ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ
by ಕೆಂಧೂಳಿ
ಬೆಂಗಳೂರು, ಜ,24-2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿದರು.
ಸಚಿವರಾದ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಕಪ್ ಪೋಸ್ಟರ್ ಬಿಡುಗಡೆ
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಶ್ರೀ ರಾಘವೇಂದ್ರ ಯೂತ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್ 03, ಸಿದ್ದರಾಮಯ್ಯ ಕಪ್-2025 ರ ಪೋಸ್ಟರ್ ಅನ್ನು ಗೃಹ ಕಚೇರಿ ಕೃಷ್ಣದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಪ್ರಸನ್ನಕುಮಾರ್ ಎಸ್.ಎಸ್, ನಿವೃತ್ತ ಐ.ಎಸ್.ಎಸ್ ಅಧಿಕಾರಿ ರಾಮೇಗೌಡ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ನಿರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಹರೀಶ್, ಮಂಜು, ಮಂಜುನಾಥ್, ದಿವಾಕರ್, ವಿಜಯ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.