ಬಿಎಸ್‌ವೈ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಬೊಮ್ಮಾಯಿ

Share

ಬೆಂಗಳೂರು, ಸೆ.೫:ಬರುವ ಏಳರಂದು ಮುಖ್ಯಮಂತ್ರಿ ಬಸವಾರಾಜ್ ಬೊಮ್ಮಾಯಿ ದಹೆಲಿಗೆ ತೆರಳಿ ಮುಖಂಡರನ್ನು ಭೇಟಿ ಮಾಡುವ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದರು.

ಈ ಬಾರಿ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಕೆಲವು ಪ್ರಮುಖ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ, ನಿಗಮ-ಮಂಡಳಿಗಳಿಗೆ ನೇಮಕಾತಿ,ಕೆಲವು ಸಚಿವರ ಖಾತೆ ಬದಲಾವಣೆಯಂತಹ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.

ಈ ಹಿಂದೆ ಯಡಿಯೂರಪ್ಪ ಅಧಿಕಾರಾವಯಲ್ಲಿ ನೇಮಕಗೊಂಡಿದ್ದ ನಿಗಮ-ಮಂಡಳಿ ಅಧ್ಯಕ್ಷರ ಬದಲಾವಣೆ ಮಾಡಿ ಹೊಸದಾಗಿ ನೇಮಿಸುವಂತೆ ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.ಬಿಎಸ್‌ವೈ ಅವಯಲ್ಲಿ ನೇಮಕಗೊಂಡಿದ್ದ ಬಹುತೇಕ ನಿಗಮ-ಮಂಡಳಿ ಅಧ್ಯಕ್ಷರು ಪ್ರಮುಖವಾಗಿ ಅವರ ಬೆಂಬಲಿಗರೇ ಆಗಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಪಕ್ಷದ ನಿಷ್ಠಾವಂತರು, ಕಾರ್ಯಕರ್ತರನ್ನು ಕಡೆಗಣಿಸಿ ತಮ್ಮ ಹಿಂಬಾಲಕರು ಹಾಗೂ ಜೈಕಾರ ಹಾಕುವವರನ್ನು ಆಯಾಕಟ್ಟಿನ ಪ್ರಮುಖ ನಿಗಮ-ಮಂಡಳಿಗೆ ನೇಮಕ ಮಾಡಿದ್ದರು ಎಂಬ ಅಸಮಾಧಾನವೂ ವ್ಯಕ್ತವಾಗಿತ್ತು. ಇದು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಕಣ್ಣು ಕೆಂಪಾಗುವಂತೆ ಮಾಡಿತ್ತು. ಯಾವಾಗ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬೊಮ್ಮಾಯಿ ಅವರಿಗೆ ಅಧಿಕಾರ ಬಂದಿತೋ ಆಗ ಹಿಂದಿನ ಅವಯಲ್ಲಿ ನೇಮಕಗೊಂಡಿದ್ದ ನಿಗಮ-ಮಂಡಳಿ ಅಧ್ಯಕ್ಷರನ್ನು ಬದಲಿಸಬೇಕೆಂಬ ಕೂಗು ಹೆಚ್ಚಾಯಿತು.
ಅಲ್ಲದೆ, ಸಂಪುಟದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕೆಲವು ಶಾಸಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ನಿಗಮ-ಮಂಡಳಿಗೆ ನೇಮಕ ಮಾಡುವ ಮೂಲಕ ಅಸಮಾಧಾನ ಶಮನಗೊಳಿಸುವ ಸೂಚನೆ ನೀಡಲಾಗಿದೆ.

ಬಿಎಸ್‌ವೈ ಅವಧಿಯಲ್ಲಿ ನೇಮಕವಾಗಿದ್ದ ನಿಗಮ-ಮಂಡಳಿ ಅಧ್ಯಕ್ಷರನ್ನು ಬದಲಿಸಿದರೆ ಅವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಅಳುಕು ಸಿಎಂ ಬೊಮ್ಮಾಯಿ ಅವರಿಗೆ ಇದೆ. ಹಾಗಾಗಿ ಇಂದು ಕಾವೇರಿಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಇದೊಂದು ಸೌಹಾರ್ದತೆಯ ಭೇಟಿ ನೀಡಿ ಎಂದು ಹೇಳಲಾಗಿದೆಯಾದರೂ ದೆಹಲಿ ಪ್ರವಾಸದ ಹಿನ್ನೆಲೆಯಲ್ಲಿ ಹಾಲಿ ಮತ್ತು ಮಾಜಿ ಸಿಎಂಗಳ ಭೇಟಿ ಸಹಜವಾಗಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುವಂತೆ ಮಾಡಿದೆ.

 

Girl in a jacket
error: Content is protected !!