ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ
news desk-date 15-01-2025
ರಾಜ್ಕೋಟ್,ನಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿ ದಾಖಲೆ ನಿರ್ಮಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆಟಗಾರ್ತಿಯಾರದ ಸ್ಮೃತಿ ಮಂಧಾನ ಹಾಗೂ ಪ್ರತಿಕಾ ರಾವಲ್ ಅವರ ಸ್ಫೋಟಕ ಶತಕ ಹಾಗೂ ರಿಚಾ ಘೋಷ್ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತಾ ಪಡೆ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಪೇರಿಸಿದೆ.
ಇದು ಏಕದಿನ ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಕಲೆಹಾಕಿರುವ ಅತ್ಯಧಿಕ ರನ್ ಹಾಕಿದೆ.ವಾಸ್ತವವಾಗಿ ಇದೇ ಐರ್ಲೆಂಡ್ ವಿರುದ್ಧ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ 370 ರನ್ ಬಾರಿಸುವ ಮೂಲಕ ಏಕದಿನದಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ದಾಖಲೆಯನ್ನು ಸೃಷ್ಟಿಸಿದ್ದ ಟೀಂ ಇಂಡಿಯಾ ಇದೀಗ ಕೇವಲ ಮೂರು ದಿನಗಳ ಅಂತರದಲ್ಲಿ ತನ್ನದೇ ದಾಖಲೆಯನ್ನು ಪುಡಿಗಟ್ಟಿದೆ.