Browsing: ಬೆಂಗಳೂರು

ಬೆಂಗಳೂರು

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ:ಬಿ.ಸಿ.ಪಾಟೀಲ್

ಬೆಂಗಳೂರು,ಮೇ.16 :ಹಿರೇಕರೂರು ಮತಕ್ಷೇತ್ರದಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ. ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ. ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ…

ಬಸವಣ್ಣನಿಗೆ ವಚನಜ್ಯೋತಿ ಬಳಗದ ವಿಶಿಷ್ಟ ನಮನ

ಬೆಂಗಳೂರು,ಮೇ,16:ವಚನಜ್ಯೋತಿ ಬಳಗ ಬಸವ ಜಯಂತಿಯನ್ನು ವಚನ ಗಾನಾಭಿಷೇಕದ ಮೂಲಕ ವಿಶಿಷ್ಟವಾಗಿ ಆಚರಿಸಿತು. ಗೂಗಲಮೀಟಿನಲ್ಲಿ ನಡೆದ ಗಾನಾಭಿಷೇಕವನ್ನು ಹಿಂದೂಸ್ಥಾನಿ ಸಂಗೀತದ ಹಿರಿಯ ವಿದ್ವಾಂಸರಾದ ಪಂ. ದೇವೇಂದ್ರಕುಮಾರ ಪತ್ತಾರ್ ಅಲ್ಲಮಪ್ರಭುಗಳ ಬಸವ ಸ್ತುತಿಯೊಂದಿಗೆ ಉದ್ಘಾಟಿಸಿದರು. ನೇತೃತ್ವ ವಹಿಸಿದ್ದ ಬಳಗದ ಮಹಾಪೋಷಕಿ 86 ವರ್ಷದ ಪಾರ್ವತಮ್ಮ ಶಿವಲಿಂಗಯ್ಯ ಪಂಡಿತರು ಅತ್ಯಂತ ಉತ್ಸಾಹದಿಂದ ಅಣ್ಣನ ವಚನ “ತನುವ ಕೊಟ್ಟು ತನು ಬಯಲಾಯಿತ್ತು” ಹಾಡಿ ಗಾನಾಭಿಷೇಕಕ್ಕೆ ಮೆರುಗು ಕೊಟ್ಟರು. ಗೋಕಾಕದ ವಿದ್ಯಾಮಗ್ದಂ, ವಿಜಯಪುರ ಚಡಚಣದ ವಿದ್ಯಾ ಕಲ್ಯಾಣಶೆಟ್ಟಿ, ಚಿಕ್ಕನಾಯಕನಹಳ್ಳಿ ಹುಳಿಯಾರಿನ ಕವಿತಾ, ಮೈಸೂರಿನ…

ಅಮೂಲಾಗ್ರ ಸುಧಾರಣೆಗೆ ಕ್ರಮ;ಅಶ್ವತ್ಥ ನಾರಾಯಣ

ಬೆಂಗಳೂರು,ಮೇ,15: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನರಿರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್‌ ಕಾರ್ಯಪಡೆಯು ತಜ್ಞರರದಿ ಪಡೆಯಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ…

೨ನೇ ಕಂತಿನ ಆಮ್ಲಜನಕ ಹೊತ್ತು ತಂದ ಎಕ್ಸ್ ಪ್ರೆಸ್ ರೈಲು

ಬೆಂಗಳೂರು, ಮೇ,೧೫: ಕೋವಿಡ್-೧೯ ಚಿಕಿತ್ಸೆಗಾಗಿ ಆಕ್ಸಿಜನ್ ಕೊರತೆ ಮುಂದುವರೆದಿದ್ದು ಕೇಂದ್ರ ಸರ್ಕಾರ ೨ನೆ ಬಾರಿ ರಾಜ್ಯಕ್ಕೆ ಆಕ್ಸಿಜನ್ ರವಾನೆ ಮಾಡಿದೆ. ೧೨೦ ಮೆಟ್ರಿಕ್ ಟನ್ ಆಕ್ಸಿಜನ್ ಶನಿವಾರ ಬೆಳಿಗ್ಗೆ ಎಕ್ಸ್ ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತಲುಪಿತು. ಕಳಿಂಗ ನಗರದಿಂದ ಬೇಂಗಳೂರಿಗೆ ಬೆಳಗಿನ ಜಾವ೩.೨೦ಕ್ಕೆ ತಲುಪಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ತಲಾ ೨೦ ಟನ್ ಆಕ್ಸಿಜನ್ ಸಾಮರ್ಥ್ಯದ ಒಟ್ಟು ಆರು ಕಂಟೇನರ್ ಗಳಲ್ಲಿ ಸುಮಾರು ೧೨೦ ಮೆಟ್ರಿಕ್ ಟನ್ ನಷ್ಟು ತೂಕದ ಆಮ್ಲಜನಕ ಹೊತ್ತು…

ಶುಕ್ರವಾರ ಕೋವಿಡ್‌ನಿಂದ ೩೫,೮೭೯ ಮಂದಿ ಮುಕ್ತ

ಬೆಂಗಳೂರು,ಮೇ,೧೪:ಕಳೆದ ೨೪ ಗಂಟೆಯಲ್ಲಿ ೩೫,೮೭೯ ಜನಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಕೋವಿಡ್ ವರದಿಯಲ್ಲಿ ತಿಳಿಸಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆ ಈ ವರದಿಯನ್ನು ನೀಡಿದ್ದು,ಶುಕ್ರವಾರದ ಅಂಕಿ ಅಂಶದ ಪ್ರಕಾರ, ರಾಜ್ಯದಲ್ಲಿ ಈವರೆಗೆ ಒಟ್ಟು ೧೫,೧೦,೫೫೭ ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ೪೧,೭೭೯ ಹೊಸ ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ ೫,೯೮,೬೦೫ ಸಕ್ರಿಯ ಪ್ರಕರಣಗಳಿವೆ. ಅಲ್ಲದೆ, ಶುಕ್ರವಾರ ಒಟ್ಟು ೩೭೩ ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್-೧೯: ದೇಶದಾದ್ಯಂತ…

ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಕೋವಿಡ್ ಗೆ ಬಲಿ

ಬೆಂಗಳೂರು, ಮೇ,14: ಹಿರಿಯ ಪತ್ರಕರ್ತ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಕಾರ್ಯದರ್ಶಿ ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ್ ಕೋವಿಡ್ ಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ತಗುಲಿದ ಕಾರಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ. 65 ವರ್ಷದ ಮಹಾದೇವ್ ಪ್ರಕಾಶ್ 1975 ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮ ಆರಂಭಿಸಿದ್ದ ಅವರು ನಂತರ ತಮ್ಮದೆ ಸಂಪಾದಕತ್ವದ ‘ಈ ಭಾನುವಾರ ‘ಪತ್ರಿಕೆ ತರುತ್ತಿದ್ದರು ಅಲ್ಲದೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ…

ಬಿಪಿಎಲ್ ಕಾರ್ಡ್‌ದಾರರಿಗೆ ೫ ರಿಂದ ೧೦ಕೆಜಿ ಅಕ್ಕಿ ವಿತರಣೆ

ಬೆಂಗಳೂರು,ಮೇ,೧೪:ಲಾಕ್‌ಡೌನ್‌ಸಮಯದಲ್ಲಿ ಉಚಿತ ಅಹಾರ ಕಿಟ್ ಹಾಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬಹುದು ಎಂದು ನಿರೀಕ್ಷೆಯಲ್ಲಿ ರಾಜ್ಯದ ಜನರಿಗೆ ಬದಲಾಗಿ ಬಿಪಿಎಲ್ ಕಾರ್ಡ್‌ದಾರರಿಗೆ ವಿತಿರಿಸುವ ಅಕ್ಕಿಯನ್ನು ೫ ರಿಂದ ೧೦ ಕೇಜಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ, ಜೂನ್ ತಿಂಗಳಿಗೆ ಉಚಿತವಾಗಿ ೧೦ ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ೧೫ರಂತೆ ೧೦ ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ…

ಬಸವ ಪತ್ಥಳಿಗೆ ಸಿಎಂ ಮಾಲಾರ್ಪಣೆ

ಬೆಂಗಳೂರು, ಮೇ 14 : ಬಸವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ,ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ, ಬಸವ ಸಮಿತಿ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಉಪಸ್ಥಿತರಿದ್ದರು.

ಚಾಮರಾಜನಗರದಲ್ಲಿ ಸಾವನ್ನಪ್ಪಿದವರು 24 ಅಲ್ಲ 36

ಬೆಂಗಳೂರು,ಮೇ,13: ಚಾಮರಾಜನಗರ ಆಸ್ಪತರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು24 ಮಂದಿಯಲ್ಲ 36 ಮಂದಿ ಎಂದು ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ. ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ…

ನ್ಯಾಯಾಧೀಶರು ಸರ್ವಜ್ಞರಲ್ಲ- ಸಿ.ಟಿ.ರವಿ

ಬೆಂಗಳೂರು,ಮೇ,13: ಲಸಿಕೆ ನೋಡಿಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಹೈಕೋರ್ಟ್ ತರಾಟೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಮತ್ತು ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.Υ ಗುರುವಾರ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ತಜ್ಞರ ಸಮಿತಿ ನೀಡುವ ವರದಿಯನ್ನು ಆಧರಿಸಿಯೇ ಕೆಲಸ ಮಾಡುತ್ತದೆ ಕೇಂದ್ರ ಸರ್ಕಾರ ಹೇಳಿದೆ. ಇದನ್ನ ಸುಪ್ರೀಂಕೋರ್ಟ್ ಕೂಡ ಒಪ್ಪಿದೆ ಎಂದು ತಿಳಿಸಿದರು…

ಆಕ್ಸಿಜನ್ ಟ್ಯಾಂಕರ್ ಖರೀದಿ;ನಿರಾಣಿ ಕಾರ್ಯಕ್ಕೆ ಕಟೀಲು ಮೆಚ್ಚುಗೆ

ಬೆಂಗಳೂರು,ಮೇ,13: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ…

ಚಾಮರಾಜನಗರದಲ್ಲಿ ೨೪ ಮಂದಿ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ

ಬೆಂಗಳೂರು,ಮೇ೧೩: ಚಾಮರಾಜ ನಗರದಲ್ಲಿ ಮೇ ೨ ರ ರಾತ್ರಿ ೨೪ ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ನೀಡಿದೆ. ಮೇ ೨ ರ ಮಧ್ಯೆ ರಾತ್ರಿ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ೨೪ ಮಂದಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದರು ಆದರೆ ಅದು ಆಮ್ಲಜನಕದ ಕೊರತೆಯಿಮದಲ್ಲ ಕೇವಲ ೪ ಮಂದಿ ಮಾತ್ರ ಆಮ್ಲಜನಕ ಕೊರತೆಯಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು. ಇದು ಹಲವಾರು ವಿವಾದಕ್ಕೆ ಕಾರಣವಾಗಿತ್ತು…

ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ

ಪತ್ರಿಕಾ ಪ್ರಕಟಣೆ ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ ಬೆಂಗಳೂರು, 10: ಕೋವಿಡ್-19 2ನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವುದು ಹೆಚ್ಚಾಗುತ್ತಿದ್ದು, ಈ ಸಂಧರ್ಭದಲ್ಲಿ ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ಈ ಕಾರ್ಯ ನಿರ್ವಹಿಸಲು ಆಸಕ್ತ ಸ್ವಯಂ ಸೇವಕರನ್ನು ಅಹ್ವಾನಿಸಲಾಗಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು(Individuals) ನೋಂದಾಯಿಸಿಕೊಳ್ಳಲು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವಂತೆ ನಿರ್ದೇಶಕರು ಕೋರಿದ್ದಾರೆ.

ಟಫ್ ಲಾಕ್ಡೌನ್ : ಹೊರಬಂದವರಿಗೆ ಲಾಠಿ ರುಚಿ, ವಾಹನ ಸೀಜ್ !

ಬೆಂಗಳೂರು, 10: ಇಂದಿನಿಂದ ಮೇ 24ರವರೆಗೆ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಮೊದಲ ದಿನವಾದ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ ಲಾಠಿ ಏಟು ಬೀಸಿದ್ದಾರೆ. ಜತೆಗೆ ವಾಹನಗಳನ್ನು ವಶಪಡಿಸಿಕೊಂಡು ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನಗತ್ಯ ಸಂಚಾರ ನಡೆಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಗದಗ, ಬಾಗಲಕೋಟೆ, ಕೋಲಾರ,…

ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,10; ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು. ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂಗೆ ಪತ್ರ ಬರೆದು…

ಇಂದಿನಿಂದ 18-44 ವಯೋಮಾನದವರಿಗೆ ಕೋವಿಡ್ ಲಸಿಕೆ

ಬೆಂಗಳೂರು, ಮೇ 10; ಇಂದಿನಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ…

1 6 7 8
error: Content is protected !!