ಶ್ರೀನಗರ ಏ,22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ 26ಪ್ರವಾಸಿಗರು ಸಾವನ್ನಪ್ಪಿದ್ದಸರೆ ಇನ್ನು ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಚುರುಕುಗೊಂಡ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 2-3 ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ವರ್ಷಗಳಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಇದೇ ಮೊದಲು ಎಂಬುದು ಗಮನಾರ್ಹ. ಕಾಡಿನಿಂದ ಬಂದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಅಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಪ್ರವಾಸಿಗರು ತಮ್ಮ ಪ್ರಾಣ ಉಳಿಸಿಕೊಳ್ಳಲು ಎಲ್ಲಂದರಲ್ಲಿ ಓಡಲು ಪ್ರಾರಂಭಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ತಕ್ಷಣ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಆರಂಭಿಸಿದರು. ಗುಡ್ಡಗಾಡು ಪ್ರದೇಶಗಳಲ್ಲಿ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಮರನಾಥ ಯಾತ್ರೆಗೂ ಮುನ್ನ ಭಯೋತ್ಪಾದಕ ದಾಳಿ
ಅಮರನಾಥ ಯಾತ್ರೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿರುವಾಗಲೇ ಈ ಘಟನೆ ಬೆಳಕಿಗೆ ಬಂದಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಈ ಪವಿತ್ರ ಪ್ರಯಾಣದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಪ್ರಯಾಣ ಜುಲೈ 3 ರಿಂದ ಪ್ರಾರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರವಾಸಿಗರ ಮೇಲಿನ ಈ ದಾಳಿ ಭಾರೀ ಆತಂಕವನ್ನು ಸೃಷ್ಟಿ ಮಾಡಿದೆ.
ಈ ವರ್ಷದ ಅಮರನಾಥ ಯಾತ್ರೆಗೆ ದೇಶಾದ್ಯಂತ ನೋಂದಣಿ ನಡೆಯುತ್ತಿರುವ ಸಮಯದಲ್ಲಿ ಈ ದಾಳಿ ನಡೆದಿದೆ. 38 ದಿನಗಳ ತೀರ್ಥಯಾತ್ರೆ ಜುಲೈ 3ರಿಂದ ಎರಡು ಮಾರ್ಗಗಳಿಂದ ಪ್ರಾರಂಭವಾಗಲಿದೆ. ಒಂದು ಅನಂತನಾಗ್ ಜಿಲ್ಲೆಯ 48 ಕಿಮೀ ಪಹಲ್ಗಾಮ್ ಮಾರ್ಗ ಮತ್ತು ಎರೆಡು ಗಂಡೇರ್ಬಲ್ ಜಿಲ್ಲೆಯ ಇನ್ನೊಂದು 14 ಕಿಮೀ ಬಾಲ್ಟಾಲ್ ಮಾರ್ಗ, ಇದು ಕಡಿಮೆ ಆದರೆ ಕಡಿದಾದ ಮಾರ್ಗವಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಅವರು ಜಮ್ಮು ವಿಭಾಗದ ಮೇಲೆ ವಿಶೇಷ ಗಮನ ಹರಿಸಿ ಭಯೋತ್ಪಾದನೆಯ ಸಂಪೂರ್ಣ ನಿರ್ಮೂಲನೆಗೆ ಆದೇಶಗಳನ್ನು ನೀಡಿದರು.
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರವಾಸಿಗರ ಮೇಲಿನ ದಾಳಿಯನ್ನು ಖಂಡಿಸಿದರು. “ಇಂತಹ ಹಿಂಸಾಚಾರ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ಖಂಡಿಸಬೇಕು” ಎಂದು ಹೇಳಿದರು. “ಐತಿಹಾಸಿಕವಾಗಿ ಕಾಶ್ಮೀರವು ಪ್ರವಾಸಿಗರನ್ನು ಸ್ವಾಗತಿಸುತ್ತದೆ. ಈ ಅಪರೂಪದ ಘಟನೆ ಕಳವಳಕಾರಿಯಾಗಿದೆ. ಅಪರಾಧಿಗಳನ್ನು ಬಂಧಿಸಲು ಮತ್ತು ಸಂಭಾವ್ಯ ಭದ್ರತಾ ಲೋಪಗಳನ್ನು ಪರಿಶೀಲಿಸಲು ಸಮಗ್ರ ತನಿಖೆ ಅಗತ್ಯವಿದೆ. ಜೊತೆಗೆ ಭವಿಷ್ಯದ ದಾಳಿಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದರು.