Browsing: ಸುದ್ದಿ

ಸುದ್ದಿ

ಬಿಬಿಎಂಪಿ ಕಸದ ಲಾರಿಯಲ್ಲಿ ದೊರೆತಿದ್ದ ಶವ ಹೆಸರು ಪತ್ತೆ,ಗಂಡನೆ ಕೊಲೆ ಶಂಕೆ!

ಬೆಂಗಳೂರು,ಜೂ. ೨೯-ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಸದ ಲಾರಿಯಲ್ಲಿ ಬಿಸಾಡಿದ್ದ ಮಹಿಳೆಶವ ಈಗ ಗುರುತು ಸಿಕ್ಕಿದ್ದು ಆಕೆಯ ಹೆಸರು ಪುಷ್ಪ ಎಂದು ಗೊತ್ತಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಈಕೆಯನ್ನು ಮದುವೆಯಾಗಿದ್ದು ಪತಿಯೇ ಈಕೆಯನ್ನು ಕೊಲೆಮಾಡಿ ಇಲ್ಲಿ ಬಿಸಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನಗರದಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಅನಾಮಿಕ ಮಹಿಳೆಯ ಶವ ಕೇಸ್‌ಗೆ ಟ್ವಿಸ್ಟ್‌ಗೆ ಸಿಕ್ಕಿದೆ. ಕೊಲೆಯಾದ ಮಹಿಳೆ…

ಮಾಜಿ ಡಿಜಿಪಿ ಓ ಪ್ರಕಾಶ್ ಹತ್ಯೆ ಪ್ರಕರಣ- ಕೌಟಂಬಿಕ ಕಲಹವೇ ಕಾರಣ

ಬೆಂಗಳೂರು, ಮೇ,25-ಮಾಜಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಸಿಸಿಬಿ ತನಿಖೆಯಲ್ಲಿ ತಿಳಿಸಿದ್ದಾರೆ. ಗಂಡನ ಮೇಲೆ ಪತ್ನಿ ಪಲ್ಲವಿ ವಿಪರೀತ ಕೋಪ ಹೊಂದಿದ್ದರು. ಮಗಳಿಗೆ ಮದುವೆ ಮಾಡ್ತಿಲ್ಲ ಅಂತಾ ಕೋಪಗೊಂಡಿದ್ದರಂತೆ. ಅಲ್ಲದೇ ಅಷ್ಟು ದೊಡ್ಡ ಮನೆಯಲ್ಲಿದ್ರೂ ಪಲ್ಲವಿ ಕೈಯಲ್ಲಿ ಹಣ ಕೊಡ್ತಿರಲಿಲ್ಲ.. ಹಣದ ವ್ಯವಹಾರ ಎಲ್ಲಾ ತಾನೇ ನೋಡಿಕೊಳ್ತಿದ್ದರಂತೆ. ಅಲ್ಲದೇ ತನ್ನ ಸ್ವಂತ ಕುಟುಂಬಕ್ಕಿಂತಲೂ ತಂಗಿ ಕುಟುಂಬಕ್ಕೆ ಓಂಪ್ರಕಾಶ್ ಹೆಚ್ಚು ಒತ್ತು ಕೊಡ್ತಿದ್ದರಂತೆ. ಹೀಗಾಗಿ…

ಬಾಲಕಿ ಮೇಲೆ ಅತ್ಯಾಚಾರ ಆರೋಪ ;ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ,ಮೇ,೨೪-ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಯಭಾಗ ತಲ್ಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಬಾಲಕಿಗೆ ೧೭ ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ…

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ.ಸಲೀಂ ನೇಮಕ

ಬೆಂಗಳೂರು, ಮೇ, 21- ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಉತ್ತರ ಕಾಶಿಯಲ್ಲಿ ಹೆಲಿಕಾಪ್ಟರ್ ಪತನ ಐವರು ಯಾತ್ರಿಕರು ಸಾವು

ಉತ್ತರ ಕಾಶಿ,ಮೇ,08- ಯಾತ್ರಿಕರನ್ನು ಕರೆದೊಯ್ಯುತ್ತುದ್ದ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉತ್ತರಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಮುನೋತ್ರಿಯಿಂದ ಗಂಗೋತ್ರಿಗೆ ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- 8 ಮಂದಿ ಬಂಧನ

ಮಂಗಳೂರು, ಮೇ,03-ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು. ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ ಎಂದರು.…

ಸುಹಾಸ್ ಶೆಟ್ಟಿ ಹತ್ಯೆಪ್ರಕರಣ-ಐವರು ಆರೋಪಿಗಳು ಪೊಲೀಸರ ವಶ

ಮಂಗಳೂರು,ಮೇ,೦೩-ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುಹಾಸ್ ಶೆಟ್ಟಿ ಕೊಲೆ ಮಾಡಿದ್ದ ಆರೋಪಿಗಳು ಸ್ವಿಪ್ಟ್ ಕಾರಿನಲ್ಲಿ ಪರಾರಿಯಾಗಿದ್ದರು. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಹತ್ಯೆಗೆ ಬಳಸಿದ್ದ ಆಯುಧಗಳನ್ನು ಕಾರಿನಲ್ಲಿಯೇ ಬಿಸಾಡಿ ಹೋಗಿದ್ದರು. ಕೊಲೆ ಬಳಿಕ ಆರೋಪಿಗಳು ಮಂಗಳೂರಿನಲ್ಲಿಯೇ ಅವಿತು ಕುಳಿತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆಗಾಗಲೇ ಆರೋಪಿಗಳನ್ನು ಗುರುತಿಸಿ ಪೊಲೀಸರು…

ರೌಡಿಶೀಟರ್ ,ಹಿಂದೂಕಾರ್ಯಕರ್ತ ಸುಹಾಸ್ ಹತ್ಯೆಹಿನ್ನೆಲೆ ಬೂದಿಮುಚ್ಚಿದ ಕೆಂಡದಂತಿರುವ ಮಂಗಳೂರು

ಮಂಗಳೂರು,ಮೇ,02-ರೌಡಿಶೀಟರ್ ಸುಹಾಸ್ ಹತ್ಯೆ ಈಗ ಮಂಗಳೂರಿನಲ್ಲಿ ಮತ್ತೊಂದು ಆಯಾಮ ಪಡೆದುಕೊಂಡಿದ್ದು ಹಿಂದು ಸಂಘಟನೆ ಮತ್ತು ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಹತ್ಯೆಯಾದ ಸುಹಾಸ್ ಶೆಟ್ಟಿ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಕೂಡ ಈತನ ಪರ ಈಗ ವಕಾಲತ್ತು ವಹಿಸುವ ಮೂಲಕ ಮತ್ತೊಂದು ಸಂಘರ್ಷಕ್ಕೆ ನಿಂತಂತಾಗಿದೆ. ಸುಹಾಸ್ ಶೆಟ್ಟಿಯನ್ನುಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ…

ಚಾಲಕನ ನಿಯಂತ್ತಣ ತಪ್ಪಿ ಇನ್ನೋವ ಕಾರು ಪಲ್ಟಿ:ಮೂವರ ಸಾವು

ಚಿತ್ರದುರ್ಗ,ಮೇ,01-:ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ಗುರುವಾರ ಬೆಳಗ್ಗೆ ರಸ್ತೆ ವಿಭಜಕಕ್ಕೆ ಇನೋವ ಕಾರು ಡಿಕ್ಕಿಯಾಗಿ ಮೂವರು ಮೃಪತಟ್ಟಿದ್ದು, ನಾಲ್ವರು ಮಂದಿ ಗಾಯಗೊಂಡಿದ್ದಾರೆ ಮಿಳುನಾಡು ಮೂಲದ ಅರ್ಜುನ್ (೨೮), ಶರವಣ (೩೧), ಸೇಂಥಿಲ್ (೨೯) ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಓರ್ವ, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಲ್ಲಿ ಅರ್ಜುನ್ ಎಂಬ ವ್ಯಕ್ತಿಯು ತಮೀಳುನಾಡಿನ ಚನ್ನೆöÊನಲ್ಲಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್,…

ಲಂಚ ಪಡೆಯುವ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ದಾಳಿ

ಬೆಂಗಳೂರು ಏ.24 -ಪಾನ್ ಮಸಾಲ ಅಕ್ರಮ ಸಾಗಣಿಗೆ ಅನುಕೂಲ ಮಾಡಿಕೊಡಲು 20 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಸಂಜೆ ನಾಗರಭಾವಿ ನಮ್ಮೀರ ತಿಂಡಿ ಹೊಟೇಲ್ ಹತ್ತಿರ ಆರೋಪಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್. ಅವರು ಖಾಸಗಿ ವ್ಯಕ್ತಿಯಾದ ಮನೋಜ್ ಎಂ ಎಂಬುವವರ ಕಡೆಯಿಂದ 20 ಲಕ್ಷ ರೂ. ಲಂಚದ ಹಣವನ್ನು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ…

ಕರ್ನಾಟಕ ನಿವೃತ್ತ ಡಿಜಿಪಿ ಓಂ  ಪ್ರಕಾಶ್ ಹತ್ಯೆ

ಬೆಂಗಳೂರು,ಏ.೨೦-ಆಸ್ತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಚ್ ಎಸ್ ಆರ್ ಲೇಔಟ್‌ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಕೇಡರ್ ೧೯೮೧ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು ೨೦೧೫ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು…

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕರೈ ಮೇಲೆ ಗುಂಡಿನ ದಾಳಿ

ಬೆಂಗಳೂರು,ಏ,೧೯-ಬೆಂಗಳೂರಿನಲ್ಲಿ ಇನ್ನೂ ನಟೋರಿಯಸ್‌ಗಳ ನಡುವಿನ ಜಿದ್ದು ನಿಂತಂತೆ ಕಾಣುತ್ತಿಲ್ಲ, ಮಾಜಿ ಅಂಡರ್‌ವರ್ಲ್ಡ್ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಯುವ ಮೂಲಕ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇಂದು ಬೆಳಗಿನಜಾವ ೧-೩೦ರ ಸುಮಾರಿನಲ್ಲಿ ರಾಮನಗರ ಜಿಲ್ಲೆ ಬಿಡದಿಯ ಸಮೀಪ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡದಿದೆ. ಮುತ್ತಪ್ಪೆರೈ ಪುತ್ರ ರಿಕ್ಕಿ ರೈ ಕಾರಿನಲ್ಲಿ ಬರುವ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಆತನ ಮೇಲೆ ಮೂರು ಸುತ್ತಿನ ಗುಂಡು…

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ by-ಕೆಂಧೂಳಿ ಬೆಂಗಳೂರು, ಏ,04-ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಮಡಿಕೇರಿ ಬಿಜೆಪಿ ಕಾರ್ಯಕರ್ತ ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಬೆಂಗಳೂರಿನ ನಾಗಾವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…

ಗುಂಡು ಹಾರಿಸಿ ಕುಂಟುಂಬದ ಮೂವರ ಕೊಲೆ-ತಾನೂ ಆತ್ಮಹತ್ಯೆ

ಗುಂಡು ಹಾರಿಸಿ ಕುಂಟುಂಬದ ಮೂವರ ಕೊಲೆ-ತಾನೂ ಆತ್ಮಹತ್ಯೆ by-ಕೆಂಧೂಳಿ ಬಾಳೆಹೊನ್ನೂರು,ಏ,೦೨- ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿದೆ. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(೫೦), ಮಗಳು ಮೌಲ್ಯ(೬) ಮತ್ತೆ ನಾದಿನಿ ಸಿಂಧು(೨೪) ಗುಂಡು ತಗುಲಿ ಮೃತಪಟ್ಟಿದ್ದಾರೆ. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

ಇತಿಹಾಸದಲ್ಲೇ ದೊಡ್ಡ ಡ್ರಗ್ಸ್ ಜಾಲ ಬೇದಿಸಿದ ಸಿಸಿಬಿ ಪೊಲೀಸರು

ಇತಿಹಾಸದಲ್ಲೇ ದೊಡ್ಡ ಡ್ರಗ್ಸ್ ಜಾಲ ಬೇದಿಸಿದ ಸಿಸಿಬಿ ಪೊಲೀಸರು   by-ಕೆಂಧೂಳಿ ಮಂಗಳೂರು,ಮಾ.೧೬-ರಾಜ್ಯದಲ್ಲಿ ದೊಡ್ಡ ಪಿಡುಗಾಗಿದ್ದ ಡ್ರಗ್ಸ್ ಜಾಲ ಮಟ್ಟಹಾಕುವಲ್ಲಿ ಪೊಲೀಸರು ಶತಪ್ರಯತ್ನ ಮಾಡಿದ್ದಾರೆ ಈ ನಿಟ್ಟಿನಲ್ಲಿ ಇತಿಹಾಸದಲ್ಲೆ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಬೇದಿಸಿದರುವ ಸಿಸಿಬಿ ಪೊಲೀಸರು ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿ ಅವರಿಂದ ೭೪ ಕೋಟಿ ರೂ ಮೌಲ್ಯದ ೩೭.೫ ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನರ ಪೊಲೀಸ್ ಆಯುಕ್ತ ಅನುಪಮ್…

ಕುಡಿದು ಹೊಡೆದಾಡಿಕೊಂಡು ಮೂವರು ಬಿಹಾರಿ ಕಾರ್ಮಿಕರ ಕೊಲೆ

ಕುಡಿದು ಹೊಡೆದಾಡಿಕೊಂಡು ಮೂವರು ಬಿಹಾರಿ ಕಾರ್ಮಿಕರ ಕೊಲೆ by-ಕೆಂಧೂಳಿ ಆನೇಕಲ್,ಮಾ,೧೬-ಕುಡಿದ ಬಿಹಾರಿ ಕಾರ್ಮಿಕರು ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಸರ್ಜಾಪುರ ಬಾಗಲೂರು ಮುಖ್ಯರಸ್ತೆಯ ತಿಂಡ್ಲು ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್ ಸೇರಿ ಮೂವರು ಕೊಲೆಯಾಗಿದ್ದಾರೆ. ಇನ್ನು ಮೃತ ರಾಧೆಶ್ಯಾಮ್ ತಮ್ಮ ಬಿರಾದಾರ್ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ. ಸೋನು ಮತ್ತು ಅವನ ಸ್ನೇಹಿತ ಕೊಲೆ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲರೂ ಹೊಳಿಯ ಸಂಭ್ರಮದಲ್ಲಿ ಬಣ್ಣ ಎರಚಾಡುತ್ತಿದ್ದರು ಜೊತೆಗೆ ಕುಡಿದಿದ್ದರಿಂದ ಒಬ್ಬರಿಗೊಬ್ಬರು ಗಲಾಟೆ…

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು by-ಕೆಂಧೂಳಿ ಚಾಮರಾಜನಗರ, ಮಾ,01-ಮಲೇಮಾಹಾದೇಶ್ಚರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು…

ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ

ಬಿವೈ ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ by-ಕೆಂಧೂಳಿ ಚಿಕ್ಕಮಗಳೂರು,ಮಾ,೦1-ರಭಸದಿಂದ ಬಂದ ಲಾರಿಯೊಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜು ಗುಜ್ಜಾದ ಘಟನೆ ತಾಲ್ಲೂಕಿನ ಲಕ್ಯಾ ಕ್ರಾಸ್ ಬಳಿ ಜರುಗಿದೆ. ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ…

ರೇಣುಕಾ ಸ್ವಾಮಿ ಕೊಲೆ ಕೇಸು ಮಾರ್ಚ್ 8ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ  ಕೇಸು ಮಾರ್ಚ್ 8ಕ್ಕೆ ಮುಂದೂಡಿಕೆ by-ಕೆಂಧೂಳಿ ಬೆಂಗಳೂರು, ಫೆ,25- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 8 ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು. ನಟ ದರ್ಶನ್ ಹಾಗೂ ಪವಿತ್ರಗೌಡಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಪ್ರಶ್ನಿಸಿ…

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ by-ಕೆಂಧೂಳಿ ಲೈವ್‌ಬ್ಯಾಂಡ್‌ನಿಂದ ಹೊರಬರುತ್ತಿದ್ದ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಬೀಕರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಶೋಕನಗರದ ಗರುಡಮಾಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ ೧ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ…

1 2 3 5
error: Content is protected !!