ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ

Share

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ
by-ಕೆಂಧೂಳಿ
ಬೆಂಗಳೂರು, ಮಾ,೦೨-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ ವಿಚಾರ ಈಗ ಎಲ್ಲಡೆ ತೀವ್ರ ವಿರೋಧವಾಗುತ್ತಿದೆ ಅದರಲ್ಲೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ವಿಪಕ್ಷ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ವಾಗ್ದಾಳಿ ಮಾಡಿದರು.
ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದರು.

Advatisement

ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ. ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ಶನಿವಾರ ಬೆಂಗಳೂರಿನಲ್ಲಿ ನಡೆದ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣದ ವೇಳೆ ” ಮೇಕೆದಾಟು ಪಾದಯಾತ್ರೆಗೆ ಖುದ್ದು ಆಹ್ವಾನ ಕೊಟ್ಟಿದ್ದರೂ ನಟ ದುನಿಯಾ ವಿಜಯ್, ಸಾಧು ಕೋಕಿಲಾ ಇಬ್ಬರನ್ನೂ ಹೊರತುಪಡಿಸಿ ಉಳಿದ ನಟ, ನಟಿಯರು ದೂರ ಉಳಿದಿದ್ದರು” ಎಂದು ಅಸಮಾಧಾನ ಹೊರಹಾಕಿದ್ದರು.
“ನಿಮ್ಮ ಚಲನ ವಲನ, ಹಾವ ಭಾವ ಎಲ್ಲವೂ ನಮಗೆ ಅರ್ಥವಾಗುತ್ತದೆ, ಎಲ್ಲವನ್ನು ಗಮನಿಸುತ್ತಿರುತ್ತೇನೆ. ಅಷ್ಟು ಮಾತ್ರವೇ ಅಲ್ಲದೆ ಸಿನಿಮಾ ರಂಗದವರ ಮೇಲೆ ವಿಶೇಷವಾಗಿ ನಮ್ಮ ನಟ, ನಟಿಯರ ಮೇಲೆ ನನಗೆ ಬಹಳ ಸಿಟ್ಟಿದೆ. ಯಾರು ಯಾರಿಗೆ ಎಲ್ಲೆಲ್ಲಿ ನಟ್ಟು ಬೋಲ್ಟು ಟೈಟ್ ಹೇಗೆ ಮಾಡಬೇಕು ಎಂಬುದು ನನಗೂ ಗೊತ್ತಿದೆ. ಇದನ್ನು ಎಚ್ಚರಿಕೆ ಎಂದಾದರೂ ತೆಗೆದುಕೊಳ್ಳಿ, ಮನವಿ ಎಂದಾದರೂ ತೆಗೆದುಕೊಳ್ಳಿ” ಎಂದು ನೇರವಾಗಿಯೇ ಸಿಟ್ಟು ಹೊರಹಾಕಿದ್ದರು.

Girl in a jacket
error: Content is protected !!