ಆನೆ ಸೆರೆ, ಪಳಗಿಸುವುದರಲ್ಲಿ ರಾಜ್ಯ ಮಂಚೂಣಿ- ಈಶ್ವರ ಬಿ ಖಂಡ್ರೆ
ಬಿಕ್ಕೋಡು, (ಬೇಲೂರು), ಮೇ 13-ಆನೆ ಸೆರೆ ಹಿಡಿಯುವುದು, ಪಳಗಿಸುವುದರಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತಾತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇಲೂರು ತಾಲೂಕು ಬಿಕ್ಕೋಡಿನಲ್ಲಿಂದು ಆನೆ ಕಾರ್ಯಪಡೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದಿರುವ ಹಿನ್ನೆಲೆಯಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆನೆಗಳ ಸಂಖ್ಯೆಯಲ್ಲಿ ರಾಜ್ಯ ನಂ.1 ಆಗಿದ್ದು, 6395 ಆನೆಗಳಿವೆ. ಹೀಗಾಗಿ ಮಾನವ-ವನ್ಯಜೀವಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ…