ಸಿದ್ದು ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ವರದಿಯಿಂದ ಹಿಂದೆ ಸರಿದರೇ?
ತುರುವನೂರು ಮಂಜುನಾಥ
ಬೆಂಗಳೂರು,ಜ,೧೫- ಜಾತಿಗಣತಿ ಬಗ್ಗೆ ಬಹುನಿರೀಕ್ಷೆ ಇಟ್ಟುಕೊಂಡವರಿಗೆ ಸಿದ್ದರಾಮಯ್ಯ ಮತ್ತೊಮ್ಮೆ ನಿರಾಸೆ ಮಾಡಿದಂತೆ ಕಾಣುತ್ತಿದೆ.ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಈ ಕುರಿತು ಸದ್ಯಕ್ಕೆ ಚರ್ಚೆ ಇಲ್ಲ ಎಂದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ರಾಜಕೀಯವಲದದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿಯೇ ಸಿದ್ದರಾಮಯ್ಯ ಈ ಸ್ಪಷ್ಟನೆ ಯಾವಕಾರಣಕ್ಕೆ ರಾಜಕಾರಣದ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿಯೇ ಎನ್ನುವ ಪ್ರಶ್ನೆಗೆಳುದಿಡೀರ್ ಮುನ್ನಲೆಗೆ ಬಂದಿವೆ,ಅಲ್ಲದೆ ಅಧಿಕಾರ ಹಂಚಿಕೆ ವಿಷಯದಲ್ಲಿಯೂ ಈ ತಂತ್ರ ಉಪಯೋಗಿಸಿಕೊಳ್ಳಲಾಗುತ್ತಿದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ ಇದೇ ತಂತ್ರವನ್ನು ಉಪಯೋಗಿಸಿಕೊಂಡು ಅಧಿಕಾರ ಹಂಚಿಕೆ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ದು ನಡೆಸುತ್ತಿರುವ ಹೊಸ ತಂತ್ರವೇ ಇದು ಎನ್ನುವುದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೂ ಕಾರಣವಾಗಿದೆ.
ನವದಹೆಲ್ಲಿಯಲ್ಲಿ ವರದಿಗರರೊಮದಿಗೆ ಮಾತನಾಡಿರುವ ಅವರು ಸದ್ಯಕ್ಕೆ ಈ ವರದಿ ಮಂಡನೆಯಾಗುವಿದಿಲ್ಲ ಎಂಬ ಸಂದೇಶವನ್ನು ರವಾನಿಸಿದಾರೆ, ಜಾತಿಗಣತಿ ವರದಿಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೆ ಇದ್ದರು ಕೂಡ ಊಹಾಪೋಹಗಳನ್ನೇ ನಂಬಿ ಈ ವಿಚಾರದಲ್ಲಿ ಪರ ವಿರೋಧಗಳ ನಡೆಯುತ್ತಿವೆ ಈ ಹಿನ್ನೆಲೆಯಲ್ಲಿ ಗುರುವಾರ(ನಾಳೆ) ನಡೆಯುವ ಸಚಿವ ಸಂಪುಟದಲ್ಲಿ ಈ ಕುರಿತು ಜಾತಿ ಗಣತಿ ವರದಿಯನ್ನು ಮಂಡಿಸಲಾಗವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಈ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸುವ ಮೂಲಕ ಯೂಟರ್ನ್ ಹೊಡೆದಂತೆ ಕಾಣುತ್ತಿದೆ.
ಈ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಜಾತಿ ಗಣತಿ ವರದಿ ಜಾರಿಗೆ ವಿಪಕ್ಷಗಳು ಮಾತ್ರವಲ್ಲದೆ ಸ್ವಪಕ್ಷದಿಂದಲೂ ವಿರೋಧ ಕೇಳಿಬಂದಿದೆ. ಈ ಹಿನ್ನೆಲೆ ವರದಿ ಮಂಡನೆಯನ್ನು ಮತ್ತೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ, ವೈಯಕ್ತಿಕವಾಗಿ ನನಗಾಗಲಿ ಯಾವುದೇ ತಕರಾರಿಲ್ಲ, ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ’ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದಿದ್ದಾರೆ
ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೆದ್ದು ಬರಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ. ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಗೆ ಕೆಲವು ಪ್ರಶ್ನೆಗಳನ್ನ ಸಹ ಕೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, ೨೦೧೮ರಲ್ಲೇ ಕಾಂತರಾಜು ವರದಿಯನ್ನ ಯಾಕೆ ಜಾರಿ ಮಾಡಲಿಲ್ಲ? ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನು ಈಗ ಮುನ್ನೆಲೆಗೆ ತರುವ ತರಾತುರಿ ಏಕೆ? ಎಂದು ಪ್ರಶ್ನಿಸಿದ್ದಾರೆ. ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ. ಹೀಗಿರುವಾಗ ಕಳೆದ ೨೦ ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ? ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.