ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?

Share

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?

 by-ಕೆಂಧೂಳಿ

ದುಬೈ,ಫೆ,೨೪- ಚಾಂಪಿಯನ್ಸ್ ಟ್ರೋಪಿಯಯಲ್ಲಿ ಭಾರತೀಯ ಎ ಗುಂಪಿನ ತಂಡ ಭಾನುವಾರ ಬದ್ಧ ವೈರಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಗುರಿಯಲ್ಲಿದೆ .

ಇದೇ ವೇಳೆಪಾಇಸ್ತಾನ ತಂಡದ ಮೊಹಮದ್ ರಿಜ್ವಾನ್ ನೃತೃತ್ವದ ತಂಡ ಟೂರ್ನಿಯಿಂದ ಹೊಡಗುಳಿಯುವದನ್ನು ತಪ್ಪಿಸಕೊಳ್ಳಬೇಕಾದ ಒತ್ತಡದಲ್ಲಿ ಹೀಗಾಗಿ ಈ ಎರಡು ಸಂಪ್ರದಾಯ ತಂಡಗಳ ಆಟ ಇಂದು ಅತ್ಯಂತ ರೋಚಕವಾಗಿರುತ್ತದೆ

ಬಾಂಗ್ಲಾದೇಶ ಎದುರು ಆರು ವಿಕೆಟ್‌ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಉತ್ತಮ ಸ್ಥಿತಿಯಲ್ಲಿದ್ದರೆ, ನ್ಯೂಜಿಲೆಂಡ್ ವಿರುದ್ಧ ೬೦ ರನ್‌ಗಳಿಂದ ಸೋತಿರುವ ಪಾಕಿಸ್ತಾನ, ‘ಮಾಡು ಇಲ್ಲವೇ ಮಡಿ’ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ಪಂದ್ಯ ತೀವ್ರ ಹೈವೋಲ್ಟೇಜ್ ಪಡೆಯುವ ನಿರೀಕ್ಷೆಯಿದ್ದು, ಅಭಿಮಾನಿಗಳಿಗೆ ರಸದೌತಣ ಉಣಬಡಿಸುವ ಸಾಧ್ಯತೆ ಇದೆ. ಉಪಖಂಡದ ಎದುರಾಳಿಗಳಾದ ಭಾರತ-ಪಾಕ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯದಾಗಿ ೨೦೧೭ರ ಫೈನಲ್‌ನಲ್ಲಿ ಎದುರಾಗಿದ್ದವು. ಆ ಪಂದ್ಯದಲ್ಲಿ ಪಾಕಿಸ್ತಾನ ೧೮೦ ರನ್‌ಗಳಿಂದ ಭಾರತ ತಂಡವನ್ನು ಸೋಲಿಸಿ ಮೊದಲ ಸಲ ಚಾಂಪಿಯನ್ ಆಗಿತ್ತು. ಈಗ ರಿಜ್ವಾನ್ ಮತ್ತು ತಂಡ ಆ ಜಯದ ಸ್ಫೂರ್ತಿ ಪಡೆಯಲು ಹಾತೊರೆಯುತ್ತಿದೆ. ಆದರೆ ಎಲ್ಲಾ ವಿಭಾಗಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳಬೇಕಾದ ಅಗತ್ಯವಿದೆ.

ಸದಾ ತೀವ್ರತೆಯನ್ನುಂಟು ಮಾಡುವ ಉಭಯ ರಾಷ್ಟ್ರಗಳ ನಡುವಿನ ಪಂದ್ಯವು ದುಬೈನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳಲ್ಲಿ ಶಾಂತತೆ ನೆಲೆಯೂರಿದೆ. ಕರಾಚಿಯಲ್ಲಿ ಕಿವೀಸ್ ವಿರುದ್ಧ ಸೋತ ನಂತರ ದುಬೈಗೆ ಆಗಮಿಸಿರುವ ಪಾಕ್, ಸ್ಥಳೀಯ ವಾತಾವರಣಕ್ಕೆ ಈಗಾಗಲೇ ಹೊಂದಿಕೊಂಡಿದೆ.

ಬಾಂಗ್ಲಾದೇಶ ವಿರುದ್ಧ ೪೧ ರನ್ ಗಳಿಸಿದ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ, ಫಾರ್ಮ್ ಕಂಡುಕೊಂಡಿರುವುದನ್ನು ಬಿಂಬಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ೮ನೇ ಶತಕ ಗಳಿಸಿ ಭಾರತ ತಂಡದ ಗೆಲುವನ್ನು ಸುಲಭಗೊಳಿಸಿದ ಶುಭಮನ್ ಗಿಲ್, ಮತ್ತೊಂದು ಸೊಬಗಿನ ಆಟಕ್ಕೆ ಸಜ್ಜುಗೊಂಡಿದ್ದಾರೆ.

Girl in a jacket
error: Content is protected !!