ.ವಿ.ರಾಮನ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪ್ರಭಾರ ಕುಲಪತಿಗಳಾದ ಪ್ರೊ. ಕೆ.ಆರ್.ಜಲಜಾ, ನೂತನ ಕುಲಸಚಿವರಾದ ನವೀನ್ ಜೋಸೆಫ್, ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ಹಾಗೂ ವಿತ್ತಾಧಿಕಾರಿಗಳಾದ ಎಂ.ವಿ. ವಿಜಯಲಕ್ಷ್ಮಿ ಉಭಯತ್ರರನ್ನು ಸನ್ಮಾನಿಸಿ ಅಭಿನಂದಿಸಿದರು. ವಿಶ್ವವಿದ್ಯಾನಿಲಯದ ಪ್ರಗತಿಯ ಹಾದಿಯಲ್ಲಿ ಇದರಿಬ್ಬರ ಅತ್ಯಮೂಲ್ಯ ಕೊಡುಗೆಯನ್ನು ಕೃತಜ್ಞತೆಯಿಂದ…

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

ಬೆಂಗಳೂರು, ಆ, 2-ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕರೆ ನೀಡಿದರು. ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಅಂದರೆ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ. ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ,…

ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಚಿವ ರಾಮಲಿಂಗಾರೆಡ್ಡಿ ಸಲಹೆ

ಬೆಂಗಳೂರು,ಜು,20-ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ   ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ದೇಹದಲ್ಲಿ ಸಮಸ್ಯೆ ಇರಲಿ ಅಥವಾ ಇಲ್ಲದಿರಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ…

ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ತುಮಕೂರು,ಜು,೦೬-ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಬಿ ಆರ್.ನಾಗರಾಜಪ್ಪ(೫೮) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಹೊಟೇಲ್‌ನಲ್ಲ ಜರುಗಿದೆ, ಜುಲೈ ೧ರಂದು ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದರು. ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹೋಟೆಲ್ ಕೋಣೆಯಿಂದ ವಾಸನೆ ಹೆಚ್ಚಿದ್ದು, ಸಿಬ್ಬಂದಿ ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಠಡಿಯಲ್ಲಿ ಡೆತ್‌ನೋಟ್ ಸಿಕ್ಕಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು…

ವೃತ್ತಿ ಧರ್ಮ ನೆಲಕಚ್ಚಿದರೆ ರಾಜ ಧರ್ಮವನ್ನು ಟೀಕಿಸುವ ಅರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ತುಮಕೂರು ಜು 6-ಮಾಧ್ಯಮ ಕ್ಷೇತ್ರ ವೃತ್ತಿ ಧರ್ಮ ಪಾಲಿಸದಿದ್ದರೆ, ರಾಜ ಧರ್ಮ ಪಾಲಿಸಿ ಎಂದು ಅಧಿಕಾರಸ್ಥರಿಗೆ ಹೇಳುವ ನೈತಿಕ ಸ್ಥೈರ್ಯವನ್ನು ಕಳೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆತಂಕ ವ್ಯಕ್ತಪಡಿಸಿದರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಾರ್ಷಿಕ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಮಾತನಾಡಿದರು. ನಾವು ಇಂದು ಪತ್ರಿಕಾ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಭ್ರಮದ ಬದಲಿಗೆ ಒಂದು ರೀತಿಯ ಅಳುಕು ಕಾಡುತ್ತಿದೆ. “ವೃತ್ತಿ ಧರ್ಮ” ಎನ್ನುವುದು…

ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ: ಡಿ.ಕೆ. ಶಿ

ಬೆಂಗಳೂರು, ಜೂ.27-“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.…

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ-ಸಿಎಂ ಸಿದ್ದರಾಮಯ್ಯ

ಬೆಂಗಳೂರು ,ಜೂ,27-ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ…

ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ- ಅದ್ದೂರಿ ಸ್ಮರಣೆ ಸಂಪನ್ಮ

ಬೆಂಗಳೂರು,ಜೂ,27- ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ,…

ದಾಸೋಹ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ- ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಚಿತ್ರದುರ್ಗ, ಜೂ,26-ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾ *ಪ್ರಕಟಣೆ ಕೃಪೆಗಾಗಿ* ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ…

ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ವೀರಶೈವ ಲಿಂಗಾಯತರ ಕೊಡುಗೆ ಅಪಾರ:ಖಂಡ್ರೆ

ಬೆಂಗಳೂರು, ಜೂ.22- ಆಧುನಿಕ ಕರ್ನಾಟಕ, ಆ ಮೂಲಕ ಆಧುನಿಕ ಭಾರತ ನಿರ್ಮಾಣಕ್ಕೆ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾದ್ದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ವೀರಶೈವ ಲಿಂಗಾಯಿತ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಜಾತಿ, ಧರ್ಮದವರಿಗೂ ಆಶ್ರಯ, ಅನ್ನ, ಅಕ್ಷರದ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಮುಖ್ಯವಾಹಿನಿಗೆ ತಂದ ಕೀರ್ತಿ ವೀರಶೈವ ಲಿಂಗಾಯತ ಮಠ ಮಾನ್ಯಗಳಿಗೆ ಸಲ್ಲುತ್ತದೆ…

ಐಪಿಎಲ್‌ಸಂಭ್ರಮಾಚರಣೆದುರಂತ-ಮ್ಯಾಜಿಸ್ಟೀರಯಲ್ ತನಿಖೆ ಆರಂಭ

ಬೆಂಗಳೂರು,ಜೂ,೦೫-೧೮ ವರ್ಷಗಳ ನಂತರ ಐಪಿಲ್ ಟ್ರೋಪಿ ಎತಿಹಿಡಿದ ರಾಯಲ್ ಚಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕಾಲ್ತುಳಿತ ಸಂಭವಿಸಿ ಹನ್ನೊಂದುಜನಸಾವಿಗೆ ಕಾರಣವಾದ ಪ್ರಕರಣೀಗ ಸರ್ಕಾರ ಮ್ಯಾಜಿಸ್ಟೀರಿಯಲ್‌ತನಿಖೆಗೆಆದೇಶಿಸಿದೆ. ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು(ಖಅಃ) ಮತ್ತು ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ…

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.01-“ಬೆಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳ ಕೊಡುಗೆಯೇ ಹೆಚ್ಚು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ 1 ಲಕ್ಷ ಕೋಟಿ ಮೊತ್ತದ ದೊಡ್ಡ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಕಳೆದ 20 ವರ್ಷಗಳಲ್ಲಿ ಬೆಂಗಳೂರು ಜನತೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ…

ಸಂವಿಧಾನ ಕಾರ್ಯಾಗಾರದಲ್ಲಿ ನರೇನಹಳ್ಳಿ ಅರುಣ್ ಕುಮಾರ್ ಗೆ ಸನ್ಮಾನ

ಚಿತ್ರದುರ್ಗ, ಜೂ,01-ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,ಸಮಾಜ ಕಲ್ಯಾಣ ಇಲಾಖವತಿಯಿಂದ ಭಾಯಾಗಡ್,ಸೂರಗೊಂಡನಕೊಪ್ಪದಲ್ಲಿ ಹಮ್ಮಿಕೊಳ್ಳಲಾಗಿದ್ದ.ಕೌಶಲ್ಯ ತರಬೇತಿ ಮತ್ತು ಸಂವಿಧಾನ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಸಂತ ಸೇವಾಲಾಲ್ ಜನ್ಮ ಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್ ಕುಮಾರ್ ರವರಿಗೆ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾದ ಇ.ವೆಂಕಟಯ್ಯ ನವರು,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್.ಜಯದೇವ ನಾಯಕ್,ಮಠದ ಧರ್ಮದರ್ಶಿ ಪರಿಷತ್ ಅಧ್ಯಕ್ಷರಾದ ಬಿ.ಹೀರಾನಾಯಕ್,ಭೋಜ್ಯಾನಾಯ್ಕ,ಮಹಾಮಠ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಹನುಮಂತನಾಯ್ಕ,ಹಿರಿಯ ನಿರ್ದೇಶಕರಾದ ರಾಘವೇಂದ್ರ ನಾಯ್ಕ,ನಿಗಮದ ವ್ಯವಸ್ಥಾಪಕ…

ಕನ್ಮಡ ವಿರೋಧಿ ಹೇಳಿಕೆ ನೀಡಿದ ನಟ ಕಮಲ ಹಾಸನ್ ವಿರುದ್ಧ ಪ್ರತಿಭಟನೆ

ಶಿವಮೊಗ್ಗ, ಮೇ,30-ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ ಪ್ರತಿಭಟನೆ ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಪ್ರತಭಟನೆ ನಡೆಸಲಾಯಿತು. ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್ಎಸ್ ಅವರ ನೇತೃತ್ವದಲ್ಲಿ ನಡೆಸ ಈ ಪ್ರತಿಭಟನೆ  ವೇಳೆ ಕಮಲಹಾಸನ್ ರವರ ಫೋಟೋವನ್ನು ಸುಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಮಾತನಾಡಿ…

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು ಮೇ 30-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು…

1 2 3 17
error: Content is protected !!