ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ

Share

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ

by-ಕೆಂಧೂಳಿ
ಬೆಂಗಳೂರು, ಫೆ,17- ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

Girl in a jacket
error: Content is protected !!