Browsing: ರಾಷ್ಟ್ರೀಯ

ರಾಷ್ಟ್ರೀಯ

ದೊಡ್ಡಸವಾಲಾಗಿರುವ ಬ್ಲ್ಯಾಕ್ ಫಂಗಸ್ ನಿರ್ವಹಣೆಗೆ ಸಜ್ಜಾಗಲು ಮೋದಿ ಕರೆ

ಕೊರೊನಾ ನಮ್ಮಿಂದ ಹಲವರನ್ನು ಕಿತ್ತುಕೊಂಡಿದೆ; ಭಾವುಕರಾದ ಮೋದಿ ನವದೆಹಲಿ, ಮೇ ೨೧:ಕೊರೊನಾ ಎರಡನೇ ಅಲೆ ನಮಗೆ ಅತೀ ದೊಡ್ಡ ಸವಾಲನ್ನೇ ಒಡ್ಡಿದೆ ಅಲ್ಲದೆ ಇದೇ ವೇಳೆ ಕೊರೊನಾ ರೋಗಿಗಳಲ್ಲಿ ಕಾನಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಮತ್ತೊಂದು ಸವಾಲನ್ನು ಹೊಡ್ಡಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾಧ ವ್ಯಕ್ತಪಡಿಸಿದರು. ಕೊರೊನಾ ನಿರ್ವಹಣೆ ಸಂಬಂಧ ಶುಕ್ರವಾರ ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಆರೋಗ್ಯ ಕಾರ್ಯಕರ್ತರು, ವೈದ್ಯರೊಂದಿಗೆ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಕೊರೊನಾ ನಿರ್ವಹಣೆಯಲ್ಲಿ…

ಮಹಾರಾಷ್ಟ್ರದ ಎಟಪಲ್ಲಿ ಅರಣ್ಯದಲ್ಲಿ 13 ನಕ್ಸಲರ ಹತ್ಯೆ

ಭುವನೇಶ್ವರ,ಮೇ,21:ಕಮಂಡೊ ಪೊಲೀಸರಿಗೂ ನಕ್ಸಲರ ಮಧ್ಯ ನಡೆದ ಗುಂಡಿನ ದಾಳಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಈ ಘಟನೆ ಜರುಗಿದೆ. ಗಗಡ್ಚಿರೋಲಿ ಅರಣ್ಯ ಪ್ರದೇಶದ ಎಟಪಲ್ಲಿ ಎಂಬಲ್ಲಿ ಸಿ-60 ಕಮಾಂಡೊ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ 13 ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಗಡ್ಚೊಲಿ ಜಿಲ್ಲೆಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯಿ

ತಿರುವನಂತಪುರಂ, ಮೇ 20: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಪಕ್ಷ ಭರ್ಜರಿ ಗೆಲುವು ಸಾಧಿಸಿದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ರಚನೆ ಆಗಿದ್ದು ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಕೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಪಿಣರಾಯಿ ವಿಜಯನ್ ಪ್ರಮಾಣವಚನ ಕಾರ್ಯಕ್ರಮದಲ್ಲಿ 500 ಮಂದಿ ಭಾಗವಹಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಿಎಂ ಜೊತೆಗೆ 20 ಶಾಸಕರು ರಾಜ್ಯ ಸಂಪುಟ ಸಚಿವರಾಗಿ ಪದಗ್ರಹಣ ಮಾಡಿದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮಾರ್ಗಸೂಚಿ ಹಿನ್ನೆಲೆ ನಿಗದಿತ ಪ್ರಮಾಣದ ಸದಸ್ಯರಿಗೆ ಮಾತ್ರ ಪ್ರಮಾಣವಚನ…

ಮೇ೨೩ ರಿಂದ ಇನ್ನಷ್ಟು ತೀವ್ರವಾಗಲಿದೆ ತೌತೆ ಚಂಡಮಾರುತ

ಬೆಂಗಳೂರು ,ಮೇ, ೨೦: ತೌತೆ ಚಂಡಮಾರುತದ ಪರಿಣಾಮ ಇನ್ನೂ ನಿಂತಿಲ್ಲ ಮತ್ತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ. ಯಾಸ್ ಚಂಡಮಾರುತ ಮೇ ೨೩ ರಿಂದ ಅಬ್ಬರಿಸಲಿದ್ದು ನಾಳೆಯಿಂದ ಮೇ ೨೬ ರವರೆಗೆ ಭಾರೀ ಮಳೆಯಾಗುವ ಸಾದ್ಯಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಶ್ಚಿಮ ಬಂಗಾಳ,ಒರಿಸ್ಸಾಮ ತಮಿಳುನಾಡು,ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತ ಆರ್ಭಟವಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇ ೨೩ರಿಂದ ೨೬ರವರೆಗೆ ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಮೇ ೨೩ರಂದು ಈ ಚಂಡಮಾರುತ…

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ,ಮೇ:ಕೇದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ತೆರೆಮರೆ ಪ್ರಯತ್ನ ನಡೆಸುತ್ತಲೆ ಇದೆ ಈಗ ಇದಕ್ಕೆ ಪೂರಕವಾಗಿ ವಕೀಲರೊಬ್ಬರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ಸರ್ಕಾರವು ನಡೆಸಿದ ‘ಹತ್ಯಾಕಾಂಡ’ದಲ್ಲಿ ಬಿಜೆಪಿಯ 16 ಕಾರ್ಯಕರ್ತರು ಅಸುನೀಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮೇ 2ರ ನಂತರ ನಡೆದಿರುವ ಬಿಜೆಪಿ ಬೆಂಬಲಿಗರ ಹತ್ಯೆಗಳ ಕುರಿತ ತನಿಖೆ ನಡೆಸಲು ವಿಶೇಷ ತನಿಖಾ…

ಗುಜರಾತ್‌ಗೆ ೧ಸಾವಿರ ಕೋಟಿ ಪರಿಹಾರ ಘೋಷಿಸಿದ ಮೋದಿ

ಅಹಮದಬಾದ್,ಮೇ,೧೯:ಗುಜರಾತ್‌ನಲ್ಲಿ ತೌತೆ ಚಂಡಮಾರುತದ ಅಬ್ಬರದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಡೆಸಿದರು. ಈ ವೇಳೆ ಅವರು ರಾಜ್ಯದಲ್ಲಿ ತಕ್ಷಣದ ಪರಿಹಾರ ಕ್ರಮಗಳಿಗಾಗಿ ೧,೦೦೦ ಕೋಟಿ ರೂ ಘೋಷಿಸಿದ್ದಾರೆ. ಇದರ ಜೊತೆಗೆ ಅವರು ಚಂಡ ಮಾರುತದಿಂದ ಪ್ರಾಣಕಳೆದುಕೊಂಡವ ಸಂತ್ರಸ್ತ ಕುಟುಂಬಗಳಿಗೆ ೨ ಲಕ್ಷ, ಗಾಯಗೊಂಡವರಿಗೆ ೫೦ ಸಾವಿರ ಪರಿಹಾರ ಹಣ ಘೋಷಿಸಿದ್ದಾರೆ. ಗುಜರಾತ್ ಮತ್ತು ಡಿಯುನಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಪ್ರಧಾನಿ ಭೇಟಿ ನೀಡಿದರು. ಈ ವೇಳೆ ಅವರು…

ನಾರದ ವರ್ಗಾವಣೆ ಪ್ರಕರಣ; ಮಮತಾ ಬ್ಯಾನರ್ಜಿಯನ್ನು ಪ್ರತಿವಾದಿ ಮಾಡಿದ ಸಿಬಿಐ

ಕೋಲ್ಕತಾ,ಮೇ೧೯: ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಪಶ್ಚಿಮ ಬಂಗಾಳದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲಾಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಆಕ್ಟಿಂಗ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನೇತೃತ್ವದ ವಿಭಾಗೀಯ ಪೀಠವು ಬುಧವಾರ ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಲು ನಿರ್ಧರಿಸಿದೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್…

ತೌತೆ ಚಂಡಮಾರುತಕ್ಕೆ ಮಹಾರಾಷ್ಟ್ರ,ಗುಜರಾತ್‌ನಲ್ಲಿ ೩೩ ಸಾವು

ನವದೆಹಲಿ,ಮೇ,೧೯: ಕಳೆದ ಎರಡು ದಿನಗಳಿಂದ ತೌತೆ ಚಂಡ ಮಾರುತದ ಅಬ್ಬರ ಹೆಚ್ಚಾಗಿದ್ದು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರಿ ಅನಾಹುತ ಸೃಷ್ಟಿಸಿದ್ದು ಎರಡು ರಾಜ್ಯಗಳಲ್ಲಿ ಒಟು ೩೩ ಮಂದಿ ಸಾವನ್ನಪ್ಪಿದ್ದಾರೆ ೧೦೦ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ, ಸೋಮವಾರ ಬೆಳಗಿನಿಂದಲೂ ಆರಂಭವಾಗಿದ್ದು ಈ ಚಂಡಮಾರುತದ ತೀವ್ರತೆ ಈ ಎರಡು ರಾಜ್ಯಗಳ ಕಡಲ ತೀರದಲ್ಲಿ ದೈತ್ಯ ಅಲೆಗಳಿಗೆ ಕೆಲವು ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿವೆ. ಮಂಗಳವಾರ, ಮಹಾರಾಷ್ಟ್ರ ಕರಾವಳಿಯಲ್ಲಿ ಚಂಡಮಾರುತದ ಪರಿಣಾಮ ಗಾಳಿಗೆ ಎದ್ದ ಸಮುದ್ರದ ದೈತ್ಯ ಅಲೆಗಳು ಗೇಟ್‌ವೇ ಆಫ್ ಇಂಡಿಯಾ,…

ಕೇರಳ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ, ಶೈಲಜಾಗೆ ಕೊಕ್

ತಿರುವನಂತಪುರಂ,ಮೇ,೧೮: ಕೋವಿಡ್ ಹರಿಡಿದ್ದ ಸಂದರ್ಭದಲ್ಲಿ ಕೇರಳದಲ್ಲಿ ಅದನ್ನು ಸಮರ್ಥವಾಗಿ ನಿಭಾಯಿಸಿ ಎಲ್ಲರ ಪ್ರಶಂಸೆಗೆ ಒಳಗಾಗಿದ್ದ ಆಗಿನ ಆರೋಗ್ಯ ಸಚಿವರಾಗಿದ್ದ ಕೆ.ಕೆ.ಶೈಲಜಾ ಅವರನ್ನು ಪಿಣಿರಾಯ್ ಅವರ ಸಚಿವ ಸಂಪುಟದಿಂದ ಹೊರಗುಳಿದಿದ್ದಾರೆ. ಬಹುತೇಕ ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಸಿಪಿಐ(ಎಂ)ನ ರಾಜ್ಯ ಸಮಿತಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಎಂ.ಬಿ.ರಾಜೇಶ್ ಕೇರಳ ಸರಕಾರದ ನೂತನ ಸ್ಪೀಕರ್ ಆಗಿದ್ದು, ಕೆ.ಕೆ.ಶೈಲಜಾ ಅವರು ಪಕ್ಷದ ಪ್ರಮುಖ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಸಿಪಿಐಎಂ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಮಂತ್ರಿ ಪಿಣರಾಯಿ…

ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಹೆಚ್ಚಿಸಲು ಮೋದಿ ಸಲಹೆ

ನವದೆಹಲಿ,೧೮:sಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಹೊಸ ವಿಧಾನ ಅನುಸರಿಸುವಮೂಲಕ ದೊಡ್ಡಪ್ರಮಾಣದಲ್ಲಿ ಲಸಿಕೆ ಪೂರೈಕೆಯನ್ನು ಹೆಚ್ಚಿಸಲು ನಿರಂತರ ಪ್ರಯತ್ನ ಪಡಬೇಕುಎಂದು ಪ್ರಧಾನ ಮೋದಿ ಅವರು ಎಲ್ಲ ರಾಜ್ಯಗಳ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ೯ ರಾಜ್ಯಗಳ ೪೬ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ, ಕೋವಿಡ್-೧೯ ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು ’ಫೀಲ್ಡ್ ಕಮಾಂಡರ್ಸ್’ ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ…

ಎರಡನೇ ಅಲೆಗೆ ೨೬೯ ವೈದ್ಯರು ಬಲಿ!

ನವದೆಹಲಿ, ಮೇ ೧೮:ಕೊರೊನಾ ಮಹಾಮಾರಿ ಬಂದಾಗಿನಿಂದಲೂ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದಾರೆ,ತಮ್ಮ ಬದುಕನ್ನು ಲೆಕ್ಕಿಸದೆ ಸೇವೆಯಲ್ಲಿಯೇ ನಿರತರಾಗಿದ್ದಾರೆ ಆದರೆ .ಇದರಿಂದ ಸಾವಿರಾರು ವೈದ್ಯರು ಬಲಿಯಾಗಿದ್ದಾರೆ ಎರಡನೇ ಅಲೆಯಲ್ಲಿ೨೬೯ ವೈದ್ಯರು ಸಾವನ್ನಪ್ಪಿದ್ದಾರೆ. ಭಾರತೀಯ ವೈದ್ಯಕೀಯ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಮೊದಲ ಅಲೆ ಗೆ ೭೪೮ ಮಂದಿ ವೈದ್ಯರು ಸಾವನ್ನಪ್ಪಿದ್ದೆ ಎರಡನೇ ಅಲೆಗೆ ೨೬೯ ವೈದ್ಯರು ಸಾವನ್ನಪ್ಪಿದ್ದಾರೆ. ಎರಡನೇ ಅಲೆ ಎರಡು ತಿಂಗಳಲ್ಲೇ ೨೬೯ ಮಂದಿ ತುತ್ತಾಗಿದ್ದಾರೆ. ಅದರಲ್ಲಿ ಬಿಹಾರ್, ಉತ್ತರ ಪ್ರದೇಶ, ದೆಹಲಿ ರಾಜ್ಯಗಳಲ್ಲಿ ವೈದ್ಯರು…

ಭಾರತದಲ್ಲಿ ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ,ಮೇ,೧೮: ಕೋವಿಡ್-೧೯ ಸೋಂಕಿಗೆ ಭಾರತ ಸಮರೋಪಾದಿಯಲ್ಲಿ ಸೌಕರ್ಯ ಮತ್ತು ಜಾಗೃತಿ ವಹಿಸುತ್ತಿರುವ ಕಾರಣ ಮಂಗಳವಾರ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಬೆಳಿಗ್ಗೆ ೯ ಗಂಟೆಗೆ ಮುಕ್ತಾಯವಾದ ೨೪ ಗಂಟೆಗಳ ಅವಧಿಯಲ್ಲಿ ಒಟ್ಟು೨,೬೩,೫೩೩ ಮಂದಿಯಲ್ಲಿ ಸೋಂಕು ದೃಡಪಟ್ಟಿದ್ದು ಇದು ಕಳೆದ ೨೮ ಗಂಟೆಯಲ್ಲಿ ಕನಿಷ್ಠ ಪ್ರಮಾಣವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಲವು ದಿನಗಳಿಂದ ೪ ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ ೩ ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, ೨ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು…

೨-ಡಿಜಿ ಔಷಧ ಅಧಿಕೃತ ಬಿಡುಗಡೆ

ನವದೆಹಲಿ,ಮೇ೧೭: ಕೊರೊನಾಗೆ ದೇಶಿ ಔಷಧ ೨-ಡಿಆಕ್ಸಿ-ಡಿ-ಗ್ಲುಕೋಸ್(೨-ಡಿಜಿ) ಹೆಸರಿನ ಪೌಡರ್ ಅನ್ನು ಇಂದು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಬಿಡುಗಡೆಗೊಳಿಸಿದರು.ಹೈದರಾಬಾದಿನ ಡಾ.ರೆಡ್ಡೀಸ್ ಲ್ಯಾಬ್ ಸಹಯೋಗದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಈ ಔಷಧವನ್ನು ಅಭಿವೃದ್ಧಿಪಡಿಸಿತ್ತು ಕಳೆದ ವಾರದ ಹಿಂದೆಯಷ್ಟೆ ಇದಕ್ಕೆ ಅನುಮೋದನೆ ನೀಡಲಾಗಿತ್ತು ಸೋಮವಾರ ೧೦ ಸಾವಿರಕ್ಕೂ ಹೆಚ್ಚು ಡೋಸ್ ಔಷಧವನ್ನು ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ವಿತರಣೆ ಮಾಡಲಾಗಿದೆ. ಇದು ಜೆನರಿಕ್ ಔಷಧವಾದ ಕಾರಣ ಸಾಕಷ್ಟು ಪ್ರಮಾಣದಲ್ಲಿ ಉತ್ಪಾದಿಸಬಹುದು.…

ಗುಜರಾತ್ ತೀರದಲ್ಲಿ ಆರ್ಭಟಿಸಲಿದೆ ‘ತೌಕ್ತೆ’

ನವದೆಹಲಿ, ಮೇ,17:ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕ, ಕೇರಳ ಮತ್ತು ಗೋವಾದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ತೌಕ್ತೆ ಚಂಡಮಾರುತ, ಮತ್ತಷ್ಟು ಶರವೇಗದಿಂದ ಇಂದು ಸಂಜೆ ಗುಜರಾತ್‌ ಕರಾವಳಿಗೆ ಅಪ್ಪಳಿಸಲಿದೆ ಎಂದು IMD ತಿಳಿಸಿದೆ. ಮೇ ೧೮ ರಂದು ಗುಜರಾತಿನ ಪೋರ್ ಬಂದರು ಮತ್ತು ಮಹುವಾಂನ್ ಬಂದರುಗಳಿಗೆ ಅಪ್ಪಳಿಸಲಿದ್ದು, ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ಈಗಾಗಲೇ ಸ್ಥಳದಲ್ಲಿ NDRFನ 50 ತಂಡವು ಮೊಕ್ಕಾಮ ಹೂಡಿದ್ದು, ಜನರು ಆತಂಕಕ್ಕೆ ಒಳಗಾಗದಂತೆ ಧೈರ್ಯ ತುಂಬುವ ಕಾರ್ಯದಲ್ಲಿ…

24 ಗಂಟೆಯಲ್ಲಿ 3,11,170 ಕೊರೊನಾ ಪ್ರಕರಣಗಳು ದಾಖಲು

ನವದೆಹಲಿ,ಮೇ,16: ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ದೇಶಾದ್ಯಂತ ಹೆಚ್ಚುತ್ತಲೇ ಇದ್ದು ಕಳೆದ 24ಗಂಟೆಯಲ್ಲಿ 3,11,170 ಪ್ರಕರಣಗಳನ್ನು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2.46 ಕೋಟಿಗೆ ತಲಪಿದೆ ಈ ವೇಳೆ 4,077 ಸಾವುಗಳು ವರದಿಯಾಗಿವೆ. ಮೇ 16 ರ ಭಾನುವಾರ ಬೆಳಿಗ್ಗೆ 6 ರಿಂದ ಮೇ 30 ರವರೆಗೆ ಸಂಜೆ 6 ರಿಂದ ಪಶ್ಚಿಮ ಬಂಗಾಳ ಸರ್ಕಾರವು ಹದಿನೈದು ದಿನಗಳವರೆಗೆ ರಾಜ್ಯದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಇಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದ್ದು ಪ್ರತಿ ರಾತ್ರಿ 9 ರಿಂದ…

ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್,ಡೀಸೆಲ್ ಬೆಲೆ

ನವದೆಹಲಿ, ಮೇ,16:ತೈಲಬೆಲೆ ಏರಿಕೆ ಇಂದೂ ಕೂಡ ಮುಂದುವರೆದಿದೆ ಐದು ರಾಜ್ಯಗಳ ಚುನಾವಣೆ ನಂತರ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಾಣುತ್ತಿದೆ,ಇಂದು ಭಾನುವಾರವೂ ಕೂಡ ಗರಿಷ್ಠ ಮಟ್ಟ ತಲುಪಿದೆ. ಪ್ರಾತಿನಿಧಿಕಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 22 ರಿಂದ 24 ಪೈಸೆ ಏರಿಕೆಯಾಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 27 ರಿಂದ 29 ಪೈಸೆ ಹೆಚ್ಚಳವಾಗಿದೆ. ಕಳೆದ ಶುಕ್ರವಾರ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯಾಗಿತ್ತು. ನಿನ್ನೆ ಶನಿವಾರ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಇರಲಿಲ್ಲ. ಬೆಲೆ…

175ವೇಗದಲ್ಲಿ ಅಪ್ಪಳಿಸಲಿದೆ ತೌಕ್ಟೆ ಚಂಡಮಾರುತ

ನವದೆಹಲಿ,ಮೇ,15: ಅರಬ್ಬಿಸಮುದ್ರದಲ್ಲಿವಾಯುಭಾರ ಕುಸಿತದಿಂದ ಗುಜರಾತ್ ಗೆ ತೌಕ್ಟೆ ಚಡ್ಡಮಾರುತ ಅಪ್ಪಳಿಸಲಿದ್ದು ಕಡಲತೀರವನ್ನು ದಾಟಿಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆಯಿಂದಲೇ ತೌಕ್ಟೆ ಚಂಡಮಾರುತ ತೀವ್ರಗೊಳ್ಳಲಿದ್ದು ಇದೇ 16-19ವರೆಗೂ ಪ್ರತಿ ಗಂಟೆಗೆ160ರಿಂದ ಆರಂಭವಾಗಿ 175 ಕಿ.ವೇಗದಲ್ಲಿ ಚಂಡಮಾರುತ ಸಂಚರಿಸಲಿದೆ. ಮೇ.15 ರಂದು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಮೇ.15 ರಂದು ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಇನ್ನು…

ದೇಶದಲ್ಲಿ ಕೊರೊನಾ ಸೋಂಕಿತರ ದಾಖಲಾರ್ಹ ಏರಿಕೆ

ನವದೆಹಲಿ, ಮೇ,14: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 3,43,144 ಹೊಸ ಪ್ರಕರಣಗಳು ದಾಖಲಾಗಿವೆ. ಈ ವೇಳೆ ಕೊರೊನಾಗೆ ನಾಲ್ಕು ಸಾವಿರ ಜನ ಬಲಿಯಾಗಿದ್ದಾರೆ.ದೇಶದಲ್ಲಿ ಸೋಂಕಿತರ ಸಂಖ್ಯೆ ದಾಖಲೆಮಟ್ಟದಲ್ಲಿ ಏರಿಕೆಯಾಗುತ್ತಿದೆ ಈ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893 ಕ್ಕೆ ಏರಿಕೆಯಾಗಿದೆ. ಹೀಗಾಗಿ ದೇಶದಲ್ಲಿ ‌ಒಂದೇ ದಿನ 18,75,515 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ,31,13,24,100 ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು,…

ಲಾಕ್ ಡೌನ್ ಹಿನ್ನೆಲೆ; ದೆಹಲಿಯಲ್ಲಿ ಕೊರೊನಾ ಪ್ರಕರಣ ಇಳಿಕೆ

ನವದೆಹಲಿ,ಮೇ,14: ದೇಶದ ರಾಜದಾನಿ ನವದೇಹಲಿಯಲ್ಲಿ ಈಗ ಕೊರೊನಾ ಪ್ರಮಾಣ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿಂದ ಆತಂಕ ಮೂಡಿಸಿದ್ದಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದ್ವಿತೀಯ ಅಲೆಯು, ರಾಷ್ಟ್ರ ಕೊರೊನಾ ಸೋಂಕು ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡಿದೆ. ಲಾಕ್‌ಡೌನ್‌ ನಾಲ್ಕನೇ ವಾರ ಮುಂದುವರಿದ ಪರಿಣಾಮ ಸೋಂಕಿತರ ಶೇಕಡಾವಾರು ಪ್ರಮಾಣ ಇದೇ ಮೊದಲ ಬಾರಿಗೆ ಶೇ 15ಕ್ಕಿಂತ ಕಡಿಮೆ ದಾಖಲಾಗಿದೆ. ಸತತ 6 ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾದವರ ಸಂಖ್ಯೆ ಹೆಚ್ಚುತ್ತ ಸಾಗಿರುವುದು ಸಾರ್ವಜನಿಕರ ಆತಂಕವನ್ನು ಕೊಂಚ ಮಟ್ಟಿಗೆ ಕಡಿಮೆ…

ಅತೀ ಹೆಚ್ಚು ಕೋವಿಡ್ ದಾಖಲಾಗಿರುವ ದೇಶದ ಜಿಲ್ಲೆಗಳ ಡಿಸಿಗಳೊಂದಿಗೆ ಮೋದಿ ಸಂವಾದ

ನವದೆಹಲಿ,ಮೇ,14:ದಿನೇ ದಿನೇ ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ದಾಖಲಾಗಿರುವ ದೇಶದದೇಶಾದ್ಯಂತ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಆಡಳಿತಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸುತ್ತಿದ್ದಾರೆ ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿ ಭಾಗಿಯಾಗಲಿದ್ದಾರೆ ಹಾಗೂ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎರಡನೇ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಆಯಾ ರಾಜ್ಯದ…

1 5 6 7 8
error: Content is protected !!