ಜಿಲ್ಲೆ
ನಾಗಮಂಗಲದ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ: ಕ್ರೆಡಿಟ್ ತಗೊಂಡಿದ್ದು ಬೇರೆ ಯಾರೋ: ಸಿಎಂ
ಮಂಡ್ಯ (ನಾಗಮಂಗಲ) ಏ 22-ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ.…



















