ಬೆಂಗಳೂರು, ಜೂನ್ 19: ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ಮಾಡುವ ಸಂಬಂಧ ಶನಿವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ ಈ ವಿಷಯ ತಿಳಿದ್ದಾರೆ.
ಶೇ.5% ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಓಡಾಟಕ್ಕೂ ಸೋಮವಾರದಿಂದ ಅವಕಾಶ ಮಾಡಿಕೊಡಲಾಗಿದೆ. ಹೋಟೆಲ್, ರೆಸ್ಟೊರೆಂಟ್‌ಗಳು ಸಂಜೆ 5ರವರೆಗೂ ಕಾರ್ಯನಿರ್ವಹಿಸಬಹುದು ಎಂದು ಹೇಳಿದ್ದಾರೆ. ಎಂದಿನಂತೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮುಂದುವರೆಸಲಾಗುವುದು ಎಂದು ಹೇಳಿದ್ದಾರೆ.
ತಾಂತ್ರಿಕ ಸಮಿತಿ ಸಲಹೆ ಮೇರೆಗೆ ಚರ್ಚಿಸಿ ಈ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಲಾಗಿದೆ. ಉಳಿದ ಹದಿಮೂರು ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುವುದು. ಮೈಸೂರಿನಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.