ಕ್ರೈಮ್
ಉಬರ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ
ಬೆಂಗಳೂರು, ಸೆ,23:ಒಂಟಿ ಹೆಣ್ಣನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಬೇಕಾದ ಉಬರ್ ಚಾಲಕ ಮಹಿಳೆ ಮೇಲೆ ಅತ್ಯಾಚಾರ ಮಾಡಿ ವಿಕೃತ ಮೆರದ ಘಟನೆ ನಗರದ ಮುರುಗೇಶ್ ಪಾಳ್ಯದಲ್ಲಿ ನಡೆದಿದೆ. ಹೆಚ್ಎಸ್ಆರ್ ಲೇಔಟ್ನಿಂದ ಮುರುಗೇಶ್ ಪಾಳ್ಯಕ್ಕೆ ತೆರಳಲು ಯುವತಿ ಉಬರ್ ಕ್ಯಾಬ್ ಬುಕ್ ಮಾಡಿದ್ಲು. ಬುಕ್ ಮಾಡಿದ ಕೆಲವೇ ನಿಮಿಷಗಳಲ್ಲಿ ದೇವರಾಜ್ ಹಸೆರಿನ ಕ್ಯಾಬ್ ಡ್ರೈವರ್ ಪಿಕಪ್ ಪಾಯಿಂಟ್ಗೆ ಬಂದು ಯುವತಿಯನ್ನ ಕರೆದೊಯ್ದಿದ್ದಾನೆ. ಹೆಚ್ಎಸ್ಆರ್ ಲೇಔಟ್ನಿಂದ ಹೊರಟ ಕ್ಯಾಬ್ ಕೇವಲ 20 ನಿಮಿಷದಲ್ಲಿ ಮುರುಗೇಶ್ ಪಾಳ್ಯದಲ್ಲಿರುವ ಯುವತಿ ಮನೆ ಬಳಿಗೆ ಬಂದಿದೆ.…